Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಸೌಹಾರ್ದ ಸಹಕಾರಿಗಳ ಬೇಡಿಕೆಯಂತೆ ನೀತಿ ರೂಪು
    News

    ಸೌಹಾರ್ದ ಸಹಕಾರಿಗಳ ಬೇಡಿಕೆಯಂತೆ ನೀತಿ ರೂಪು

    adminBy adminDecember 29, 2025

    ಸೌಹಾರ್ದ ಸಹಕಾರ ಚಳವಳಿಯ ‘ರಜತ ಮಹೋತ್ಸವ’ ಸಮಾರೋಪ ಉದ್ಘಾಟಿಸಿ ಸಚಿವ ಸತೀಶ್‌ ಜಾರಕಿಹೊಳಿ ಭರವಸೆ

    ಬೆಳಗಾವಿ: ‘ರಾಜ್ಯದಲ್ಲಿನ ಸೌಹಾರ್ದ ಸಹಕಾರಿ ಸಂಸ್ಥೆಗಳ ಬೇಡಿಕೆಯಂತೆ ನಾವು ನೀತಿ ರೂಪಿಸುತ್ತೇವೆ. ಸೌಹಾರ್ದ ಸಹಕಾರಿ ಸಂಘಗಳ ಬೆಳವಣಿಗೆಗೆ ಸಹಕರಿಸಲು ನಾವು ಬದ್ಧರಿದ್ದೇವೆ’ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಭರವಸೆ ನೀಡಿದ್ದಾರೆ.

    https://chat.whatsapp.com/FCEnlTkAKCC0MGPhXtX4i4

    ಬೆಳಗಾವಿಯ ಕೆಎಲ್‌ಇ ಸೆಂಟೇನರಿ ಕನ್ವೆನ್ಸನ್ ಸೆಂಟರ್‌ನಲ್ಲಿ ಭಾನುವಾರ ಸೌಹಾರ್ದ ಸಹಕಾರ ಚಳವಳಿಯ ‘ರಜತ ಮಹೋತ್ಸವ’ದ ಸಮಾರೋಪ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ‘ಸಹಕಾರಿ ಸಂಸ್ಥೆಗಳ ಮೇಲೆ ಒಂದಿಷ್ಟಾದರೂ ಸರ್ಕಾರದ ನಿಯಂತ್ರಣವೂ ಬೇಕಾಗುತ್ತದೆ. ಹಾಗೆಂದು ನಾವು ತೊಂದರೆ ಕೊಡುವುದಿಲ್ಲ. ಸಹಕಾರಿ ಸಂಸ್ಥೆಗಳಲ್ಲಿ ಗ್ರಾಹಕರು ಠೇವಣಿ ಇರಿಸುವ ಹಣ ಸುರಕ್ಷಿತವಾಗಿ ಇರಬೇಕು ಎಂಬುದಷ್ಟೇ ನಮ್ಮ ಕಳಕಳಿ. ಸೌಹಾರ್ದ ಸಹಕಾರಿಗಳ ಬೇಡಿಕೆಗಳ ಕುರಿತಾಗಿ ವಿಸ್ತೃತವಾಗಿ ಚರ್ಚೆ ಮಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಬಳಿ ನಿಯೋಗ ಕರೆದುಕೊಂಡು ಹೋಗಿ, ನಿಮ್ಮ ಬೇಡಿಕೆಗಳನ್ನು ಈಡೇರಿಸಲು ಪ್ರಯತ್ನಿಸುವುದಾಗಿ ತಿಳಿಸಿದರು. ಗ್ರಾಮೀಣ ಭಾಗದಲ್ಲಿ ಸೌಹಾರ್ದ ಸಹಕಾರಿ ಸಂಸ್ಥೆಗಳು ಗ್ರಾಹಕರ ವಿಶ್ವಾಸ ಗಳಿಸಿವೆ. ಮನೆ-ಮನೆಗೆ ಹಣ ತಲುಪಿಸುವ ಕೆಲಸ ಮಾಡುತ್ತಿವೆ. ಇಂಥ ಸಂಸ್ಥೆಗಳು ಇನ್ನಷ್ಟು ಪ್ರಗತಿಯತ್ತ ಸಾಗಲಿ ಎಂದು ಆಶಯ ವ್ಯಕ್ತಪಡಿಸಿದರು.
    ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಮಾತನಾಡಿ, ಸಹಕಾರವೆಂದರೆ ಎಲ್ಲರ ಜೀವನವನ್ನು ಅಭಿವೃದ್ಧಿ ಪಡಿಸಲು ಸಲ್ಲಿಸುವ ಅತ್ಯುತ್ತಮ ಸೇವೆ. ಎಲ್ಲರ ಆರ್ಥಿಕತೆಯನ್ನು ಸುಧಾರಿಸಲು ಸಹಕಾರಿ ಕ್ಷೇತ್ರದಿಂದ ಸಾಧ್ಯವಿದೆ ಎಂದು ಹೇಳಿದರು.


