Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ನಮ್ಮ ಕಸ ನಮ್ಮ ಹೊಣೆ
    News

    ನಮ್ಮ ಕಸ ನಮ್ಮ ಹೊಣೆ

    adminBy adminDecember 21, 2025

    ವಿಶ್ವಕರ್ಮ ಬ್ಯಾಂಕ್ ಅಧ್ಯಕ್ಷರಾದ ಡಾ. ಎಸ್ ಆರ್ ಹರೀಶ್ ಆಚಾರ್ಯ ಅಭಿಪ್ರಾಯ

    ಕಾರ್ಕಳ: ಸ್ವಚ್ಛತೆಯ ಜಾಗೃತಿ ಪ್ರತಿಯೊಬ್ಬರ ಮೂಲಭೂತ ಕರ್ತವ್ಯವಾಗಬೇಕು. ನಮ್ಮ ಮನೆಯ ಕಸದ ನಿರ್ವಹಣೆಯ ಜವಾಬ್ದಾರಿಯನ್ನು ನಾವು ಕಸ ಹುಟ್ಟುವ ಮೂಲದಲ್ಲಿಯೇ ಸಮರ್ಪಕವಾಗಿ ನಿರ್ವಹಣೆ ಮಾಡಬೇಕು. ಆಗ ನಮ್ಮ ಪರಿಸರ ಸ್ವಚ್ಛ ಪರಿಸರವಾಗುತ್ತದೆ ಎಂದು ವಿಶ್ವಕರ್ಮ ಸಹಕಾರ ಬ್ಯಾಂಕ್ ಅಧ್ಯಕ್ಷರಾದ ಡಾ. ಎಸ್ ಆರ್ ಹರೀಶ್ ಆಚಾರ್ಯ ಹೇಳಿದರು.
    ವಿಶ್ವಕರ್ಮ ಸಹಕಾರ ಬ್ಯಾಂಕಿನ ಕಾರ್ಕಳ ಶಾಖೆಯ ಆಶ್ರಯದಲ್ಲಿ “ಸ್ವಚ್ಛತಾ ಹೀ ಸೇವಾ” ಧ್ಯೇಯದೊಂದಿಗೆ ಭಾನುವಾರ ನಡೆದ 13ನೇ ಸ್ವಚ್ಛ ಭಾರತ್ ಶ್ರಮದಾನದಲ್ಲಿ ಮಾತನಾಡಿದರು.

