Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಚಿತ್ತರಂಜನ್ ಬೋಳಾರ್‌ಗೆ ತೌಳವ ಸಹಕಾರಿ ಮಾಣಿಕ್ಯ ಪ್ರಶಸ್ತಿ
    News

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಚಿತ್ತರಂಜನ್ ಬೋಳಾರ್‌ಗೆ ತೌಳವ ಸಹಕಾರಿ ಮಾಣಿಕ್ಯ ಪ್ರಶಸ್ತಿ

    adminBy adminNovember 18, 2025

    ಮಂಗಳೂರು: ಸಹಕಾರಿ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಸಾಧಕರಿಗೆ ತುಳುನಾಡ ರಕ್ಷಣಾ ವೇದಿಕೆ ಹಾಗೂ ತುಳುನಾಡ ಸೂರ್ಯ ಪತ್ರಿಕೆ ವತಿಯಿಂದ ಸಹಕಾರ ಸಪ್ತಾಹ-೨೦೨೫ರ ಅಂಗವಾಗಿ ಪ್ರಶಸ್ತಿ ಪ್ರದಾನ ಸಮಾರಂಭತುಳುನಾಡ ರಕ್ಷಣಾ ವೇದಿಕೆ ಸ್ಥಾಪಕಾಧ್ಯಕ್ಷ ಯೋಗಿಶ್ ಶೆಟ್ಟಿ ಜಪ್ಪು ಅಧ್ಯಕ್ಷತೆಯಲ್ಲಿ ಮಂಗಳೂರಿನ ಉರ್ವಸ್ಟೋರ್‌ನ ತುಳುಭವನದ ಸಿರಿ ಚಾವಡಿಯಲ್ಲಿ ಭಾನುವಾರ ಜರುಗಿತು.

    https://chat.whatsapp.com/JVAtKKe2M19AFO3W5629ZS?mode=ems_copy_t
    ಸಮಾರಂಭದಲ್ಲಿ ಮೂಡುಬಿದಿರೆ ಜೈನ ಮಠದ ಜಗದ್ಗುರು ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ದಿವ್ಯ ಸಾನ್ನಿದ್ಯ ವಹಿಸಿದ್ದರು. ಮಾಡೂರಿನ ಶಿವ ದುರ್ಗಾಂಭ ಮಠದ ಶ್ರೀ ಶಿವಯೋಗಿ ದುರ್ಗಾನಂದ ಸ್ವಾಮೀಜಿ ಶುಭ ಹಾರೈಸಿದರು. ಮಾಜಿ ಸಚಿವರಾದ ಕೃಷ್ಣ ಪಾಲೆಮಾರ್ ಹಾಗೂ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ವೇದವ್ಯಾಸ್ ಕಾಮತ್ ಸಹಕಾರ ಕ್ಷೇತ್ರದಲ್ಲಿ ಅನನ್ಯ ಸಾಧನೆಗೈದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ ಇವರಿಗೆ “ತೌಳವ ಸಹಕಾರಿ ಮಾಣಿಕ್ಯ ಪ್ರಶಸ್ತಿ” ನೀಡಿ ಗೌರವಿಸಿದರು.
    ಅದಾನಿ ಗ್ರೂಪ್‌ನ ಅಧ್ಯಕ್ಷರು ಮತ್ತು ಕಾರ್ಯನಿರ್ವಾಹಕ ನಿರ್ದೇಶಕರಾದ ಕಿಶೋರ್ ಆಳ್ವ, ಅಖಿಲ ಭಾರತ ತುಳು ಒಕ್ಕೂಟದ ಅಧ್ಯಕ್ಷರಾದ ಎ.ಸಿ. ಭಂಡಾರಿ, ಧರ್ಮವಲೋಕನದ ಗಡಿಕಾರರು ಮತ್ತು ಅಧ್ಯಕ್ಷರಾದ ದೋಣಿಂಜೆ ಗುತ್ತು ಪ್ರಮೋದ್ ಕುಮಾರ್ ರೈ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಅಧ್ಯಯನ ಮತ್ತು ಅಭಿವೃದ್ಧಿ ಟ್ರಸ್ಟ್‌ ಅಧ್ಯಕ್ಷರಾದ ಮೋಹನ೦ಗಯ್ಯ ಸ್ವಾಮಿ, ಕೆದಂಬಾಡಿ ರಾಮಯ್ಯ ಗೌಡ ಸ್ಮಾರಕ ಸಮಿತಿಯ ಅಧ್ಯಕ್ಷರಾದ ಕಿರಣ್ ಬುಡ್ಲೆಗುತ್ತು, ವಕೀಲರ ಘಟಕ ತುಳುನಾಡ ರಕ್ಷಣಾ ವೇದಿಕೆ ಅಧ್ಯಕ್ಷರಾದ ರಾಘವೇಂದ್ರ ರಾವ್, ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲೆಯ ಜಿಲ್ಲಾಧ್ಯಕ್ಷರಾದ ಫ್ರ‍್ಯಾಂಕಿ ಡಿಸೋಜ ಕೊಳಲಗಿರಿ ಮತ್ತಿತ್ತರರು ಹಾಜರಿದ್ದರು. ಪ್ರಧಾನ ಕಾರ್ಯದರ್ಶಿ ಕೆ.ವಿವೇಕಾನಂದ ರಾವ್ ಸೇರಿದಂತೆ ತುಳುನಾಡ ರಕ್ಷಣಾ ವೇದಿಕೆ ಪ್ರಮುಖ ಸದಸ್ಯರು ಸಭೆಯಲ್ಲಿ ಭಾಗವಹಿಸಿದ್ದರು. ಪ್ರಶಾಂತ್ ಭಟ್ ಕಡಬ ಸ್ವಾಗತಿಸಿ, ಕ್ಲೀಟಸ್ ಲೋಬೊ ವಂದನಾರ್ಪಣೆಗೈದರು. ಮಂಜುಳಾ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    Atmashakthi Soudha Atmashakthi Vividhoddesha Sahakari Sangha Toulava Sahakari Manikya Tulunada Rakshana Vedike Yogeesh Shetty Jeppu
    Previous Articleಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ “ಉತ್ತಮ ಆಡಳಿತಾತ್ಮಕ ಸಹಕಾರಿ ಸಂಘ” ವಿಶೇಷ ಪ್ರಶಸ್ತಿ
    Next Article ವಂದೇಮಾತರಂ ಸೌಹಾರ್ದ ಸಹಕಾರಿಯಲ್ಲಿ ಗ್ರಾಹಕರ ಸಮಾವೇಶ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.