ತುಮಕೂರಿನಲ್ಲಿ ಸಹಕಾರ ಭಾರತಿ ರಾಷ್ಟ್ರೀಯ ಉಪಾಧ್ಯಕ್ಷ ಬಿ.ಹೆಚ್ ಕೃಷ್ಣಾ ರೆಡ್ಡಿ ಅಭಿಪ್ರಾಯ
ತುಮಕೂರು: ದೇಶದ ಎಲ್ಲಾ ರಾಜ್ಯಗಳ 700ಕ್ಕೂ ಹೆಚ್ಚಿನ ಜಿಲ್ಲೆಗಳಲ್ಲಿ ಸಕ್ರಿಯವಾಗಿರುವ ಸಹಕಾರ ಭಾರತಿ ಸಂಘಟನೆಯು ಮುಂದಿನ ದಿನಗಳಲ್ಲಿ ಸರ್ವವ್ಯಾಪಿ ಮತ್ತು ಸರ್ವಸ್ಪರ್ಶಿಯಾಗಿ ವ್ಯಾಪಿಸಿ ಸಹಕಾರಿ ಕ್ಷೇತ್ರದಲ್ಲಿ ತಳಮಟ್ಟದಿಂದ ಸಂಘಟನೆಯನ್ನು ಬಲಪಡಿಸಬೇಕು ಎಂದು ಸಹಕಾರ ಭಾರತಿಯ ರಾಷ್ಟ್ರೀಯ ಉಪಾಧ್ಯಕ್ಷ ಬಿ. ಹೆಚ್ ಕೃಷ್ಣಾ ರೆಡ್ಡಿ ಕರೆ ನೀಡಿದರು.
ಅವರು ಮಂಗಳವಾರ ಸಹಕಾರ ಭಾರತಿಯ ತುಮಕೂರು ಜಿಲ್ಲಾ ಅಭ್ಯಾಸ ವರ್ಗವನ್ನು ಉದ್ಘಾಟಿಸಿ ಮಾತನಾಡಿದರು.
ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಸಹಕಾರ ಭಾರತಿ ಜಿಲ್ಲಾಧ್ಯಕ್ಷರಾದ ಸುರೇಶ ರಾವ್ ವಹಿಸಿದ್ದರು,
https://chat.whatsapp.com/JVAtKKe2M19AFO3W5629ZS?mode=ems_copy_t
ಮುಖ್ಯ ಅತಿಥಿಗಳಾಗಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಾಣೂರು ನರಸಿಂಹ ಕಾಮತ್, ರಾಷ್ಟ್ರೀಯ ಸ್ವಯಂಸೇವಕ ಸಂಘದ ತುಮಕೂರು ವಿಭಾಗ ಸಂಘಚಾಲಕರಾದ ನಾಗೇಂದ್ರ ಪ್ರಸಾದ್, ಹಿರಿಯ ಸಹಕಾರಿಗಳಾದ ಗಂಗಾಧರಯ್ಯ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿಜಯ್, ರಾಜ್ಯ ಸಂಘಟನಾ ಕಾರ್ಯದರ್ಶಿ ಮಂಜುನಾಥ್ ಬಿ.ಆರ್. ಮತ್ತು ಬೆಂಗಳೂರು ವಿಭಾಗ ಸಂಘಟನಾ ಪ್ರಮುಖ್ ಮಾಲತೇಶ್ ಉಪಸ್ಥಿತರಿದ್ದರು.
ಉದ್ಘಾಟನೆಯ ನಂತರ ತುಮಕೂರು ಜಿಲ್ಲೆಯ ವಿವಿಧ ತಾಲೂಕು ಸಮಿತಿಗಳ ಪದಾಧಿಕಾರಿಗಳ ಘೋಷಣೆ ಮಾಡಲಾಯಿತು. ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಾಣೂರು ನರಸಿಂಹ ಕಾಮತ್ ನೂತನ ಪದಾಧಿಕಾರಿಗಳನ್ನು ಅಭಿನಂದಿಸಿದರು.

