ಉಜಿರೆ: ಇಲ್ಲಿನ ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ನೂತನ ಬೆಳ್ತಂಗಡಿ ಶಾಖೆಯ ಉದ್ಘಾಟನಾ ಸಮಾರಂಭ ನವೆಂಬರ್ 26ರ ಬುಧವಾರ ಬೆಳಗ್ಗೆ 10.30ಕ್ಕೆ ನಡೆಯಲಿದೆ.
https://chat.whatsapp.com/JVAtKKe2M19AFO3W5629ZS?mode=ems_copy_t
ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಕಾವೂರು ಶಾಖಾ ಮಠದ ಶ್ರೀ ಡಾ.ಧರ್ಮಪಾಲನಾಥ ಸ್ವಾಮೀಜಿ ಉದ್ಘಾಟಿಸಲಿದ್ದಾರೆ. ಮಾಜಿ ಸಚಿವರಾದ, ಬೆಳ್ತಂಗಡಿ ಪ್ರಸನ್ನ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಕೆ.ಗಂಗಾಧರ ಗೌಡ ಮತ್ತು ಬೆಳ್ತಂಗಡಿ ತಾಲೂಕು ಒಕ್ಕಲಿಗ ಸೌಡರ ಸಂಘದ ಅಧ್ಯಕ್ಷರಾದ ಬಾಲಕೃಷ್ಣ ಗೌಡ ಕೇರಿಮಾರು ಗೌರವ ಉಪಸ್ಥಿತಿ ಇರಲಿದ್ದಾರೆ. ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರ ಸಂಘದ ಅಧ್ಯಕ್ಷರಾದ ರಂಜನ್ ಜಿ.ಗೌಡ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ನಗರ ಪಂಚಾಯತ್ ಅಧ್ಯಕ್ಷರಾದ ಜಯಾನಂದ ಗೌಡ, ದ.ಕ. ಜಿಲ್ಲಾ ಒಕ್ಕಲಿಗ ಗೌಡರ ಸೇವಾ ಸಂಘ ಅಧ್ಯಕ್ಷರಾದ ಡಿ.ಬಿ ಬಾಲಕೃಷ್ಣ ಗೌಡ, ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಅಧ್ಯಕ್ಷರಾದ ಮೋಹನ್ ಗೌಡ ಕಲ್ಮಂಜ, ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಕಾರ್ಯಾಧ್ಯಕ್ಷರಾದ ವಕೀಲ ಶ್ರೀನಿವಾಸ ಗೌಡ ಬೆಳಾಲು, ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿರ್ದೇಶಕರಾದ ಭಾರತಿ ಜಿ.ಭಟ್, ದ.ಕ. ಜಿಲ್ಲಾ ಸೌಹಾರ್ದ ಅಭಿವೃದ್ಧಿ ಅಧಿಕಾರಿ ನಂದನ್ ಬಿ.ಎಸ್, ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷರಾದ ವಸಂತ ಗೌಡ ಮರಕಡ, ಪ್ರಧಾನ ಕಾರ್ಯದರ್ಶಿ ನವೀನ್ ಗೌಡ, ದ.ಕ. ಜಿಲ್ಲಾ ಒಕ್ಕಲಿಗ ಗೌಡರ ಸೇವಾ ಸಂಘದ ನಿರ್ದೇಶಕರಾದ ವಿಜಯ ಗೌಡ ವೇಣೂರು, ಸೌಮ್ಯಲತಾ ಜಯಂತ್ ಗೌಡ, ದ..ಕ. ಜಿಲ್ಲಾ ಒಕ್ಕಲಿಗ ಗೌಡರ ಸೇವಾ ಸಂಘದ ಜೊತೆ ಕಾರ್ಯದರ್ಶಿ ದಾಮೋದರ ಗೌಡ ಸುರುಳಿ, ಜತೆ ಕೋಶಾಧಿಕಾರಿ ಸೂರಜ್ ಗೌಡ ವಳಂಬ್ರ ಭಾಗವಹಿಸಲಿದ್ದಾರೆ.
ಸಂಘದ ಉಪಾಧ್ಯಕ್ಷರಾದ ಶಿವಕಾಂತ್ ಗೌಡ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಿನೇಶ್ ಗೌಡ ಕಲ್ಲಾಜೆ, ಆಡಳಿತ ಮಂಡಳಿ ಸದಸ್ಯರು ಹಾಗೂ ಸಿಬ್ಬಂದಿ ವರ್ಗದವರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

