Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಎಂ.ಸಿ.ಸಿ. ಬ್ಯಾಂಕಿನ ನವೀಕೃತ ಕಂಕನಾಡಿ ಶಾಖೆ ಉದ್ಘಾಟನೆ
    News

    ಎಂ.ಸಿ.ಸಿ. ಬ್ಯಾಂಕಿನ ನವೀಕೃತ ಕಂಕನಾಡಿ ಶಾಖೆ ಉದ್ಘಾಟನೆ

    adminBy adminDecember 5, 2025

    ಮಂಗಳೂರು: ಎಂಸಿಸಿ ಬ್ಯಾಂಕ್ ಮಂಗಳೂರು ಇದರ ನವೀಕೃತ ಕಂಕನಾಡಿ ಶಾಖೆಯು ಗುರುವಾರ ಪಂಪ್‌ವೆಲ್ ರಸ್ತೆಯಲ್ಲಿರುವ ಎಂಪೋರಿಯo ವಾಣಿಜ್ಯ ಸಂಕೀರ್ಣದಲ್ಲಿ ಉದ್ಘಾಟನೆಗೊಂಡಿತು. ನವೀಕರಿಸಿದ ಶಾಖೆಯನ್ನು ಹೆಸರಾಂತ ಅನಿವಾಸಿ ಭಾರತೀಯ ಉದ್ಯಮಿ, ವಿಷನ್ ಕೊಂಕಣಿಯ ಪ್ರವರ್ತಕ ಮೈಕಲ್ ಡಿಸೋಜ ಉದ್ಘಾಟಿಸಿದರು. ಕಂಕನಾಡಿ ಫಾದರ್ ಮುಲ್ಲರ್ಸ್ ಚಾರಿಟೇಬಲ್ ಸಂಸ್ಥೆಗಳ ನಿರ್ದೇಶಕ ವಂದನೀಯ ಫಾದರ್ ಫೌಸ್ಟಿನ್ ಲೋಬೊ ಆಶೀರ್ವದಿಸಿದರು.

    https://chat.whatsapp.com/JVAtKKe2M19AFO3W5629ZS?mode=ems_copy_t

    ಎಂಸಿಸಿ ಬ್ಯಾಂಕ್‌ನ ಅಧ್ಯಕ್ಷ ಸಹಕಾರ ರತ್ನ ಅನಿಲ್ ಲೋಬೊ ಅಧ್ಯಕ್ಷತೆ ವಹಿಸಿದ್ದರು. ಜೆಪ್ಪುವಿನ ಸೇಂಟ್ ಆ್ಯಂಟನಿ ಆಶ್ರಮದ ನಿರ್ದೇಶಕ ವಂದನೀಯ ಫಾದರ್ ಜೆ.ಬಿ.ಕ್ರಾಸ್ತಾ, ಬೆಂದೂರಿನ ಸೇವಾನಿಲಯ ಕಾನ್ವೆಂಟ್‌ನ ಸುಪೀರಿಯರ್‌ನ ಸಿಸ್ಟರ್ ಸಿಂತಿಯಾ ಡಿಸೋಜ, ಮತ್ತು ಕೊಂಕಣಿ ಸಾಂಸ್ಕೃತಿಕ ಸಂಸ್ಥೆ (ಕೆಸಿಒ) ಅಧ್ಯಕ್ಷ ಲಿಯೋ ರೋಡ್ರಿಗಸ್ ಮುಖ್ಯ ಅತಿಥಿಗಳಾಗಿದ್ದರು.
