Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಸಾಮಾಜಿಕ ಸೇವೆ ನಿರಂತರ ಮುಂದುವರಿಯಲಿ
    News

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಸಾಮಾಜಿಕ ಸೇವೆ ನಿರಂತರ ಮುಂದುವರಿಯಲಿ

    adminBy adminDecember 3, 2025

    ಕಾಪುವಿನಲ್ಲಿ ಉಚಿತ ವೈದ್ಯಕೀಯ ಮತ್ತು ನೇತ್ರ ತಪಾಸಣಾ ಶಿಬಿರ ಉದ್ಘಾಟಿಸಿ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಶುಭಾಷಯ

    ಕಾಪು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಕಾಪು ಶಾಖೆಯ ತೃತೀಯ ವಾರ್ಷಿಕೋತ್ಸವದ ಪ್ರಯುಕ್ತ ರೋಟರಿ ಕ್ಲಬ್ ಕಾಪು ಹಾಗೂ ಸುಜ್ಞಾನ ಚಾರಿಟೇಬಲ್ ಟ್ರಸ್ಟ್ ಕಾಪು ಇವರ ಜಂಟಿ ಸಹಯೋಗದೊಂದಿಗೆ ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ, ಹಾಗೂ ಶ್ರೀ ಸುಧೀಂದ್ರ ಆಯುರ್ ಕ್ಲಿನಿಕ್ ಕಾಪು ಇವರ ನುರಿತ ವೈದ್ಯರ ತಂಡದವರಿಂದ ಉಚಿತ ವೈದ್ಯಕೀಯ ಹಾಗೂ ನೇತ್ರ ತಪಾಸಣೆ ಶಿಬಿರವು ಕಾಪು ಹೊಸ ಮಾರಿಗುಡಿ ದೇವಸ್ಥಾನದ ಹತ್ತಿರದ ವಿವೇಕ್ ಕಾಂಪ್ಲೆಕ್ಸ್‌ನಲ್ಲಿ ಜರುಗಿತು.

    https://chat.whatsapp.com/JVAtKKe2M19AFO3W5629ZS?mode=ems_copy_t

    ಮಾಜಿ ಸಚಿವ ಹಾಗೂ ಮಾಜಿ ಸಂಸದರಾದ ವಿನಯ ಕುಮಾರ್ ಸೊರಕೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಜನರು ಆರೊಗ್ಯದ ಬಗ್ಗೆ ಕಾಳಜಿ ವಹಿಸುವುದು ಇತ್ತೀಚಿನ ದಿನಗಳಲ್ಲಿ ತುಂಬಾ ಅನಿವಾರ್ಯ. ಈ ನಿಟ್ಟಿನಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಮುಂದಾಳತ್ವದಲ್ಲಿ ಬ್ಯಾಂಕಿಂಗ್ ಕ್ಷೇತ್ರದ ಜೊತೆಗೆ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರುತ್ತಿದ್ದು, ಸಂಸ್ಥೆಯು ಇನ್ನೂ ಹೆಚ್ಚಿನ ಅಭಿವೃದ್ದಿ ಪಥದಲ್ಲಿ ಸಾಗಲಿ, ಸಾಮಾಜಿಕ ಸೇವೆ ನಿರಂತರವಾಗಿ ಮುಂದುವರಿಯಲಿ ಎಂದು ಶುಭ ಹಾರೈಸಿದರು.
    ರೋಟರಿ ಕ್ಲಬ್ ಕಾಪು ಇದರ ಮಾಜಿ ಅಧ್ಯಕ್ಷರಾದ ರೋ. ಶ್ರೀನಿವಾಸ್ ರಾವ್ ಮಾತನಾಡಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಆಯೋಜಿಸಿರುವ ಉಚಿತ ವೈದ್ಯಕೀಯ ಹಾಗೂ ನೇತ್ರ ತಪಾಸಣೆ ಶಿಬಿರದಲ್ಲಿ ಕೈ ಜೋಡಿಸಿರುವುದು ಸಂತಸವಾಗಿದೆ. ಮುಂದೆಯೂ ಇಂತಹ ಜನಪರ ಕಾರ್ಯದಲ್ಲಿ ಸಂಘದೊಂದಿಗೆ ಸದಾ ಸಹಕರಿಸುತ್ತೇವೆ ಎಂದು ಹೇಳಿದರು. ಸುಧೀಂದ್ರ ಆಯುರ್ ಕ್ಲಿನಿಕ್ ಕಾಪು ಇದರ ವೈದ್ಯರಾದ ಡಾ.ಸದಾನಂದ ಎಲ್ ಭಟ್ ಮಾತನಾಡಿ ನಮಗೆ ಎಷ್ಟೇ ಶ್ರೀಮಂತಿಕೆ ಇದ್ದರೂ ಉತ್ತಮವಾಗಿ ಜೀವನ ನಡೆಸಲು ನೆಮ್ಮದಿಯ ಆರೋಗ್ಯ ಅವಶ್ಯಕ. ಈಅನಾರೋಗ್ಯವನ್ನು ಪತ್ತೆ ಹಚ್ಚುವುದು ತುಂಬಾ ಅವಶ್ಯಕ. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಕಾಪುವಿನಲ್ಲಿ 94ನೇ ಶಿಬಿರ ನಡೆಸುತ್ತಿರುವ ಬಗ್ಗೆ ಸಂತಸ ವ್ಯಕ್ತಪಡಿಸಿ, ಜನಸಾಮಾನ್ಯರ ಆರೋಗ್ಯದ ಕಾಳಜಿ ವಹಿಸಿ, ಎಲ್ಲಾ ಶಾಖೆಗಳಲ್ಲಿ ಉಚಿತ ಆರೋಗ್ಯ ಶಿಬಿರ ನಡೆಸುತ್ತಿರುವುದಕ್ಕೆ ಸಂಘದ ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ವರ್ಗದವರಿಗೆ ಧನ್ಯವಾದಗಳನ್ನು ಸಲ್ಲಿಸಿದರು.


    ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಶಾಲಿಟಿ ಕಣ್ಣಿನ ಆಸ್ಪತ್ರೆ ಉಡುಪಿ ಇದರ ವೈದ್ಯರಾದ ಡಾ. ಪ್ರತಿಭಾ ಕಣ್ಣಿನ ಆರೋಗ್ಯ, ತಪಾಸಣೆ ಹಾಗೂ ಶಸ್ತ್ರಚಿಕಿತ್ಸೆಯ ಬಗ್ಗೆ ಮಾಹಿತಿ ನೀಡಿದರು.
    ಅಧ್ಯಕ್ಷತೆ ವಹಿಸಿದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಮಾತನಾಡಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಪ್ರತೀ ಶಾಖೆಗಳ ವಾರ್ಷಿಕೋತ್ಸವದ ಸಂದರ್ಭದಲ್ಲಿ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ನಿರಂತರವಾಗಿ ಆರೋಗ್ಯ ಶಿಬಿರವನ್ನು ಏರ್ಪಡಿಸುತ್ತಾ ಬಂದಿದೆ. ಸಾರ್ವಜನಿಕರು ಆರೋಗ್ಯದ ಬಗ್ಗೆ ಕಾಳಜಿ ವಹಿಸುವಲ್ಲಿ ನಮ್ಮ ಸಹಕಾರಿ ಸಂಘವು ಮುಖ್ಯ ಪಾತ್ರ ವಹಿಸಿದೆ. ಸಂಘವು ಏರ್ಪಡಿಸುವ ಕಾರ್ಯಕ್ರಮಗಳಲ್ಲಿ ಸ್ಥಳೀಯ ಸಂಘ ಸಂಸ್ಥೆಗಳು ಸಹಕಾರವನ್ನು ನೀಡಿದೆ ಎಂದರು.
    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನಿರ್ದೇಶಕರಾದ ರಮಾನಾಥ್ ಸನಿಲ್, ಗೋಪಾಲ್ ಎಮ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್, ಕಾಪು ಪುರಸಭೆಯ ಸದಸ್ಯರಾದ ಸರಿತಾ, ಕಾಪು ಬಿಲ್ಲವ ಸಹಾಯಕ ಸಂಘದ ನಿಕಟಪೂರ್ವ ಅಧ್ಯಕ್ಷರಾದ ಮಾಧವ ಪಾಲನ್, ಸುಜ್ಞಾನ ಚಾರಿಟೇಬಲ್ ಟ್ರಸ್ಟ್‌ ಅಧ್ಯಕ್ಷರಾದ ವಿದ್ಯಾದರ್ ಪುರಾಣಿಕ್, ನೇತ್ರ ಜ್ಯೋತಿ ಚ್ಯಾರಿಟೇಬಲ್ ಟ್ರಸ್ಟ್ ಉಡುಪಿ, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಶಾಲಿಟಿ ಕಣ್ಣಿನ ಆಸ್ಪತ್ರೆ ಉಡುಪಿ ಇಲ್ಲಿನ ಪಿ.ಆರ್.ಓ ಮೋಹನ್, ಸುಧೀಂದ್ರ ಆಯುರ್ ಕ್ಲಿನಿಕ್‌ನ ವೈದ್ಯರಾದ ಡಾ.ಎಸ್. ಭಟ್, ರೋಟರಿ ಕ್ಲಬ್ (ರಿ.) ಕಾಪು ಇದರ ಪದಾಧಿಕಾರಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಸುಮಾರು 150ಕ್ಕೂ ಹೆಚ್ಚು ಶಿಬಿರಾರ್ಥಿಗಳಿಗೆ ಉಚಿತ ವೈದ್ಯಕೀಯ ತಪಾಸಣೆ, ನೇತ್ರ ತಪಾಸಣೆ, ಉಚಿತ ಕನ್ನಡಕ ವಿತರಣೆಯನ್ನು ನಡೆಸಲಾಯಿತು.
    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಸಿಬ್ಬಂದಿ ಚೈತ್ರ ಎ ಸ್ವಾಗತಿಸಿ, ಸಿಬ್ಬಂದಿ ಅಶ್ವಿನಿ ಧನ್ಯವಾದವಿತ್ತರು. ಕಾರ್ಯಕ್ರಮದ ನಿರೂಪಣೆಯನ್ನು ಶಾಖಾಧಿಕಾರಿ ಚೈತ್ರ ನಿರ್ವಹಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

     

    Atmashakthi Vividhoddesha Sahakari Sangha Kapu Branch Vinayakumar Sorake
    Previous Articleಕ್ಯಾಂಪ್ಕೋ ಅಧ್ಯಕ್ಷರಾಗಿ ಎಸ್ ಆರ್ ಸತೀಶ್ಚಂದ್ರ ಆಯ್ಕೆ
    Next Article ಸಹಕಾರ ಕ್ಷೇತ್ರದ ಬೆಳವಣಿಗೆಯಲ್ಲಿ ಮಹಿಳೆಯರ ಕೊಡುಗೆ ಅಪಾರ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.