Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ “ಉತ್ತಮ ಆಡಳಿತಾತ್ಮಕ ಸಹಕಾರಿ ಸಂಘ” ವಿಶೇಷ ಪ್ರಶಸ್ತಿ
    News

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ “ಉತ್ತಮ ಆಡಳಿತಾತ್ಮಕ ಸಹಕಾರಿ ಸಂಘ” ವಿಶೇಷ ಪ್ರಶಸ್ತಿ

    adminBy adminNovember 17, 2025

    ಮಂಗಳೂರು: ಅಖಿಲ ಭಾರತ ಸಹಕಾರ ಸಪ್ತಾಹ 2025ರ ಪ್ರಯುಕ್ತ ಭಾನುವಾರ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಬೆಂಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಇದರ ನೇತೃತ್ವದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್, ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಮಂಗಳೂರು, ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ ಮಂಗಳೂರು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಎಲ್ಲಾ ಕೃಷಿ ಪತ್ತಿನ ಸಹಕಾರ ಸಂಘಗಳು, ಪಟ್ಟಣ ಸಹಕಾರ ಬ್ಯಾಂಕ್‌ಗಳು, ಸೌಹಾರ್ದ ಸಹಕಾರ ಸಂಘಗಳು, ಎಲ್ಲಾ ವಿಧದ ಸಹಕಾರ ಸಂಘಗಳು ಹಾಗೂ ಸಹಕಾರ ಇಲಾಖೆಯ ಸಹಯೋಗದೊಂದಿಗೆ ಮಂಗಳೂರಿನಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದ ಸಹಕಾರಿ ಸಪ್ತಾಹದ ಅಂಗವಾಗಿ ಉತ್ತಮ ಸಹಕಾರ ಸಂಘಗಳಿಗೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಜರುಗಿತು.