ವಿವಿಧ ವಿಚಾರಗೋಷ್ಠಿಗಳು
ಸಹಕಾರ ಭಾರತಿಯ ಹುಟ್ಟು ಮತ್ತು ಬೆಳವಣಿಗೆಗಳ ಬಗ್ಗೆ ರಾಜ್ಯ ಪ್ರಧಾನ ಕಾರ್ಯದರ್ಶಿ ಸಾಣೂರು ನರಸಿಂಹ ಕಾಮತ್ ಸವಿಸ್ತಾರವಾಗಿ ತಿಳಿಸಿದರು. ಗೋಷ್ಠಿಯಲ್ಲಿ ಸ್ನೇಹ ಸಂಗಮ ಸೌಹಾರ್ದ ಸಹಕಾರಿಯ ಅಧ್ಯಕ್ಷರಾದ ಬಾವಿಕಟ್ಟೆ ಮಂಜುನಾಥ್ ಅಧ್ಯಕ್ಷತೆ ವಹಿಸಿದ್ದರು. ಇತ್ತೀಚೆಗೆ ತಿದ್ದುಪಡಿಯಾದ ಸಹಕಾರಿ ಕಾಯ್ದೆಗಳ ಬಗ್ಗೆ ಸಹಕಾರ ಭಾರತಿ ರಾಷ್ಟ್ರೀಯ ಉಪಾಧ್ಯಕ್ಷರಾದ ಬಿ.ಎಚ್. ಕೃಷ್ಣಾರೆಡ್ಡಿ ಮಾತನಾಡಿದರು. ಈ ಗೋಷ್ಠಿಯ ಅಧ್ಯಕ್ಷತೆಯನ್ನು ಶ್ರೀ ಗುರುಕುಲ ಸೌಹಾರ್ದ ಸಹಕಾರಿ ಸಂಸ್ಥೆಯ ಅಧ್ಯಕ್ಷರಾದ ಮಲ್ಲಿಕಾರ್ಜುನಯ್ಯ ವಹಿಸಿದ್ದರು.
ನೇರ ಸಂವಾದ_ ಮುಕ್ತ ಮಾತುಕತೆ
ಸರಕಾರ ಮತ್ತು ಇಲಾಖೆಯ ಅಧಿಕಾರಿಗಳ ಹಸ್ತಕ್ಷೇಪದಿಂದ ಇತ್ತೀಚಿನ ಕಾನೂನು ತಿದ್ದುಪಡಿಗಳು ಸಹಕಾರಿ ಸಂಸ್ಥೆಗಳ ಭವಿಷ್ಯದ ಬಗ್ಗೆ ಆತಂಕಕಾರಿ ಮತ್ತು ಗೊಂದಲದ ಸನ್ನಿವೇಶ ಸೃಷ್ಟಿ ಆಗಿರುವುದರ ಬಗ್ಗೆ ಸಹಕಾರ ಭಾರತಿ ಪ್ರಮುಖರ ಜೊತೆಗೆ ನೇರ ಸಂವಾದ ಮತ್ತು ಮುಕ್ತ ಮಾತುಕತೆ ನಡೆಸಿ, ವಿವಿಧ ಸಹಕಾರಿ ಸಂಸ್ಥೆಗಳ ಪ್ರಮುಖರು ತಮ್ಮ ಸಂಶಯವನ್ನು ನಿವಾರಿಸಿಕೊಂಡರು.

ಸಮಾರೋಪ ಸಮಾರಂಭ
ರಾಜ್ಯ ಸಂಘಟನಾ ಕಾರ್ಯದರ್ಶಿಗಳಾದ ಮಂಜುನಾಥ ಬಿ.ಆರ್. ಸಮಾರೋಪ ಸಮಾರಂಭದಲ್ಲಿ ಸಹಕಾರ ಭಾರತಿ ರಾಜ್ಯಮಟ್ಟದ ಸಂಘಟನಾತ್ಮಕ ವಿಚಾರಗಳ ಬಗ್ಗೆ ಹಾಗೂ ಸಂಘಟನೆಯನ್ನು ಬಲಪಡಿಸಲು ನೂತನ ಪದಾಧಿಕಾರಿಗಳ ಜವಾಬ್ದಾರಿ ಮತ್ತು ಕರ್ತವ್ಯಗಳ ಬಗ್ಗೆ ಮಾಹಿತಿ ಮಾರ್ಗದರ್ಶನ ನೀಡಿದರು.
ಜಿಲ್ಲಾ ಅಭ್ಯಾಸ ವರ್ಗದಲ್ಲಿ ಸುಮಾರು 45ಕ್ಕೂ ಹೆಚ್ಚು ಸಂಸ್ಥೆಗಳಿಂದ 150ಕ್ಕೂ ಮಿಕ್ಕಿ ಸಹಕಾರಿಗಳು, ಸಹಕಾರ ಭಾರತಿಯ ತುಮಕೂರು ಜಿಲ್ಲೆ ಮತ್ತು ವಿವಿಧ ತಾಲೂಕುಗಳ ಪದಾಧಿಕಾರಿಗಳು ಸಕ್ರಿಯವಾಗಿ ಭಾಗವಹಿಸಿದ್ದರು.

