ಕೊಟ್ಟಾರ : ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಕೊಟ್ಟಾರ ಶಾಖೆಯ ತೃತೀಯ ವಾರ್ಷಿಕೋತ್ಸವದ ಪ್ರಯುಕ್ತ ಸಂಜೀವಿನಿ ಡಿವೈನ್ ಹಾಲಿಸ್ಟಿಕ್ ವೆಲ್‌ನೆಸ್ ಸೆಂಟರ್ ಉರ್ವಸ್ಟೋರ್, ಮಂಗಳೂರು ಇವರ ಸಹಯೋಗದೊಂದಿಗೆ ಯೇನೇಪೋಯ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಹಾಗೂ ಸಮುದಾಯ ದಂತ ಆರೋಗ್ಯ ವಿಭಾಗ ದೇರಳಕಟ್ಟೆ ಇದರ ನುರಿತ ತಜ್ಞ ವೈದ್ಯ ತಂಡದವರಿಂದ ಉಚಿತ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ತಪಾಸಣಾ ಶಿಬಿರ ಡಿಸೆಂಬರ್ 28ರಂದು ಭಾನುವಾರ ಬೆಳಗ್ಗೆ 9.30ರಿಂದ ಅಪರಾಹ್ನ 12.30ರ ವರೆಗೆ ಸಂಜೀವಿನಿ ಡಿವೈನ್ ಹಾಲಿಸ್ಟಿಕ್ ವೆಲ್‌ನೆಸ್ ಸೆಂಟರ್, ನಿಲ್‌ಗಿರಿಸ್‌ನ್ ಹತ್ತಿರ ಕ್ಯಾನೋಪಿ ಬಿಲ್ಡಿಂಗ್, ಅಶೋಕನಗರ ರೋಡ್, ಉರ್ವಸ್ಟೋರ್ ಮಂಗಳೂರು ಇಲ್ಲಿ ಆಯೋಜಿಸಲಾಗಿದೆ.
https://chat.whatsapp.com/FCEnlTkAKCC0MGPhXtX4i4
ಈ ವೈದ್ಯಕೀಯ ಶಿಬಿರದಲ್ಲಿ ಕಣ್ಣಿನ ತಪಾಸಣೆ, ಅಗತ್ಯವುಳ್ಳವರಿಗೆ ಕಣ್ಣಿನ ಪೊರೆಯ ಶಸ್ತ್ರ ಚಿಕಿತ್ಸೆ, ಮಧುಮೇಹ ತಪಾಸಣೆ, ಬಿಪಿ ತಪಾಸಣೆ, ಸಾಮಾನ್ಯ ವೈದ್ಯಕೀಯ ಸಮಾಲೋಚನೆ, ಕಿವಿ ಮೂಗು ಮತ್ತು ಗಂಟಲು ತಪಾಸಣೆ ಹುಳುಕು ಹಲ್ಲುಗಳನ್ನು ಭರ್ತಿ ಮಾಡುವುದು, ರೋಗಗ್ರಸ್ತ ಹಲ್ಲು ಗಳನ್ನು ಕೀಳುವುದು, ಹಲ್ಲುಗಳ ಶುಚಿಗೊಳಿಸುವುದು, ಹೆಚ್ಚಿನ ಚಿಕಿತ್ಸೆಗಾಗಿ ಹಸಿರು ಕಾರ್ಡ್ ನೀಡುವುದು ಹಾಗೂ ಇನ್ನಿತರ ವೈದ್ಯಕೀಯ ಸೇವೆಗಳು ಲಭ್ಯ. ಅಗತ್ಯವುಳ್ಳವರಿಗೆ ಸಂಘದ ವತಿಯಿಂದ ಉಚಿತ ಕನ್ನಡಕ ವಿತರಣೆ ಮಾಡಲಾಗುವುದು.ಸಂಘದ ಸದಸ್ಯರು ಮತ್ತು ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆಯಬೇಕಾಗಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಇವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದರು.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