    ಅಧ್ಯಕ್ಷರಾದ ಅನಿಲ್ ಲೋಬೊ ಅವರು ಮಾತನಾಡಿ, ಕಂಕನಾಡಿ ಶಾಖೆಯ ನವೀಕರಣದ ಹಿಂದಿನ ಉದ್ದೇಶ ಮತ್ತು ದೃಷ್ಟಿಕೋನವನ್ನು ವಿವರಿಸಿದರು. ಇತ್ತೀಚಿನ ದಿನಗಳಲ್ಲಿ ಗ್ರಾಹಕರು ಆಧುನಿಕ ಮತ್ತು ಹೊಸಹೊಸ ಆಲೋಚನೆಗಳನ್ನು ನಿರೀಕ್ಷಿಸುತ್ತಾರೆ. ನಮ್ಮ ಬ್ಯಾಂಕ್ ಅದನ್ನು ಹೇಗೆ ಸಾಧಿಸುವುದು ಎಂಬುದರ ಸ್ಪಷ್ಟ ದೃಷ್ಟಿಕೋನದೊಂದಿಗೆ ಡಿಜಿಟಲೀಕರಣಕ್ಕೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಎಲ್ಲಾ 16 ಶಾಖೆಗಳನ್ನು ನವೀಕರಿಸಿದೆ. ಗ್ರಾಹಕರಿಗೆ ಅಗತ್ಯವಿರುವ ಸೌಲಭ್ಯಗಳನ್ನು ಪೂರೈಸುವಲ್ಲಿ ಯಶಸ್ವಿಯಾಗಿದೆ. ಕಂಕನಾಡಿ ಶಾಖೆಯು 54 ವರ್ಷಗಳನ್ನು ಪೂರೈಸಿದ ಸಂದರ್ಭದಲ್ಲಿ, ಗ್ರಾಹಕರು ತಮ್ಮ ವಹಿವಾಟುಗಳನ್ನು ಸಂತೋಷದಾಯಕವಾಗಿ ನಡೆಸಲು ಅನುಕೂಲವಾಗುವಂತೆ ಶಾಖೆಯನ್ನು ನವೀಕರಿಸಲಾಗಿದೆ ಎಂದು ಹೇಳಿದರು.


    ಪ್ರಸ್ತುತ ಆಡಳಿತ ಮಂಡಳಿ ಅಧಿಕಾರ ವಹಿಸಿಕೊಂಡಾಗ ಕೇವಲ 16 ಶಾಖೆಗಳಿದ್ದು, ಕಳೆದ ಏಳು ವರ್ಷಗಳಲ್ಲಿ, 22 ವರ್ಷಗಳ ನಂತರ ಐದು ಹೊಸ ಶಾಖೆಗಳನ್ನು ತೆರೆಯಲಾಗಿದೆ. ಆರ್‌ಬಿಐ ಹೆಚ್ಚುವರಿ ಶಾಖೆಗಳನ್ನು ತೆರೆಯಲು ಅನುಮತಿ ನೀಡಿದ್ದು, ಬ್ಯಾಂಕ್ ಆರ್ಥಿಕವಾಗಿ ಸದೃಢ ಮತ್ತು ಉತ್ತಮವಾಗಿ ನಿರ್ವಹಿಸಲ್ಪಟ್ಟಿದೆ ಎಂದು ಸೂಚಿಸುತ್ತದೆ. ಪ್ರಸ್ತುತ ಆಡಳಿತ ಮಂಡಳಿಯು 2018ರಲ್ಲಿ ಬ್ಯಾಂಕಿನ ಜವಾಬ್ದಾರಿಯನ್ನು ವಹಿಸಿಕೊಂಡಾಗಿನಿoದ ಬ್ಯಾಂಕ್ ಎಲ್ಲಾ ಹಣಕಾಸು ನಿಯತಾಂಕಗಳನ್ನು ಪೂರೈಸಿದ್ದು, ಇಂದು ಒಟ್ಟು 21 ಶಾಖೆಗಳು ಮತ್ತು 15 ಎಟಿಎಂಗಳನ್ನು ಹೊಂದಿದೆ. ಮುಂದಿನ ಹಣಕಾಸು ವರ್ಷದಲ್ಲಿ ದೇರಳಕಟ್ಟೆ, ಕಟಪಾಡಿ, ಪಡೀಲ್ ಮತ್ತು ಮುಡಿಪು ಅಥವಾ ವಾಮಂಜೂರಿನಲ್ಲಿ ಇನ್ನೂ ನಾಲ್ಕು ಶಾಖೆಗಳನ್ನು ತೆರೆಯಲು ಯೋಜನೆಯನ್ನು ಹಮ್ಮಿಕೊಂಡಿದೆ. ಕರ್ನಾಟಕ ಮಾತ್ರವಲ್ಲದೆ ಇಡೀ ದೇಶಾದ್ಯಂತ ಬ್ಯಾಂಕ್ ಬೆಳೆಯಲು ಅನುವು ಮಾಡಿಕೊಡಲು ಗ್ರಾಹಕರ ಬೆಂಬಲ ಮತ್ತು ಆಶೀರ್ವಾದ ಮಾಡಬೇಕು ಎಂದು ಕೋರಿದರು.
