Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಕುಂಟಾಡಿ ವಿಸ್ತರಣಾ ಕೌಂಟರ್ ಆಶ್ರಯದಲ್ಲಿ ನೇತ್ರ, ರಕ್ತದೊತ್ತಡ, ಮಧುಮೇಹ ತಪಾಸಣಾ ಶಿಬಿರ
    News

    ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಕುಂಟಾಡಿ ವಿಸ್ತರಣಾ ಕೌಂಟರ್ ಆಶ್ರಯದಲ್ಲಿ ನೇತ್ರ, ರಕ್ತದೊತ್ತಡ, ಮಧುಮೇಹ ತಪಾಸಣಾ ಶಿಬಿರ

    adminBy adminDecember 24, 2025

    ಕಾರ್ಕಳ: ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಮಂಗಳೂರು ಇದರ ಕಾರ್ಕಳ ಶಾಖೆಯ ಕುಂಟಾಡಿ ವಿಸ್ತರಣಾ ಕೌಂಟರ್ ಆಶ್ರಯದಲ್ಲಿ ಕುಂಟಾಡಿ ಶ್ರೀ ರಕ್ತೇಶ್ವರಿ ದೈವಸ್ಥಾನದ ಸಭಾಭವನದಲ್ಲಿ ಉಚಿತ ನೇತ್ರ ತಪಾಸಣಾ ಮತ್ತು ರಕ್ತದೊತ್ತಡ ಹಾಗೂ ಮಧುಮೇಹ ತಪಾಸಣಾ ಶಿಬಿರ ಭಾನುವಾರ ಜರುಗಿತು.

    https://chat.whatsapp.com/FCEnlTkAKCC0MGPhXtX4i4
    ಅಧ್ಯಕ್ಷತೆ ವಹಿಸಿ ಮಾತನಾಡಿದ ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷರಾದ ಕೆ.ಜೈರಾಜ್ ಬಿ ರೈ, ದೈವಸ್ಥಾನ ಪ್ರಗತಿಯಲ್ಲಿ ವಾಣಿಜ್ಯ ಅಭಿವೃದ್ಧಿಯು ಅಗತ್ಯ. ಹಣಕಾಸು ವ್ಯವಹಾರ ಪ್ರಗತಿಯಾದಂತೆ ಕ್ಷೇತ್ರದ ಅಭಿವೃದ್ಧಿಗೂ ಸಹಕಾರ ನೀಡಲಾಗುವುದು. ಹಣಕಾಸು ಸೇವೆ ಹಾಗೂ ಸಾಮಾಜಿಕ ಕಾರ್ಯಗಳ ಉಪಯೋಗವನ್ನು ಊರ ಜನರು ಪಡೆದುಕೊಳ್ಳುವಂತೆ ಕೋರಿದರು.

