Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಉತ್ತಮ ಆರೋಗ್ಯಕ್ಕಾಗಿ ಔಷಧಗಳ ಜೊತೆಗೆ ದೈನಂದಿನ ಧ್ಯಾನ
    News

    ಉತ್ತಮ ಆರೋಗ್ಯಕ್ಕಾಗಿ ಔಷಧಗಳ ಜೊತೆಗೆ ದೈನಂದಿನ ಧ್ಯಾನ

    adminBy adminJanuary 1, 2026

    ಆತ್ಮಶಕ್ತಿ ಸಹಕಾರಿ ಸಂಘದ ಆರೋಗ್ಯ ಶಿಬಿರದಲ್ಲಿ ಬ್ರಹ್ಮಕುಮಾರಿ ಬಿ.ಕೆ ವಿಶ್ವೇಶ್ವರಿ ಅಭಿಪ್ರಾಯ

    ಮಂಗಳೂರು: ಶಾರೀರಿಕ ಆರೋಗ್ಯದ ಜೊತೆಗೆ ಮನುಷ್ಯನ ಮನಸ್ಥಿತಿಯೂ ಚೆನ್ನಾಗಿರಬೇಕು. ಈ ನಿಟ್ಟಿನಲ್ಲಿ ಧ್ಯಾನವು ತುಂಬಾ ಪ್ರಯೋಜನಕಾರಿ. ಉತ್ತಮ ಆರೋಗ್ಯಕ್ಕಾಗಿ ಔಷಧಗಳ ಜೊತೆಗೆ ಪ್ರತಿ ದಿನ ಧ್ಯಾನ ಮಾಡುವುದೂ ಉಪಯುಕ್ತವಾದುದು ಎಂದು ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಮಂಗಳೂರು ವಿಭಾಗ ಮುಖ್ಯಸ್ಥರಾದ ಬಿ.ಕೆ ವಿಶ್ವೇಶ್ವರಿ ಹೇಳಿದರು.

