Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ರಾಜ್ಯದ 14,798 ಸಹಕಾರ ಸಂಘಗಳು ನಷ್ಟದಲ್ಲಿ!!
    News

    ರಾಜ್ಯದ 14,798 ಸಹಕಾರ ಸಂಘಗಳು ನಷ್ಟದಲ್ಲಿ!!

    adminBy adminDecember 16, 2025

    ಪ್ರತಿಪಕ್ಷದ ಶಾಸಕ ಸುನೀಲ್‌ ಕುಮಾರ್‌ ಪ್ರಶ್ನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಲಿಖಿತ ಉತ್ತರ

    ಬೆಳಗಾವಿ: ರಾಜ್ಯದಲಿರುವ ಹಾಲು ಉತ್ಪಾದಕ ಸಹಕಾರ ಸಂಘಗಳೂ ಸೇರಿದಂತೆ ಕರ್ನಾಟಕ ರಾಜ್ಯದಲ್ಲಿರುವ 47,736 ಸಹಕಾರ ಸಂಘಗಳ ಪೈಕಿ 14,798 ಸಹಕಾರ ಸಂಘಗಳು ನಷ್ಟದಲ್ಲಿವೆ! ಸ್ವತಃ ರಾಜ್ಯದ ಮುಖ್ಯಮಂತ್ರಿಗಳೇ ಈ ವಿವರವನ್ನು ಸೋಮವಾರ ವಿಧಾನಸಭೆಯಲ್ಲಿ ಲಿಖಿತ ಉತ್ತರದ ಮೂಲಕ ನೀಡಿದ್ದಾರೆ.

    https://chat.whatsapp.com/JVAtKKe2M19AFO3W5629ZS?mode=ems_copy_t
    ರಾಜ್ಯದಲ್ಲಿ 47,736 ಸಹಕಾರ ಸಂಘಗಳಿದ್ದು ಇವುಗಳಲ್ಲಿ 28,145 ಸಂಸ್ಥೆಗಳು ಮಾತ್ರ ಲಾಭದಲ್ಲಿ ನಡೆಯುತ್ತಿವೆ. ಸಹಕಾರ ಕ್ಷೇತ್ರದ ಆಡಳಿತಾತ್ಮಕ ವೆಚ್ಚಗಳಿಂದಾಗಿ ಸಂಘಗಳ ಲಾಭಾಂಶ ಕಡಿಮೆಯಾಗಿವೆ ಎಂದು ಸರ್ಕಾರವೇ ಸದನಕ್ಕೆ ತಿಳಿಸಿದೆ. ಬೆಳಗಾವಿ ಹಾಗೂ ಕಲಬುರಗಿ ಜಿಲ್ಲೆಯಲ್ಲಿ ಅತಿಹೆಚ್ಚು ಸಹಕಾರ ಸಂಘಗಳು ನಷ್ಟದಲಿವೆ ಎಂದೂ ಸರ್ಕಾರ ಮಾಹಿತಿ ನೀಡಿದೆ.
    ಬಿಜೆಪಿ ಶಾಸಕ ಕಾರ್ಕಳದ ಸುನೀಲ್‌ ಕುಮಾರ್‌ ಕೇಳಿದ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ರಾಜ್ಯದ ಮುಖ್ಯಮಂತ್ರಿಯೂ ಆಗಿರುವ ಸಹಕಾರ ಸಚಿವರಾದ ಸಿದ್ದರಾಮಯ್ಯ ಈ ಮಾಹಿತಿ ಒದಗಿಸಿದ್ದು ಬೆಳಗಾವಿಯಲ್ಲಿ 2661 ಸಹಕಾರ ಸಂಘಗಳು ನಷ್ಟದಲ್ಲಿವೆ. ಕಲಬುರಗಿಯಲ್ಲಿ ಲಾಭದಲ್ಲಿರುವ ಸಹಕಾರ ಸಂಘಗಳ ಸಂಖ್ಯೆಗಿಂತ ಆರು ಪಟ್ಟು ಹೆಚ್ಚಿನ ಸಂಘಗಳು ನಷ್ಟದಲ್ಲಿವೆ. ಹೈನುಗಾರರು ವಾಣಿಜ್ಯ ಬೆಳೆ ಬೆಳೆಯುವತ್ತ ಆಸಕ್ತರಾಗಿದ್ದು ಇದರಿಂದ ಹಾಲು ಉತ್ಪಾದನೆಯೂ ಕಡಿಮೆಯಾಗುತ್ತಿದೆ. ಇದರ ಜೊತೆಗೆ ಆಡಳಿತಾತ್ಮಕ ವೆಚ್ಚವೂ ಹೆಚ್ಚುತ್ತಿರುವುದರಿಂದ ಹಲವಾರು ಸಂಘಗಳು ನಷ್ಟ ಅನುಭವಿಸುವಂತಾಗಿದೆ ಎಂದು ಸಿಎಂ ನೀಡಿರುವ ಉತ್ತರದಲ್ಲಿ ತಿಳಿಸಿದ್ದಾರೆ.

    ಯಾವ ಜಿಲ್ಲೆಯಲ್ಲಿ ಎಷ್ಟು ಸಹಕಾರ ಸಂಘಗಳು ನಷ್ಟದಲ್ಲಿ?
    ಬೆಂಗಳೂರು ನಗರ 1045
    ತುಮಕೂರು 506
    ಚಿತ್ರದುರ್ಗ 696
    ಮೈಸೂರು 713
    ಬೆಳಗಾವಿ 1661
    ವಿಜಯಪುರ 558
    ಬಾಗಲಕೋಟೆ 497
    ಧಾರವಾಡ 562
    ಗದಗ 517
    ಹಾವೇರಿ 532
    ಉತ್ತರಕನ್ನಡ 252
    ಬೀದರ್‌ 592
    ಕಲಬುರಗಿ 1226
    ಯಾದಗಿರಿ 489

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    Banking CM Siddaramayya Co Operative ministry Co Operative Societies Loss Cooperative Cooperative Registrar V Sunil Kumar
    Previous Articleಸಹಕಾರಿ ಬ್ಯಾಂಕ್‌ಗಳ ನಿರ್ದೇಶಕರಿಗೆ ಗರಿಷ್ಠ 10 ವರ್ಷಗಳ ನಿರಂತರ ಅಧಿಕಾರಾವಧಿಯ ಮಧ್ಯಂತರ ತಡೆಯಾಜ್ಞೆಗೆ ಬಾಂಬೆ ಹೈಕೋರ್ಟ್‌ ನಕಾರ
    Next Article ಸಹಕಾರ ಕ್ಷೇತ್ರದ ಬಲವರ್ಧನೆಗಾಗಿ ನಿರಂತರ ಕಾರ್ಯೋನ್ಮುಖ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.