Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಮಂಗಳೂರಿನ ಯಶಸ್ವಿನಿ ಶ್ರೀ ಮಹಿಳಾ ಸೌಹಾರ್ದ ಸಹಕಾರಿಯಅಧ್ಯಕ್ಷರಾದ ಚಂಚಲಾ ತೇಜೋಮಯರಿಗೆ ಶ್ರೇಷ್ಠ ಸಹಕಾರಿ ಪ್ರಶಸ್ತಿ
    News

    ಮಂಗಳೂರಿನ ಯಶಸ್ವಿನಿ ಶ್ರೀ ಮಹಿಳಾ ಸೌಹಾರ್ದ ಸಹಕಾರಿಯಅಧ್ಯಕ್ಷರಾದ ಚಂಚಲಾ ತೇಜೋಮಯರಿಗೆ ಶ್ರೇಷ್ಠ ಸಹಕಾರಿ ಪ್ರಶಸ್ತಿ

    adminBy adminNovember 20, 2025

    ಮಂಗಳೂರು: ಇಲ್ಲಿನ ಬಲ್ಮಠ ಯಶಸ್ವಿನಿ ಶ್ರೀ ಮಹಿಳಾ ಸೌಹಾರ್ದ ಸಹಕಾರಿ ನಿಯಮಿತದ ಅಧ್ಯಕ್ಷರಾದ ಚಂಚಲಾ ತೇಜೋಮಯ ಅವರಿಗೆ ರಾಯಚೂರಿನಲ್ಲಿ ನಡೆದ 72ನೇ ಅಖಿಲ ಭಾರತ ಸರಕಾರಿ ಸಪ್ತಾಹ ಕಾರ್ಯಕ್ರಮದಲ್ಲಿ ಶ್ರೇಷ್ಠ ಸಹಕಾರಿ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಮೈಸೂರು ಪ್ರಾಂತ್ಯದಲ್ಲಿ ಈ ಪುರಸ್ಕಾರವು ಮಹಿಳೆಯೊಬ್ಬರಿಗೆ ಲಭಿಸಿದ ಪ್ರಥಮ ಗೌರವವಾಗಿದೆ.

    https://chat.whatsapp.com/JVAtKKe2M19AFO3W5629ZS?mode=ems_copy_t
    ಚಂಚಲಾ ತೇಜೋಮಯ ಅವರು ಸುಮಾರು 25 ವರ್ಷಗಳ ಹಿಂದೆ ಬಲ್ಮಠದ ಸರಕಾರಿ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ನೀಡಲು ತಮ್ಮ ಆತ್ಮೀಯ ಗೆಳತಿಯರೊಡನೆ ಸೇರಿಕೊಂಡು ಸುಮಾರು ಏಳು ವರ್ಷ ಕಾಲ ಮಕ್ಕಳಿಗೆ ಉಚಿತ ಬಿಸಿಯೂಟ ನೀಡುವ ಮೂಲಕ ವೃತ್ತಿ ಜೀವನ ಪ್ರಾರಂಭಿಸಿ ತದನಂತರ ಮಹಿಳೆಯರನ್ನು ಒಗ್ಗೂಡಿಸಿ 2002ರಲ್ಲಿ ಯಶಸ್ವಿನಿ ಮಹಿಳಾ ಮಂಡಳಿ ಸ್ಥಾಪನೆ ಮಾಡಿ ನಂತರ 2012ರಲ್ಲಿ ಯಶಸ್ವಿನಿ ಚಾರಿಟೇಬಲ್ ಟ್ರಸ್ಟ್ ರಚಿಸಿ ಸುಮಾರು 30 ಸ್ವಸಹಾಯ ಗುಂಪುಗಳನ್ನು ರಚನೆ ಮಾಡಿ ಮಹಿಳೆಯರು ಸ್ವಂತ ಉದ್ಯೋಗ ಮಾಡಲು ಅವಕಾಶ ಮಾಡಿಕೊಟ್ಟಿದ್ದಾರೆ. ಪ್ರಸ್ತುತ ಮಂಗಳೂರು ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಅಧ್ಯಕ್ಷರಾಗಿದ್ದು, ಇವರ ಮುತುವರ್ಜಿಯಲ್ಲಿ ಮಹಿಳೆಯರಿಗಾಗಿ ಉರ್ವಸ್ಟೋರ್ ನಲ್ಲಿ ಸುಮಾರು ಒಂದು ಕೋಟಿ ರೂ. ವೆಚ್ಚದ ಮಹಿಳಾ ಸೌಧ ಎಂಬ ಮೂರು ಅಂತಸ್ತಿನ ಕಟ್ಟಡದ ಕಾಮಗಾರಿ ನಡೆಯುತ್ತಿದೆ.


    ದಕ್ಷಿಣ ಕನ್ನಡ ಜಿಲ್ಲೆಯ 1000 ಮಹಿಳೆಯರನ್ನು ಒಟ್ಟು ಸೇರಿಸಿ ಯಶಸ್ವಿನಿ ಶ್ರೀ ಮಹಿಳಾ ಸೌಹಾರ್ದ ಸಹಕಾರಿಯನ್ನು ಸ್ಥಾಪಿಸಿ ಮಹಿಳೆಯರಿಗೆ ಸ್ವಂತ ಉದ್ಯೋಗಕ್ಕಾಗಿ ಹೆಚ್ಚಿನ ಆದ್ಯತೆ ನೀಡಿದ್ದಾರೆ ಎರಡೇ ವರ್ಷಗಳಲ್ಲಿ ಡಿವಿಡೆಂಟ್ ನೀಡಿದ ಕೀರ್ತಿಯು ಇವರ ಸಹಕಾರಿ ಸಂಘಕ್ಕಿದೆ. ಮಹಿಳೆ ಮತ್ತು ಮಕ್ಕಳ ಶ್ರೇಯೋಭಿವೃದ್ಧಿಗಾಗಿ ಶ್ರಮಿಸುತ್ತಿದ್ದಾರೆ.
    ಪ್ರಸ್ತುತ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಮಂಡಲಗಳ ಒಕ್ಕೂಟದ ಅಧ್ಯಕ್ಷರಾಗಿ ನಗರದಲ್ಲಿ ಪ್ರಪ್ರಥಮವಾಗಿ ಮಹಿಳಾ ವಾಹನ ಜಾಥಾ ಮಾಡಿದ ಹಿರಿಮೆಯೂ ಇವರದಾಗಿದೆ. ಕರ್ನಾಟಕ ಜಾನಪದ ಪರಿಷತ್ತು ಮಂಗಳೂರು ತಾಲೂಕಿನ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    Chanchala Tejomaya Shreshta Sahakari Yashaswini Charitable Trust Yashaswini Shree Mahila Souharda Sahakari
    Previous Articleಆರ್ಥಿಕ ಅಭಿವೃದ್ಧಿ, ಹೊಸ ಜೀವನೋಪಾಯದ ಸೃಷ್ಟಿಗೆ ಗ್ರಾಮೀಣ ಪ್ರದೇಶಗಳಲ್ಲಿ ಸಹಕಾರಿ ಸಂಘಗಳ ಆಳವಾದ ವಿಸ್ತಾರ
    Next Article ಚಿಕ್ಕಮಗಳೂರಿನ ಸಮಾನ ಪತ್ತಿನ ಸೌಹಾರ್ದ ಸಹಕಾರಿಗೆ ಮೈಸೂರು ವಿಭಾಗದ ಉತ್ತಮ ಸಹಕಾರಿ ಪ್ರಶಸ್ತಿ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.