    https://chat.whatsapp.com/FCEnlTkAKCC0MGPhXtX4i4
    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಕೊಟ್ಟಾರ ಶಾಖೆಯ ತೃತೀಯ ವಾರ್ಷಿಕೋತ್ಸವ ಪ್ರಯುಕ್ತ ಸಂಜೀವಿನಿ ಡಿವೈನ್ ಹಾಲಿಸ್ಟಿಕ್ ವೆಲ್‌ನೆಸ್ ಸೆಂಟರ್ ಉರ್ವಸ್ಟೋರ್ ಇವರ ಸಹಯೋಗದೊಂದಿಗೆ ಯೆನಪೋಯ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಹಾಗೂ ಸಮುದಾಯ ದಂತ ಆರೋಗ್ಯ ವಿಭಾಗ ದೇರಳಕಟ್ಟೆ ಇವರ ನುರಿತ ವೈದ್ಯರ ತಂಡದವರಿಂದ ಉರ್ವಸ್ಟೋರ್‌ನ ಸಂಜೀವಿನಿ ಡಿವೈನ್ ಹಾಲಿಸ್ಟಿಕ್ ವೆಲ್‌ನೆಸ್ ಸೆಂಟರ್‌ನಲ್ಲಿ ಭಾನುವಾರ ಆಯೋಜಿಸಿದ ಉಚಿತ ಸಾಮಾನ್ಯ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ಚಿಕಿತ್ಸಾ ಶಿಬಿರದಲ್ಲಿ ಅವರು ಮಾತನಾಡಿದರು.
    ಮುಖ್ಯ ಅತಿಥಿಯಾಗಿದ್ದ ಹಿರಿಯ ಧಾರ್ಮಿಕ ಮುಖಂಡ ಯು.ಮಾಧವ ಸುವರ್ಣ ಮಾತನಾಡಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್‌ ಅವರ ಮುಂದಾಳತ್ವದಲ್ಲಿ ಆಯೋಜಿಸುತ್ತಿರುವ ಇಂತಹ ಸಮಾಜಮುಖಿ ಕಾರ್ಯಕ್ರಮಗಳು ಶ್ಲಾಘನೀಯ” ಎಂದು ಶುಭ ಹಾರೈಸಿದರು. ಸಂಜೀವಿನಿ ಡಿವೈನ್ ಹಾಲಿಸ್ಟಿಕ್ ವೆಲ್‌ನೆಸ್ ಸೆಂಟರ್‌ನ ರೇವತಿ ಸನಿಲ್ ಮಾತನಾಡಿ “ಸಂಜೀವಿನಿ ಡಿವೈನ್ ಹಾಲಿಸ್ಟಿಕ್ ವೆಲ್‌ನೆಸ್ ಸೆಂಟರ್‌ನಲ್ಲಿ ಉಚಿತ ರಾಜಯೋಗ ಧ್ಯಾನ, ಜೀವನ ಮೌಲ್ಯಾಧಾರಿತ ಶಿಕ್ಷಣ ಇತ್ಯಾದಿ ಸೇವೆಗಳು ಲಭ್ಯವಿದ್ದು, ಪ್ರತಿ ತಿಂಗಳು ನಡೆಯುವ ಶಿಬಿರದಲ್ಲಿ ಜನರು ಪಾಲ್ಗೊಳ್ಳುವಂತೆ ವಿನಂತಿಸಿದರು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ನಿರಂತರವಾಗಿ ಉಚಿತ ಆರೋಗ್ಯ ಶಿಬಿರಗಳನ್ನು ಆಯೋಜಿಸಿ ಒಳ್ಳೆಯ ಕೆಲಸ ಮಾಡುತ್ತಿದೆ. ಇತ್ತೀಚಿನ ದಿನಗಳಲ್ಲಿ ಆರೋಗ್ಯ ಸಮಸ್ಯೆಗಳು ಕಾಡುವ ಸಂದರ್ಭದಲ್ಲಿ ಇಂತಹ ಶಿಬಿರಗಳನ್ನು ಆಯೋಜಿಸುವ ಮೂಲಕ ಸ್ವಸ್ಥ, ಆರೋಗ್ಯಪೂರ್ಣ ಸಮಾಜಕ್ಕೆ ಮಹತ್ತರವಾದ ಕೊಡುಗೆ ನೀಡಿದಂತಾಗುತ್ತದೆ ಎಂದರು.
    ಯೆನಪೋಯ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಹಾಗೂ ಸಮುದಾಯ ದಂತ ಆರೋಗ್ಯ ವಿಭಾಗ ದೇರಳಕಟ್ಟೆ ಇದರ ವೈದ್ಯರಾದ ಡಾ.ಅಪೂರ್ವ ಕೋಟ್ಯಾನ್ ಮಾತನಾಡಿ, ಎಲ್ಲರೂ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವುದು ತುಂಬಾ ಅತ್ಯಗತ್ಯ. ಶಿಬಿರಾರ್ಥಿಗಳಿಗೆ ಶಸ್ತ್ರಚಿಕಿತ್ಸೆಯ ಅಗತ್ಯವಿದ್ದಲ್ಲಿ ಹಸಿರು ಕಾರ್ಡಿನ ಮೂಲಕ ಉಚಿತವಾಗಿ ಶಸ್ತ್ರಚಿಕಿತ್ಸೆ ಮಾಡಿಕೊಡಲಾಗುವುದು ಎಂದು ತಿಳಿಸಿದರು.


