ಚಿಕ್ಕಮಗಳೂರು: ರಾಯಚೂರಿನಲ್ಲಿ ನಡೆದ 72ನೇ ಅಖಿಲ ಭಾರತ ಸರಕಾರಿ ಸಪ್ತಾಹ ಕಾರ್ಯಕ್ರಮದಲ್ಲಿ ಚಿಕ್ಕಮಗಳೂರಿನ ಸಮಾನ ಪತ್ತಿನ ಸೌಹಾರ್ದ ಸಹಕಾರಿಗೆ ಮೈಸೂರು ವಿಭಾಗದ ಉತ್ತಮ ಸಹಕಾರಿ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
https://chat.whatsapp.com/JVAtKKe2M19AFO3W5629ZS?mode=ems_copy_t
ರಾಯಚೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಮಾನ ಪತ್ತಿನ ಸೌಹಾರ್ದ ಸಹಕಾರಿ ಸಂಘದ ಅದ್ಯಕ್ಷರಾದ ದೇವರಾಜ್ ಮತ್ತು ಮುಖ್ಯ ಕಾರ್ಯನಿರ್ವಾಹಕ ಬಿ.ವೈ ವೆಂಕಟೇಶ್ ಇವರು ಪ್ರಶಸ್ತಿ ಸ್ವೀಕರಿಸಿದರು. ಕರ್ನಾಟಕ ಸರ್ಕಾರದ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್ ಬೋಸರಾಜು ಪ್ರಶಸ್ತಿ ಪ್ರದಾನ ಮಾಡಿದರು. ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ಅಧ್ಯಕ್ಷರಾದ ಜಿ.ನಂಜನ ಗೌಡ ಮೊದಲಾದವರು ಹಾಜರಿದ್ದರು.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