    ಮೈಕೆಲ್ ಡಿಸೋಜ ಅವರು ಮಾತನಾಡಿ ಬ್ಯಾಂಕಿನ ಪ್ರಗತಿಗೆ ಕಾರಣಕರ್ತರಾದ ಬ್ಯಾಂಕಿನ ಅಧ್ಯಕ್ಷರು, ಆಡಳಿತ ಮಂಡಳಿ ಮತ್ತು ಸಿಬ್ಬಂದಿಯನ್ನು ಅಭಿನಂದಿಸಿದರು. ಬ್ಯಾಂಕಿನ ಅಧ್ಯಕ್ಷ ಅನಿಲ್ ಲೋಬೊ ಅವರ ಕ್ರಿಯಾತ್ಮಕ ನಾಯಕತ್ವದಲ್ಲಿ ಬ್ಯಾಂಕ್ ಸಾಧಿಸಿರುವ ಅಮೋಘ ಸುಧಾರಣೆ ಮತ್ತು ಬೆಳವಣಿಗೆಯನ್ನು ವಿವರಿಸಿ ಶಾಖೆಗಳ ಅಭಿವೃದ್ಧಿ, ಸಿಬ್ಬಂದಿ ಅಭಿವೃದ್ಧಿ, ಗ್ರಾಹಕ ಸಂಬoಧಗಳು, ಪ್ರಚಾರ ಮತ್ತು ಇನ್ನೂ ಹೆಚ್ಚಿನವುಗಳನ್ನು ಒಳಗೊಂಡಂತೆ ಎಲ್ಲಾ ಕ್ಷೇತ್ರಗಳಲ್ಲಿ ಬ್ಯಾಂಕ್ ಸ್ಥಿರ ಪ್ರಗತಿಯನ್ನು ಸಾಧಿಸಿದೆ ಎಂದು ತಿಳಿಸಿ ಕಾರ್ಯಕ್ರಮಕ್ಕಾಗಿ ಗಣ್ಯರು ಮತ್ತು ಗ್ರಾಹಕರನ್ನು ಒಟ್ಟುಗೂಡಿಸುವ ಅಧ್ಯಕ್ಷರ ಸಾಮರ್ಥ್ಯವನ್ನು ಅವರು ಶ್ಲಾಘಿಸಿದರು. ಗ್ರಾಹಕರ ನಿರಂತರ ಬೆಂಬಲದೊoದಿಗೆ ನಿರ್ದೇಶಕರು ಮತ್ತು ಸಿಬ್ಬಂದಿಯ ಸಂಯೋಜಿತ ಪ್ರಯತ್ನಗಳ ಮೂಲಕ ಉತ್ತಮ ಸಾಲ ನೀಡುವಿಕೆ ಮತ್ತು ಸಕಾಲಿಕ ಸಾಲ ವಸೂಲಾತಿ ಪ್ರಕ್ರಿಯೆ ಕೈಗೊಳ್ಳಲು ಸಲಹೆ ನೀಡಿದರು.

    ಫಾದರ್ ಜೆ. ಬಿ. ಕ್ರಾಸ್ತಾ ಅವರು ಮಾತನಾಡಿ, ಗ್ರಾಹಕರಿಗೆ ಬ್ಯಾಂಕ್ ನೀಡುವ ಅನುಕರಣೀಯ ಸೇವೆ ಮತ್ತು ಸುರಕ್ಷತೆಗಾಗಿ ಸಂತೋಷ ವ್ಯಕ್ತಪಡಿಸಿದರು. ಶಾಖೆಯ ಸಿಬ್ಬಂದಿಗಳ ಸಮರ್ಪಣೆ ಮತ್ತು ಬದ್ಧತೆಯನ್ನು ಹಾಗೂ ಶಾಖೆಯ ವ್ಯವಹಾರವನ್ನು ಅಭಿವೃದ್ಧಿಪಡಿಸುವಲ್ಲಿ ಅವರ ಆಸಕ್ತಿಯನ್ನು ಶ್ಲಾಘಿಸಿದರು.