    ಕಲ್ಯಾ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪೂಜಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಜನ ತಮ್ಮ ಆರೋಗ್ಯದ ಕಾಳಜಿಯನ್ನು ತಾವೇ ವಹಿಸಿಕೊಳ್ಳುವಂತಾಗಬೇಕು. ಮಾತ್ರವಲ್ಲದೆ ಪೌಷ್ಟಿಕಯುಕ್ತ ಆಹಾರ ಸೇವಿಸಿದಲ್ಲಿ ದೈಹಿಕ ಉತ್ತಮ ಬೆಳವಣಿಗೆ ಸಾಧ್ಯ ಎಂದರು. ಕುಂಟಾಡಿ ಶ್ರೀ ರಕ್ತೇಶ್ವರಿ ದೈವಸ್ಥಾನದ ಆಡಳಿತ ಮೊಕ್ತೇಸರರಾದ ತೀರ್ಥಬೆಟ್ಟುಗುತ್ತು ಕೆ.ಪೃಥ್ವಿರಾಜ್ ಬಿ ರೈ ಸಾಂದರ್ಭಿಕವಾಗಿ ಮಾತನಾಡಿದರು. ಪಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಅರುಣ ಮಾತನಾಡಿ, ಜನರಿಗೆ ಆರೋಗ್ಯ ಕಾಳಜಿ ಅಗತ್ಯ. ಆರೋಗ್ಯದ ವ್ಯತ್ಯಾಸಗಳು ಕಂಡು ಬಂದಲ್ಲಿ ಕೂಡಲೇ ತಜ್ಞ ವೈದ್ಯರನ್ನು ಸಂಪರ್ಕಿಸುವಂತೆ ಕೋರಿದರು.
    ಬೆರ್ಮನಬೆಟ್ಟು ಬರ್ಕೆ ಗಡಿ ಪ್ರಧಾನರು ಚಂದಯ್ಯ ಬೋಂಟ್ರ, ಉಡುಪಿ ಜಿಲ್ಲಾ ಅಂಧತ್ವ ನಿಯಂತ್ರಣ ವಿಭಾಗ ನೇತ್ರಾಧಿಕಾರಿ ಪ್ರವೀಣ್ ಎಂ ಕೆ, ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್ ಮತ್ತು ಪ್ರಸಾದ್ ನೇತ್ರಾಲಯ ಹಾಗೂ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆಯ ಡಾ.ಕ್ರೀನ, ಕಾರ್ಕಳ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಎನ್‌ಸಿಡಿ ಘಟಕದ ಡಾ. ಜಯಶ್ರೀ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರುಶ್ರೀ ರಾಮಕೃಷ್ಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಮಹಾಪ್ರಬಂಧಕರಾದ ಗಣೇಶ್ ಜಿ.ಕೆ, ಶಾಖಾಧಿಕಾರಿ ನವೀನ್ ಕುಮಾರ್ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
    ಪ್ರಜ್ಞಾ ಆಚಾರ್ಯ, ಕೃತಿಕ, ಸಿಂಚನ ಪ್ರಾರ್ಥನೆಗೈದರು. ಶಾಖಾಧಿಕಾರಿ ನವೀನ್ ಕುಮಾರ್ ಶೆಟ್ಟಿ ಸ್ವಾಗತಿಸಿದರು. ಶಾಖಾ ಸಿಬ್ಬಂದಿ ರಂಜಿತ್ ಶೆಟ್ಟಿ ಧನ್ಯವಾದವಿತ್ತರು. ಪತ್ರಕರ್ತ ನವೀನ್ ಸಾಲ್ಯಾನ್ ಕಾರ್ಯಕ್ರಮ ನಿರೂಪಿಸಿದರು. 103 ಮಂದಿ ಕಾರ್ಯಕ್ರಮದ ಪ್ರಯೋಜನ ಪಡೆದುಕೊಂಡರು. ಉಡುಪಿ ಜಿಲ್ಲಾ ಅಂಧತ್ವ ನಿಯಂತ್ರಣ ವಿಭಾಗ, ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಉಡುಪಿ, ಸರಕಾರಿ ಸಾರ್ವಜನಿಕ ಆಸ್ಪತ್ರೆ ಕಾರ್ಕಳ ಎನ್ ಸಿ ಡಿ ಘಟಕ, ಕುಂಟಾಡಿ ಶ್ರೀ ರಕ್ತೇಶ್ವರಿ ದೈವಸ್ಥಾನ ಆಡಳಿತ ಮಂಡಳಿ ಸಹಯೋಗ ನೀಡಿ ಸಹಕರಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    Health Camp K.Jairaj B Rai Kuntady Kuntady Shree Rakteshwari Temple Shree Ramakrishna Credit Co Operative Soceity
    Previous Articleಸಹಕಾರ ಉನ್ನತ ಡಿಪ್ಲೋಮಾ (HDCM) ತರಬೇತಿಗೆ ಅರ್ಜಿ ಆಹ್ವಾನ
    Next Article ವಿಶ್ವಕರ್ಮ ಸಹಕಾರ ಬ್ಯಾಂಕ್‌ನಿಂದ ನಾಳೆ ಸ್ವಚ್ಛತಾ ಅಭಿಯಾನ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.