    ಅಧ್ಯಕ್ಷತೆ ವಹಿಸಿದ್ದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಚಿತ್ತರಂಜನ್ ಬೋಳಾರ್‌ ಮಾತನಾಡಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಪ್ರತಿವರ್ಷ ಶಾಖೆಗಳ ವಾರ್ಷಿಕೋತ್ಸವದ ಸಂದರ್ಭದಲ್ಲಿ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ನಿರಂತರವಾಗಿ ಆರೋಗ್ಯ ಶಿಬಿರ ಏರ್ಪಡಿಸುತ್ತಾ ಬಂದಿದ್ದು, ಇದು ಸಂಘದ 97ನೇ ಉಚಿತ ವೈದ್ಯಕೀಯ ಶಿಬಿರವಾಗಿದೆ. ಫೆಬ್ರವರಿ ತಿಂಗಳ ಒಂದರಂದು ಪಡೀಲ್‌ನಲ್ಲಿ 100ನೇ ವೈದ್ಯಕೀಯ ಶಿಬಿರವನ್ನು ವ್ಯವಸ್ಥಿತವಾಗಿ ಬಹಳ ದೊಡ್ಡ ಮಟ್ಟದಲ್ಲಿ ಆಯೋಜಿಸಲಾಗುವುದು. ಈ ಕಾರ್ಯಕ್ರಮವು ಬಡವರ್ಗದ ಜನರಿಗೆ ಮಾತ್ರವಲ್ಲದೇ ಶ್ರೀಮಂತ ವರ್ಗದ ಜನರಿಗೂ ಕೂಡ ತುಂಬ ಪ್ರಯೋಜನಕಾರಿಯಾಗಿದೆ ಎಂದು ಹೇಳಿದರು.
    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನಿರ್ದೇಶಕರಾದ ರಮಾನಾಥ್‌ ಸನಿಲ್, ಮುದ್ದು ಮೂಡುಬೆಳ್ಳೆ, ಗೋಪಾಲ್ ಎಂ., ಉಮಾವತಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್, ಯೆನಪೋಯ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಹಾಗೂ ಸಮುದಾಯ ದೇರಳಕಟ್ಟೆ ಇದರ ವೈದ್ಯರಾದ ಡಾ. ಅನುಪಮ ನಾಯರ್ ಮತಿತ್ತರರು ಉಪಸ್ಥಿತರಿದ್ದರು. ಸುಮಾರು ೧೩೦ಕ್ಕೂ ಹೆಚ್ಚು ಶಿಬಿರಾರ್ಥಿಗಳಿಗೆ ಉಚಿತ ನೇತ್ರ ತಪಾಸಣಾ, ದಂತ ತಪಾಸಣಾ ಮತ್ತು ಸಾಮಾನ್ಯ ವೈದ್ಯಕೀಯ, ಉಚಿತ ಔಷಧಿ ವಿತರಣೆ ಹಾಗೂ ಉಚಿತ ಕನ್ನಡಕ ವಿತರಣೆ ನಡೆಸಲಾಯಿತು. ಸಂಜೀವಿನಿ ಡಿವೈನ್ ಹಾಲಿಸ್ಟಿಕ್ ವೆಲ್‌ನೆಸ್ ಸೆಂಟರ್‌ನ ರೇವತಿ ಸನಿಲ್ ಸ್ವಾಗತಿಸಿ, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಪ್ರಭಾರ ಶಾಖಾಧಿಕಾರಿ ಆಶಾ ವಂದಿಸಿದರು. ಸಂಘದ ಹಿರಿಯ ಶಾಖಾಧಿಕಾರಿ ಸೌಮ್ಯಲತಾ ಕಾರ್ಯಕ್ರಮ ನಿರೂಪಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    Atmashakthi Vividhoddesha Sahakari Sangha Free Health Camp Sanjeevini Devine Holistic Wellness Centre Yenepoya
    Previous Article16 ಕೋಟಿ ದಾಟಿದ ಪ್ಯಾಕ್ಸ್‌ ಸದಸ್ಯತ್ವ
    Next Article ದಕ್ಷಿಣ ಕನ್ನಡ ಜಿಲ್ಲಾ ಸಂಪರ್ಕ ಕಚೇರಿಯಲ್ಲಿ ಸೌಹಾರ್ದ ದಿನಾಚರಣೆಯ ಧ್ವಜಾರೋಹಣ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.