ಮೂಡುಬಿದಿರೆ: ಎಲ್ಲರ ಸಹಕಾರದೊಂದಿಗೆ ನಡೆಯುತ್ತಿರುವ ಆರೋಗ್ಯ ಶಿಬಿರ ಯಶಸ್ವಿಯಾಗಿ ನಡೆಯಲಿ ಎಂದು ಪಿ.ಕೆ.ಥೋಮಸ್ ಮೂಡುಬಿದಿರೆ ಹೇಳಿದರು.
https://chat.whatsapp.com/JVAtKKe2M19AFO3W5629ZS?mode=ems_copy_t
ಇವರು ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ ಮೂಡುಬಿದಿರೆ ಶಾಖೆ, ಮೌಂಟ್ ರೋಜರಿ ಆಸ್ಪತ್ರೆ ಅಲಂಗಾರು ಮತ್ತು ಲಯನ್ಸ್ ಕ್ಲಬ್ ಅಲಂಗಾರು ಇವರ ಜಂಟಿ ಆಶ್ರಯದಲ್ಲಿ ಸಹಕಾರ ಸಪ್ತಾಹ ಅಂಗವಾಗಿ ಆಯೋಜಿಸಿದ ಉಚಿತ ವೈದ್ಯಕೀಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.
ಪ್ರಿಯದರ್ಶಿನಿ ಸೊಸೈಟಿಯ ಮುಖ್ಯಕಾರ್ಯನಿರ್ವಹಣಾಧಿಕಾರಿ ಸುದರ್ಶನ್ ಮಾತನಾಡಿ, ನಮ್ಮ ಗ್ರಾಹಕರ ಸಹಕಾರದಿಂದ ಸಂಸ್ಥೆಯು ಉತ್ತಮವಾಗಿ ಅಭಿವೃದ್ಧಿ ಹೊಂದುತ್ತಿದ್ದು, ಇದರ ಪರಿಣಾಮವಾಗಿ ಸಂಸ್ಥೆಯ ಸರ್ವಾಂಗೀಣ ಸಾಧನೆಯನ್ನು ಪರಿಗಣಿಸಿ ಅಖಿಲ ಭಾರತ ಸಹಕಾರ ಸಪ್ತಾಹದಲ್ಲಿ ಸಂಸ್ಥೆಯು ದ.ಕ ಜಿಲ್ಲೆಯ “ಉತ್ತಮ ಪತ್ತಿನ ಸಹಕಾರ
ಸಂಘ” ಪ್ರಶಸ್ತಿಯನ್ನು ಪಡೆದುಕೊಂಡಿದೆ. ಗ್ರಾಹಕರ ಹಾಗೂ ಸಮಾಜದಲ್ಲಿ ಆರ್ಥಿಕವಾಗಿ ಹಿಂದುಳಿದವರ ಪರವಾಗಿ ಸದಾ ಸಮಾಜಮುಖಿ ಸೇವೆಯಲ್ಲಿ ವಿವಿಧ ಸಂಸ್ಥೆಗಳೊಂದಿಗೆ ಸದಾ ಕೈಜೋಡಿಸಲು ನಮ್ಮ ಸಂಸ್ಥೆ ಸಿದ್ದವಾಗಿರುತ್ತದೆ ಎಂದು ಹೇಳಿದರು.
ಶಿಬಿರದಲ್ಲಿ ಮೌಂಟ್ ರೋಜರಿ ಆಸ್ಪತ್ರೆಯ ನಿರ್ದೇಶಕರಾದ ಸಿಸ್ಟರ್ ಪ್ರೆಸಿಲ್ಲಾ ಡಿಮೆಲ್ಲೊ, ಲಯನ್ಸ್ ಕ್ಲಬ್ ಅಲಂಗಾರು ಇದರ ಅಧ್ಯಕ್ಷ ಲಯನ್ ಅಮಿತ್ ಡಿಸಿಲ್ವ, ಮೌಂಟ್ ರೋಜರಿ ಆಸ್ಪತ್ರೆಯ ವೈದ್ಯರುಗಳಾದ ಪುನೀತ್ ಜಿ.ಪಕ್ಕಳ, ಎಲ್‌ರಾಯ್ ಸಲ್ಡಾನ್ಹಾ, ಮುಕುಂದ್, ಪಾವನಾ ಆರ್.ಶೆಟ್ಟಿ ಹಾಗೂ ಶ್ರೇಯಾ ಉಪಸ್ಥಿತರಿದ್ದರು. ಹಿರಿಯ ಸಹಕಾರಿಗಳಾದ ಕಲ್ಲಬೆಟ್ಟು ವ್ಯವಸಾಯ ಸೇವಾ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ಸುರೇಶ್ ಕೋಟ್ಯಾನ್, ನೆಲ್ಲಿಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ಮಾಜಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಅರುಣ್ ಕುಮಾರ್ ಜೈನ್, ಇವರನ್ನು ಗೌರವಿಸಲಾಯಿತು.
ಪ್ರಿಯದರ್ಶಿನಿ ಮೂಡುಬಿದಿರೆ ಶಾಖೆಯ ಪ್ರಬಂಧಕಿ ಅಭಿಷ್ಠಾ ಜೈನ್ ಸ್ವಾಗತಿಸಿದರು, ಆಸ್ಪತ್ರೆ ಸಿಬ್ಬಂದಿಗಳಾದ ಸುಧಾಕರ್ ಅಂಚನ್ ಕಾರ್ಯಕ್ರಮ ನಿರೂಪಿಸಿದರು, ಜಾಯ್ಲಿನ್ ಕಾರ್ಡರೊ ವಂದಿಸಿದರು.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

