Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ಕಂಕನಾಡಿ ಶ್ರೀ ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರಕ್ಕೆ ಕುಡಿಯುವ ನೀರು ಶುದ್ದೀಕರಣ ಯಂತ್ರ ಕೊಡುಗೆ
    News

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ಕಂಕನಾಡಿ ಶ್ರೀ ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರಕ್ಕೆ ಕುಡಿಯುವ ನೀರು ಶುದ್ದೀಕರಣ ಯಂತ್ರ ಕೊಡುಗೆ

    adminBy adminJanuary 5, 2026

    ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಮಂಗಳೂರು ಇದರ ವತಿಯಿಂದ ಕಂಕನಾಡಿ ಶ್ರೀ ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರಕ್ಕೆ ನಿತ್ಯ ಕುಡಿಯುವ ನೀರು ಶುದ್ದೀಕರಿಸಲು ಅನುಕೂಲವಾಗುವ ನಿಟ್ಟಿನಲ್ಲಿ ಕೊಡುಗೆಯಾಗಿ ಕುಡಿಯುವ ನೀರು ಶುದ್ದೀಕರಣ ಯಂತ್ರವನ್ನು ಹಸ್ತಾಂತರಿಸುವ ಕಾರ್ಯಕ್ರಮ ಕಂಕನಾಡಿಯ ಶ್ರೀ ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರದಲ್ಲಿ ಇತ್ತೀಚೆಗೆ ಜರುಗಿತು.

    https://chat.whatsapp.com/FCEnlTkAKCC0MGPhXtX4i4
    ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಕುಡಿಯುವ ನೀರು ಶುದ್ದೀಕರಣ ಯಂತ್ರವನ್ನು ಶ್ರೀ ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರದ ಅಧ್ಯಕ್ಷರಾದ ಚಿತ್ತರಂಜನ್ ಕೆ ಇವರಿಗೆ ಹಸ್ತಾಂತರಿಸಿದರು. ಸಂಘದ ಆಡಳಿತ ಮಂಡಳಿಯ ನಿರ್ದೇಶಕರಾದ ಜಿ. ಪರಮೇಶ್ವರ ಪೂಜಾರಿ, ಆನಂದ ಎಸ್. ಕೊಂಡಾಣ, ರಮಾನಾಥ್ ಸನಿಲ್, ಮುದ್ದು ಮೂಡುಬೆಳ್ಳೆ, ಗೋಪಾಲ್ ಎಂ, ಮುಖ್ಯಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್, ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರದ ಮ್ಯಾನೇಜರ್ ಜೆ. ಕಿಶೋರ್ ಮಜಿಲ, ಟ್ರಸ್ಟಿಗಳಾದ ಜಗದೀಪ್ ಡಿ. ಸುವರ್ಣ, ವಿಠಲ್ ಎ, ವಾಮನ, ಕ್ಷೇತ್ರದ ಮುಖಂಡರಾದ ಮೋಹನ್ ನೆಕ್ಕೆರೆಮಾರ್, ವಸಂತ ಪೂಜಾರಿ, ಪ್ರಕಾಶ್ ಗರೋಡಿ, ಅರ್ಚಕರಾದ ಮನೋಜ್ ಶಾಂತಿ, ಹರೀಶ್ ಶಾಂತಿ, ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಪ್ರಕಾಶನ ಮತ್ತು ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾದ ಗೋಪಾಲ್ ಪೂಜಾರಿ ವೀರನಗರ, ಮ.ನ.ಪಾ ನಿಕಟಪೂರ್ವ ಸದಸ್ಯರಾದ ಸಂದೀಪ್ ಗರೋಡಿ, ಮತ್ತಿತರರು ಹಾಜರಿದ್ದರು .
    ಸಂಘವು ಕೇವಲ ಆರ್ಥಿಕ ಚಟುವಟಿಕೆಗಳಿಗಷ್ಟೆ ಸೀಮಿತವಾಗಿರದೆ ಸಮಾಜಸೇವೆಯಲ್ಲಿ ಕೂಡಾ ಸೇವಾಕಾರ್ಯವ ವಿಸ್ತರಿಸಿಕೊಂಡಿದೆ. ಆರೋಗ್ಯ ಶಿಬಿರಗಳು, ಉಚಿತ ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್ ವಿತರಣೆ, ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ, ಅರ್ಹ ವಿದ್ಯಾರ್ಥಿಗಳಿಗೆ ಐ.ಎ.ಎಸ್/ ಕೆ.ಎ.ಎಸ್ ಮುಂತಾದ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸಲು ಉಚಿತ ಪ್ರೇರಣಾ ಶಿಬಿರ ಆಯೋಜನೆ, ಸರ್ಕಾರಿ ಪ್ರೌಢಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಬಡ ವಿದ್ಯಾರ್ಥಿಗಳಿಗೆ ಎಸ್.ಎಸ್.ಎಲ್.ಸಿ ಪರೀಕ್ಷೆಯ ಮಾದರಿ ಪ್ರಶ್ನೋತ್ತರಗಳ ವಿತರಣೆ, ಸಾರ್ವಜನಿಕರ ಉಪಯೋಗಕ್ಕಾಗಿ ಬಸ್‌ ತಂಗುದಾಣ ನಿರ್ಮಾಣ, ದಶಮಾನೋತ್ಸವ ಸಂದರ್ಭದಲ್ಲಿ ಅರ್ಹ ಬಡ ಕುಟುಂಬದ ಸಂಘದ ಸದಸ್ಯರ ಮನೆ ನಿರ್ಮಾಣ, ಶಾಲೆಗಳಿಗೆ ಪಿಠೋಪಕರಣ ವಿತರಣೆ ಇತ್ಯಾದಿ ಸಮಾಜಮುಖಿ ಕಾರ್ಯಕ್ರಮಗಳ ಅನುಷ್ಠಾನಗೊಳಿಸಿದೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    Atmashakthi Vividhoddesha Sahakari Sangha Kankanady Shree Brahma Baidarkala Garadi Kshetra Kudiyuva neerin ghataka
    Previous Articleಸನ್‌ರೈಸ್‌ ಸೌಹಾರ್ದ ಪತ್ತಿನ ಸಹಕಾರಿ ಸಂಘದ ಪ್ರಥಮ ಶಾಖೆ ಕೋಳಾಲ ಗ್ರಾಮದಲ್ಲಿ ಉದ್ಘಾಟನೆ
    Next Article ನಮ್ಮ ಪರಿಸರ ನೈರ್ಮಲ್ಯ ನಮ್ಮದೇ ಹೊಣೆ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.