    ಶಾಸಕ ಲಕ್ಷ್ಮಣ ಸವದಿ ಮಾತನಾಡಿ ‘ಸಹಕಾರ ಸಂಸ್ಥೆಗಳು ಬಡವರ ಆರ್ಥಿಕತೆ ಸುಧಾರಿಸಲು ವಿವಿಧ ಯೋಜನೆ ರೂಪಿಸಬೇಕು. ನಾನು ಸದಾ ಸಹಕಾರಿ ಸಂಸ್ಥೆಗಳ ಜತೆಗಿರುತ್ತೇನೆ’ ಎಂದು ಭರವಸೆ ನೀಡಿದರು. ವಿಧಾನ ಪರಿಷತ್ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ ಮಾತನಾಡಿ, ಬೆಳಗಾವಿಗೂ, ಸಹಕಾರ ರಂಗಕ್ಕೂ ಅವಿನಾಭಾವ ಸಂಬಂಧವಿದೆ. ಜಿಲ್ಲೆಯ ಅನೇಕ ದಿಗ್ಗಜರು ಕ್ರಿಯಾಶೀಲವಾಗಿ ಕೆಲಸ ಮಾಡಿ, ಸಹಕಾರ ರಂಗಕ್ಕೆ ಹೆಸರು ತಂದಿದ್ದಾರೆ’ ಎಂದರು. ರಾಜ್ಯಸಭಾ ಮಾಜಿ ಸದಸ್ಯರಾದ ಪ್ರಭಾಕರ ಕೋರೆ ಮಾತನಾಡಿ, ಸಹಕಾರ ರಂಗ ಆರಂಭವಾಗಿ 120 ವರ್ಷಗಳಾಯಿತು. ಈಗಲೂ ಸಹಕಾರ ಚಳವಳಿ ಜೀವಂತವಾಗಿದೆ. ರಾಜ್ಯದಲ್ಲಿ ಸಹಕಾರಿ ಸಂಸ್ಥೆಗಳ ಸರ್ಕಾರದ ಸಂಪೂರ್ಣ ನಿಯಂತ್ರಣ ಬೇಡ ಎಂದು ಹೇಳಿದರು.
    ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ಅಧ್ಯಕ್ಷ ಜಿ.ನಂಜನ ಗೌಡ ಅಧ್ಯಕ್ಷತೆ ವಹಿಸಿದ್ದರು. ಬೆಳಗಾವಿ ಉತ್ತರ ಕ್ಷೇತ್ರದ ಶಾಸಕ ಆಸಿಫ್‌ ಸೇಠ್‌, ಪ್ರಮುಖರಾದ ಎಸ್‌.ಎಸ್‌ ಪಾಟೀಲ, ಕಲ್ಲಪ್ಪ ಬಬ್ಬನಗೋಳ, ಮನೋಹರ ಮಸ್ಕಿ, ಎಸ್‌.ಆರ್‌ ಸತೀಶ್ಚಂದ್ರ, ಎಚ್.ವಿ ರಾಜೀವ್‌, ಸಿ.ಎನ್‌ ಪರಶಿವಮೂರ್ತಿ, ಅನೂಪ್‌ ದೇಶಪಾಂಡೆ, ವಿಶ್ವನಾಥ ಹಿಋೇಮಠ, ಗುರುನಾಥ ಜಾಂತೀಕರ್‌, ಬಿ.ಎಚ್‌. ಕೃಷ್ಣ ರೆಡ್ಡಿ, ಸಚಿನ್‌ ಪಾಟೀಲ್‌, ಶರಣಗೌಡ ಪಾಟೀಲ್‌ ಮೊದಲಾದವರು ಹಾಜರಿದ್ದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    Karnataka Rajya Samyukta Souharda Sahakari Lakshman Savadi Lakshmi Hebbalkar Sathish Jarakihole Souharda Kayde Rajatha Mahotsava
    Previous Articleಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘಕ್ಕೆ ಅರಸು ಪ್ರಶಸ್ತಿ ಪ್ರದಾನ
    Next Article ಭಾರತ್‌ ಸಹಕಾರಿ ಟ್ಯಾಕ್ಸಿ ಜನವರಿ 1ರಿಂದ ಕಾರ್ಯಾರಂಭ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.