    ಲಿಯೋ ರೊಡ್ರಿಗಸ್ ಅವರು ಬ್ಯಾಂಕಿನ ಬೆಳವಣಿಗೆಗೆ ಅಧ್ಯಕ್ಷರನ್ನು ಅಭಿನಂದಿಸಿ, ಗಣ್ಯರು, ಸಿಬ್ಬಂದಿ ಮತ್ತು ಗ್ರಾಹಕರ ಉಪಸ್ಥಿತಿಗೆ ಧನ್ಯವಾದಗಳನ್ನು ಅರ್ಪಿಸಿದರು. ಫಾದರ್ ಫೌಸ್ಟಿನ್ ಲೋಬೊ ತಮ್ಮ ಭಾಷಣದಲ್ಲಿ, ಒಬ್ಬ ವ್ಯಕ್ತಿಯು ಸಲ್ಲಿಸಿದ ಸೇವೆಯಿಂದ ಗುರುತಿಸಲ್ಪಡುತ್ತಾನೆ ಎಂಬ ಬೈಬಲ್‌ನ ವಚನವನ್ನು ಉಲ್ಲೇಖಿಸಿದರು. ನಾವು ಬದುಕಬೇಕು ಮತ್ತು ಇತರರನ್ನು ಬದುಕಲು ಬಿಡಬೇಕು ಎಂದು ಹೇಳಿ, ಇದು ಬ್ಯಾಂಕಿಗೆ ಸಮಾನವಾಗಿ ಅನ್ವಯಿಸುತ್ತದೆ, ಬ್ಯಾಂಕಿನಿAದ ಸೇವೆ ಸಲ್ಲಿಸುವ ಗ್ರಾಹಕರ ಬೆಳವಣಿಗೆಯೊಂದಿಗೆ ಅದು ಬೆಳೆಯಬೇಕು. ಬದಲಾವಣೆ ಅನಿವಾರ್ಯ ಮತ್ತು ಎಲ್ಲಾ ಜೀವಿಗಳಿಗೆ ನಿರಂತರ ಪ್ರಕ್ರಿಯೆ ಎಂದು ಅವರು ಹೇಳಿದರು. ಸಮಾಜಕ್ಕೆ ಸೇವೆ ಸಲ್ಲಿಸಲು ಬ್ಯಾಂಕ್ ತನ್ನ ಸೌಲಭ್ಯಗಳು ಮತ್ತು ಸೇವೆಗಳನ್ನು ಸುಧಾರಿಸುವ ಮೂಲಕ ಸ್ಥಿರ ಬೆಳವಣಿಗೆಯ ಹಾದಿಯಲ್ಲಿ ಮುಂದುವರಿಯಬೇಕು ಎಂದು ಹೇಳಿ ಬ್ಯಾಂಕಿನ ಮುಂದಿನ ಯೋಜನೆಗಳಿಗೆ ಶುಭ ಹಾರೈಸಿದರು.
    ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತೆ, ಮಂಗಳೂರಿನ ದಿ ವೈಟ್ ಡವ್ಸ್ ಸೈಕಿಯಾಟ್ರಿಕ್ ನರ್ಸಿಂಗ್ & ಡೆಸ್ಟಿಟ್ಯೂಟ್ ಹೋಂನ ಸಂಸ್ಥಾಪಕಿ ಕೊರಿನ್ ರಸ್ಕಿನ್ಹಾ ಅವರನ್ನು ಸನ್ಮಾನಿಸಲಾಯಿತು. ಮೈಕೆಲ್ ಡಿಸೋಜ ಅವರನ್ನು ET Now ಬಿಸಿನೆಸ್ ಕಾನ್ಕ್ಲೇವ್ & ಅವಾರ್ಡ್ಸ್ 2025 – ಮಂಗಳೂರು ಆವೃತ್ತಿಯಲ್ಲಿ ರೂಪಾಂತರಗೊoಡ ಲೋಕೋಪಕಾರಿ ಮತ್ತು ಸಮುದಾಯ ನಾಯಕತ್ವ ವಿಭಾಗದಲ್ಲಿ ಪ್ರಶಸ್ತಿಗೆ ಭಾಜನರಾಗಿದ್ದಕ್ಕಾಗಿ ಗೌರವಿಸಲಾಯಿತು. ಡಿಸೆಂಬರ್ 11 ರಂದು ಚಂಡೀಗಢದಲ್ಲಿ ನಡೆಯುವ ಭಾರತ ಮತ್ತು ದಕ್ಷಿಣ ಆಫ್ರಿಕಾ ಟಿ 20 ಪಂದ್ಯದಲ್ಲಿ ಎಸ್‌ಬಿಐ ಲೈಫ್ ಪರವಾಗಿ ಕ್ರಿಕೆಟ್ ತಾರೆಯೊಬ್ಬರಿಗೆ ಪಂದ್ಯಶ್ರೇಷ್ಟ ಪ್ರಶಸ್ತಿಯನ್ನು ಪ್ರದಾನ ಮಾಡಲು ಆಯ್ಕೆಯಾಗಿದ್ದಕ್ಕಾಗಿ ಐವಾನ್ ಫ್ರಾಂಕ್ ಅವರನ್ನು ಗೌರವಿಸಲಾಯಿತು.
