ಬೆಳ್ತಂಗಡಿ: ಬೆಳ್ತಂಗಡಿ ರಾಮನಗರದ ಶ್ರೀ ಅಯ್ಯಪ್ಪ ದೇವಸ್ಥಾನದ ಬಳಿಯ ಶ್ರೀದೇವಿ ಕಾಂಪ್ಲೆಕ್ಸ್‌ನಲ್ಲಿ ಪ್ರಧಾನ ಕಚೇರಿ ಹೊಂದಿರುವ ಪ್ರವರ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭ ಡಿಸೆಂಬರ್ 13ರಂದು ನಡೆಯಲಿದೆ.
https://chat.whatsapp.com/JVAtKKe2M19AFO3W5629ZS?mode=ems_copy_t
ಬೆಳಗ್ಗೆ 10.30ಕ್ಕೆ ಉದ್ಘಾಟನಾ ಕಾರ್ಯಕ್ರಮ ನಡೆಯಲಿದ್ದು, ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅರಿಕೋಡಿ ಇಲ್ಲಿಯ ಧರ್ಮದರ್ಶಿ ಹರೀಶ್ ಅರಿಕೋಡಿ ಉದ್ಘಾಟಿಸುವರು. ಮಂಜೊಟ್ಟಿ ಹೋಲಿ ಕ್ರಾಸ್ ಚರ್ಚ್‌ನ ಧರ್ಮಗುರು ಅತಿ ವಂದನೀಯ ಪೌಲ್ ಸೆಬೆಸ್ಟಿಯನ್ ಡಿಸೋಜ ಆಶೀರ್ವಚನ ನೀಡಲಿದ್ದಾರೆ. ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ನಿರ್ದೇಶಕರಾದ ಭಾರತಿ ಜಿ.ಭಟ್ ದೀಪ ಪ್ವಜ್ವಲನೆ ಮಾಡಲಿದ್ದಾರೆ. ಪೆರಾಡಿ ಪ್ಯಾಕ್ಸ್ ಅಧ್ಯಕ್ಷ, ಸಹಕಾರ ರತ್ನ ಸತೀಶ್ ಕೆ ಕಾಶಿಪಟ್ಣ, ಭದ್ರತಾ ಕೊಠಡಿ ಉದ್ಘಾಟಿಸಲಿದ್ದಾರೆ. ಸಹಕಾರಿ ಸಂಘಗಳ ಪುತ್ತೂರು ಉಪವಿಭಾಗದ ಉಪನಿಬಂಧಕರಾದ ರಘು ಎಸ್.ಎಂ, ನಾರಾವಿ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸುಧಾಕರ ಭಂಡಾರಿ, ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ದಕ್ಷಿಣ ಕನ್ನಡ ಅಭಿವೃದ್ಧಿ ಅಧಿಕಾರಿ ನಂದನ್ ಬಿ.ಎಸ್, ಬೆಳ್ತಂಗಡಿ ಹೋಲಿ ರೆಡಿಮೀರ್ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ವಾಲ್ಟರ್ ಮೋನಿಸ್, ಶ್ರೀದೇವಿ ಕಾಂಪ್ಲೆಕ್ಸ್‌ನ ಮಾಲೀಕ ಶರತ್ ಆರ್.ನಾಯಕ್ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
EMAIL: sahakaraspandana@gmail.com