    https://chat.whatsapp.com/JVAtKKe2M19AFO3W5629ZS?mode=ems_copy_t
    ಈ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲದ ಅಧ್ಯಕ್ಷರಾದ ಜಿ.ಟಿ.ದೇವೇಗೌಡ ಅವರು, ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರ ಗೌರವ ಉಪಸ್ಥಿತಿಯಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ಸಹಕಾರ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಪುರಸ್ಕರಿಸಿ 2025ನೇ ಸಾಲಿನ “ಉತ್ತಮ ಆಡಳಿತಾತ್ಮಕ ಸಹಕಾರಿ ಸಂಘ” ಪ್ರಶಸ್ತಿಯನ್ನು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅವರಿಗೆ ನೀಡಿ ಗೌರವಿಸಿದರು.
    ಈ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ ಖಾದರ್, ಮಂಗಳೂರು ದಕ್ಷಿಣ ಶಾಸಕರಾದ ವೇದವ್ಯಾಸ ಕಾಮತ್, ಉಡುಪಿ ಶಾಸಕರಾದ ಯಶ್‌ಪಾಲ್ ಎ.ಸುವರ್ಣ, ವಿಧಾನ ಪರಿಷತ್‌ನ ಸದಸ್ಯರಾದ ಮಂಜುನಾಥ ಭಂಡಾರಿ, ಐವನ್ ಡಿಸೋಜ, ಕಿಶೋರ್ ಕುಮಾರ್ ಬೊಟ್ಯಾಡಿ, ನಬಾರ್ಡ್ ಮುಖ್ಯ ಮಹಾಪ್ರಬಂಧಕಾರದ ಡಾ. ಸುರೇಂದ್ರ ಬಾಬು, ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿ. ಮಂಗಳೂರು ಇದರ ಅಧ್ಯಕ್ಷರಾದ ರವಿರಾಜ್ ಹೆಗ್ಡೆ, ರಾಜ್ಯ ಸಹಕಾರ ಸಂಘಗಳ ನಿಬಂಧಕರಾದ ಟಿ.ಎಚ್. ಎಂ. ಕುಮಾರ್, ಮೈಸೂರು ಪ್ರಾಂತ ಸಹಕಾರ ಸಂಘಗಳ ಜಂಟಿ ನಿಬಂಧಕರಾದ ಪ್ರಸಾದ್ ರೆಡ್ಡಿ ಪಿ., ದ.ಕ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕರಾದ ರಮೇಶ್ ಎಚ್.ಎನ್., ಉಡುಪಿ ಸಹಕಾರ ಸಂಘಗಳ ಉಪನಿಬಂಧಕಿಯಾದ ಲಾವಣ್ಯಾ ಕೆ.ಆರ್. ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಾದ ಬಿ.ಜಯಕರ ಶೆಟ್ಟಿ ಇಂದ್ರಾಳಿ, ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕರಾದ ಐಕಳಬಾವ ದೇವಿಪ್ರಸಾದ ಶೆಟ್ಟಿ, ವ್ಯವಸ್ಥಾಪಕ ನಿರ್ದೇಶಕರಾದ ಕೆ.ಎಸ್ ನವೀನ್, ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ವ್ಯವಸ್ಥಾಪಕ ನಿರ್ದೇಶಕರಾದ ಲಿಂಗರಾಜ್,
    ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಉಪಾಧ್ಯಕ್ಷರಾದ ವಿನಯ್ ಕುಮಾರ್ ಸೂರಿಂಜೆ, ನಿರ್ದೇಶಕರಾದ ಟಿ.ಜಿ ರಾಜರಾಮ್ ಭಟ್, ಭಾಸ್ಕರ್ ಎಸ್. ಕೋಟ್ಯಾನ್, ವಾದಿರಾಜ ಶೆಟ್ಟಿ, ಎಸ್.ಬಿ. ಜಯರಾಮ ರೈ, ಅಶೋಕ್ ಕುಮಾರ್ ಶೆಟ್ಟಿ, ಎಸ್.ಬಿ. ಜಯರಾಮ ರೈ, ಶ್ರೀ ಸದಾಶಿವ ಉಳ್ಳಾಲ್, ಎಮ್. ಮಹೇಶ್ ಹೆಗ್ಡೆ, ಮೋನಪ್ಪ ಶೆಟ್ಟಿ, ಜೈರಾಜ್ ಬಿ. ರೈ, ಕುಶಾಲಪ್ಪ ಗೌಡ, ಎಸ್.ಎನ್.ಮನ್ಮಥ, ರಾಜೇಶ್ ರಾವ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ. ಗೋಪಾಲಕೃಷ್ಣ ಭಟ್, ನಬಾರ್ಡ್ ಡಿಡಿಎಂ ಸಂಗೀತಾ ಕರ್ತಾ ಮೊದಲಾದವರು ಉಪಸ್ಥಿತರಿದ್ದರು.
    ಈ ಸಂದರ್ಭದಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನಿರ್ದೇಶಕರಾದ ಆನಂದ ಎಸ್. ಕೊಂಡಾಣ, ರಮಾನಾಥ್ ಸನಿಲ್, ಮುದ್ದು ಮೂಡುಬೆಳ್ಳೆ, ಗೋಪಾಲ್ ಎಮ್, ಉಮಾವತಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್ ಭಾಗವಹಿಸಿದ್ದರು.
    ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಡಾ.ಎಮ್.ಎನ್. ರಾಜೇಂದ್ರ ಕುಮಾರ್ ಸ್ವಾಗತಿಸಿದರು. ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಾದ ಶಶಿಕುಮಾರ್ ರೈ ಬಾಲ್ಯೊಟ್ಟು ವಂದಿಸಿದರು. ಶ್ರೀ ನಿತೇಶ್ ಶೆಟ್ಟಿ ಎಕ್ಕಾರು ನಿರೂಪಿಸಿದರು.

    ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    Atmashakthi Vividhoddesha Sahakari Sangha SCDCC Bank Uttama Adalitatmaka Sahakari Sangha
    Previous Articleಗಂಗೊಳ್ಳಿ ಟೌನ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಗೆ ಉತ್ತಮ ಸಹಕಾರಿ ಸಂಘ ಪ್ರಶಸ್ತಿ
    Next Article ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಚಿತ್ತರಂಜನ್ ಬೋಳಾರ್‌ಗೆ ತೌಳವ ಸಹಕಾರಿ ಮಾಣಿಕ್ಯ ಪ್ರಶಸ್ತಿ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.