    ಇತ್ತೀಚೆಗೆ ಬಿಡುಗಡೆಯಾದ ಕೊಂಕಣಿ ಚಲನಚಿತ್ರ ‘ಬಾಪಾಚೆ ಪುತಾಚೆ ನಾವಿ’ ದಲ್ಲಿ ನಟಿಸಿರುವ ಮೆಲ್ವಿನ್ ಡಿಅಲ್ಮೇಡಾ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮವನ್ನು ರೋಶನ್ ಕ್ರಾಸ್ತಾ ನಿರೂಪಿಸಿ ವಂದಿಸಿದರು. ಉಪಾಧ್ಯಕ್ಷ ಜೆರಾಲ್ಡ್ ಜೂಡ್ ಡಿಸಿಲ್ವ, ಕಂಕನಾಡಿ ಶಾಖಾ ನಿರ್ದೇಶಕರಾದ ಹೆರಾಲ್ಡ್ ಮೊಂತೇರೊ, ನಿರ್ದೆಶಕರಾದ ಮೆಲ್ವಿನ್ ವಾಸ್, ಸಿ.ಜಿ.ಪಿಂಟೊ, ಜೆ.ಪಿ.ರೊಡ್ರಿಗಸ್, ಐರೀನ್ ರೆಬೆಲ್ಲೊ, ಡಾ| ಫ್ರೀಡಾ ಡಿಸೋಜ, ರೋಶನ್ ಡಿಸೋಜ, ಫೆಲಿಕ್ಸ್ ಡಿಕ್ರೂಜ್, ಆಲ್ವಿನ್ ಮೊಂತೇರೊ, ಜನರಲ್ ಮ್ಯಾನೇಜರ್ ಸುನಿಲ್ ಮಿನೇಜಸ್, ಶಾಖಾ ವ್ಯವಸ್ಥಾಪಕಿ ಐಡಾ ಪಿಂಟೊ, ಸಿಬ್ಬಂದಿ ಸದಸ್ಯರು ಮತ್ತು ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    Bendur; and Mr Leo Rodrigues Director Fr J. B. Crasta Helpers of Mount Rosary (HMR) Jeppu; Sr Cynthia D’Souza Kankanady Konkani Cultural Organisation (KCO). MCC BANK MCC Bank Inaugurates Renovated Kankanady Branch Michael D’Souza renowned NRI entrepreneur philanthropist and promoter of Vision Konkani (MDVK) President Rev Fr Faustine Lobo Director of Fr Mullers Charitable Institutions Kankanady Sahakara Ratna Mr Anil Lobo Sevanilaya Convent St. Antony Ashram Superior
    Previous Articleಶರ್ವಾಣಿ ಕ್ರೆಡಿಟ್ ಸೌಹಾರ್ದ ಸೊಸೈಟಿಯ ಕ್ಯಾಲೆಂಡರ್ ಬಿಡುಗಡೆ
    Next Article ರೆಪೋ ದರ ಶೇ.5.25ಕ್ಕೆ ಇಳಿಕೆ, ಸಾಲಗಾರರಿಗೆ ಗುಡ್ ನ್ಯೂಸ್

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.