    https://chat.whatsapp.com/FCEnlTkAKCC0MGPhXtX4i4
    ಸ್ವಚ್ಛ ಭಾರತ್ ಶ್ರಮದಾನ ಕಾರ್ಯಕ್ರಮವನ್ನು ಕಾರ್ಕಳ ಜೈನ ಮಠದ ಪರಮಪೂಜ್ಯ ಸ್ವಸ್ತಿ ಶ್ರೀ ಲಲಿತ ಕೀರ್ತಿ ಭಟ್ಟಾರಕ ಸ್ವಾಮೀಜಿಯವರು ಉದ್ಘಾಟಿಸಿ ಆಶೀರ್ವದಿಸಿದರು.
    ಜೈನ್ ಮಿಲನ್ ಕಾರ್ಕಳದ ಅಧ್ಯಕ್ಷರಾದ ಅಶೋಕ್ ಎಚ್ ಎಮ್, ಜೆಸಿಐ ಕಾರ್ಕಳದ ಅಧ್ಯಕ್ಷರಾದ ಶ್ವೇತಾ ಎಸ್ ಜೈನ್ ಮತ್ತು ರೋಟರಿ ಕ್ಲಬ್ ಕಾರ್ಕಳದ ಪಬ್ಲಿಕ್ ಇಮೇಜ್ ಇದರ ಅಧ್ಯಕ್ಷರಾದ ರೋಟೇರಿಯನ್ ಪಿ ಹೆಚ್ ಎಫ್ ರೇಖಾ ಉಪಾಧ್ಯಾಯ ಇವರುಗಳು ಹಸಿರು ನಿಶಾನೆ ತೋರಿಸುವ ಮೂಲಕ ಶ್ರಮದಾನಕ್ಕೆ ಚಾಲನೆ ನೀಡಿದರು.
    ಕಾರ್ಕಳ ಜೈನ ಮಠ, ಚತುರ್ಮುಖ ಬಸದಿ ಪರಿಸರ ಹಾಗೂ ಗೊಮ್ಮಟ ಬೆಟ್ಟದ ಆಸುಪಾಸಿನ ಪರಿಸರದಲ್ಲಿ ಸ್ವಯಂಸೇವಕರು ಸ್ವಚ್ಛತೆಯ ಶ್ರಮದಾನ ಮಾಡಿದರು.
    ವಿಶ್ವಕರ್ಮ ಸಹಕಾರ ಬ್ಯಾಂಕಿನ ಉಪಾಧ್ಯಕ್ಷರಾದ ಜಗದೀಶ್ ಆಚಾರ್ಯ ಪಡುಪಣಂಬೂರು, ನಿರ್ದೇಶಕರಾದ ಡಿ.ಭಾಸ್ಕರ ಆಚಾರ್ಯ, ಬೆಳುವಾಯಿ ಸೀತಾರಾಮ ಆಚಾರ್ಯ, ಭರತ್ ನಿಡ್ಪಳ್ಳಿ, ಜಿನವಾಣಿ ಮಹಿಳಾ ಒಕ್ಕೂಟದ ಅಧ್ಯಕ್ಷರಾದ ವಿನಯ ವೈ ಆರಿಗ ಮತ್ತು ಸದಸ್ಯರು ಶಿವಭಕ್ತ ಭಜನಾ ಮಂಡಳಿ ದಾನಶಾಲೆ ಇದರ ಪದಾಧಿಕಾರಿಗಳು ಹಾಗೂ ಸದಸ್ಯರು, ಸ್ವಚ್ಛ ಬ್ರಿಗೇಡ್ ಕಾರ್ಕಳದ ಸಂಯೋಜಕರಾದ ಫೇಲಿಕ್ಸ್ ಜೋಸೆಫ್ ವಾಸ್ ಪದಾಧಿಕಾರಿಗಳಾದ ರಾಜೇಂದ್ರ ಅಮೀನ್, ಜಯರಾಮ, ನಿಖಿಲ್ ಕುಮಾರ್ ಹಾಗೂ ಸದಸ್ಯರು, ಧಾರ್ಮಿಕ ಹಾಗೂ ಸಾಮಾಜಿಕ ಕಾರ್ಯಕರ್ತರಾದ ಗುಣವರ್ಮ ಜೈನ್, ಹರೀಶ್ ಆಚಾರ್ಯ ಹಾಗೂ ಸತೀಶ್ ಆಚಾರ್ಯ, ರೋಟರಿ ಕ್ಲಬ್, ಲಯನ್ಸ್ ಕ್ಲಬ್ ಹಾಗೂ ಜೆಸಿಐ ನ ಸದಸ್ಯರು, ಸಿಎ ಪ್ರಭಾತ್, ಕಾರ್ಕಳ ಟೈಗರ್ಸ್ ಪದಾಧಿಕಾರಿಗಳು ಹಾಗೂ ಸದಸ್ಯರು, ಕಾರ್ಕಳ ತಾಲೂಕು ಚಿನ್ನದ ಕೆಲಸಗಾರರ ಸಂಘದ ಅಧ್ಯಕ್ಷರಾದ ಎಂ ರಮೇಶ್ ಆಚಾರ್, ಅಧ್ಯಕ್ಷರು ಮತ್ತು ಸದಸ್ಯರು, ಕರ್ನಾಟಕ ಕ್ಷತ್ರಿಯ ಮರಾಠ ಪರಿಷತ್ ಜಿಲ್ಲಾಧ್ಯಕ್ಷರಾದ ಪ್ರಕಾಶ್ ರಾವ್, ಕಾರ್ಕಳ ಕನೆಕ್ಟ್ ನ ವಿಜೇತ್, ಶ್ರೀ ಭುವನೇಂದ್ರ ಕಾಲೇಜಿನ ರೇಂಜರ್ಸ್ ಅಂಡ್ ರೋವರ್ಸ್ ನ ಪ್ರದರ್ಶ ಕೆ, ವಿಶ್ವಕರ್ಮ ಸಹಕಾರ ಬ್ಯಾಂಕಿನ ಕಾರ್ಕಳ ಶಾಖೆಯ ಶಾಖಾಧಿಕಾರಿ ನಿತಿನ್ ಕೆ. ಹಾಗೂ ಸಿಬ್ಬಂದಿಗಳು, ಬ್ಯಾಂಕಿನ ಸದಸ್ಯರು, ಗ್ರಾಹಕರು ಹಾಗೂ ಹಿತೈಷಿಗಳು ಭಾಗವಹಿಸಿ ಶ್ರಮದಾನದಲ್ಲಿ ಕೈ ಜೋಡಿಸಿ ಸಹಕರಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    Bhattaraka Swameeji Mudubidre Dr. S R Harish Acharya Swacchatha Hi Seva Swachha Bharath Vishwakarma Sahakara Bank Limited
    Previous Articleನಮ್ಮ ಕಸ ನಮ್ಮ ಹೊಣೆ
    Next Article ವಿಶ್ವಕರ್ಮ ಸಹಕಾರ ಬ್ಯಾಂಕ್‌ನಿಂದ ಕಾರ್ಕಳದಲ್ಲಿ ಸ್ವಚ್ಛತಾ ಕಾರ್ಯಕ್ರಮ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.