Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಕಸ ಹಾಕುವ ಮನಸ್ಥಿತಿ ತೊರೆಯಲು ಕಸ ಹೆಕ್ಕುವ ಆಂದೋಲನ
    News

    ಕಸ ಹಾಕುವ ಮನಸ್ಥಿತಿ ತೊರೆಯಲು ಕಸ ಹೆಕ್ಕುವ ಆಂದೋಲನ

    adminBy adminJanuary 5, 2026

    ಅವೇಕ್ ಕುಡ್ಲ ಸಂಚಾಲಕ ಉಮಾನಾಥ್ ಕೋಟೆಕಾರ್ ಅಭಿಪ್ರಾಯ

    ಮಂಗಳೂರು: ಕಸ ಎಸೆಯುವ ಮನಸ್ಥಿತಿ ಬದಲಾಯಿಸಬೇಕಾದರೆ ಸಾರ್ವಜನಿಕವಾಗಿ ಕಸ ಹೆಕ್ಕುವ ಸಂಪ್ರದಾಯ ಮೂಡಿ ಅದು ಸಾರ್ವತ್ರಿಕವಾಗಬೇಕು. ಪೋಷಕರು ಪ್ರತಿ ಮನೆಗಳಲ್ಲೂ ಮಕ್ಕಳಿಗೆ ಸಣ್ಣ ಪ್ರಾಯದಲ್ಲಿ ಸ್ವಚ್ಛತೆಯ ಅರಿವು ಮೂಡಿಸುವ ಕಾರ್ಯ ಮಾಡಬೇಕಾಗಿದೆ. ಆ ಮೂಲಕ ಮುಂದಿನ ಜಾಗೃತ ಸಮಾಜವನ್ನು ನಿರ್ಮಾಣ ಮಾಡಬೇಕು ಎಂದು ಅವೇಕ್ ಕುಡ್ಲ ಸಂಚಾಲಕರಾದ ಉಮಾನಾಥ್ ಕೋಟೆಕಾರ್ ಹೇಳಿದರು.

    https://chat.whatsapp.com/FCEnlTkAKCC0MGPhXtX4i4
    ವಿಶ್ವಕರ್ಮ ಸಹಕಾರ ಬ್ಯಾಂಕಿನ ಮಂಗಳೂರು ಶಾಖೆಯ ಆಶ್ರಯದಲ್ಲಿ “ಸ್ವಚ್ಛತಾ ಹೀ ಸೇವಾ” ಧ್ಯೇಯದೊಂದಿಗೆ ನಡೆದ ಹದಿನಾರನೇ ಸ್ವಚ್ಛ ಭಾರತ ಶ್ರಮದಾನದಲ್ಲಿ ಭಾಗವಹಿಸಿದ ಸ್ವಯಂಸೇವಕರನ್ನು ಉದ್ದೇಶಿಸಿ ಮಾತನಾಡಿಡದರು.
    ಪತ್ರಕರ್ತ ಗುರುಪ್ರಸಾದ್ ಎಸ್ ಮಾತನಾಡಿ, ನಾಗರಿಕ ಸಮಾಜದಲ್ಲಿ ಸ್ವಚ್ಛತೆಯ ಪರಿಪಾಠವೂ ನಮ್ಮ ಮನೆ, ಮನದಾಳದಿಂದ ಮೂಡಬೇಕು, ಈ ನಿಟ್ಟಿನಲ್ಲಿ ಪ್ರತೀ ಮನೆಗಳಂತೆ ಸಂಘ ಸಂಸ್ಥೆಗಳೂ ಜವಾಬ್ದಾರಿಯುತ ಪಾತ್ರವನ್ನು ಹೊಂದಿರುತ್ತದೆ. ಈ ಹಿನ್ನಲೆಯಲ್ಲಿ ವಿಶ್ವಕರ್ಮ ಸಹಕಾರ ಬ್ಯಾಂಕ್ ಒಂದು ಉತ್ತಮ ಉದಾಹರಣೆ ಎಂದು ಅಭಿಪ್ರಾಯಪಟ್ಟರು.
    ವಿಶ್ವಕರ್ಮ ಸಹಕಾರ ಬ್ಯಾಂಕಿನ ಅಧ್ಯಕ್ಷರಾದ ಡಾ.ಎಸ್. ಆರ್. ಹರೀಶ್ ಆಚಾರ್ಯ, ಮಂಗಳೂರು ಮಹಾನಗರ ಪಾಲಿಕೆಯ ಮರೋಳಿ ವಾರ್ಡ್‌ನ ನಿಕಟಪೂರ್ವ ಸದಸ್ಯ ಕೇಶವ ಮರೋಳಿ, ಯಮುನಾ ರೆಸಿಡೆನ್ಸಿ ಕಟ್ಟಡ ಮಾಲೀಕರ ಸಂಘದ ಅಧ್ಯಕ್ಷ ಪುಟ್ಟಸ್ವಾಮಿ, ಎಸ್.ಸಿ. ವರ್ಮ ಇವರುಗಳು ಹಸಿರು ನಿಶಾನೆ ತೋರುವ ಮೂಲಕ ಶ್ರಮದಾನಕ್ಕೆ ಚಾಲನೆ ನೀಡಿದರು. 


    ಬಳಿಕ ಮರೋಳಿಯ ಬಾಕಿಮಾರು ಜುಂಕ್ಷನ್, ಯಮುನಾ ರೆಸಿಡೆನ್ಸಿ, ಸೂರ್ಯನಾರಾಯಣ ದೇವಸ್ಥಾನ ರಸ್ತೆ, ಜಯನಗರ ರಸ್ತೆ ಪರಿಸರಗಳಲ್ಲಿ ಸ್ವಚ್ಛತಾ ಶ್ರಮದಾನ ಜರುಗಿತು. ವಿಶ್ವಕರ್ಮ ಸಹಕಾರ ಬ್ಯಾಂಕಿನ ನಿರ್ದೇಶಕರಾದ ಹರಿಪ್ರಸಾದ್, ವ್ಯವಸ್ಥಾಪಕ ನಿರ್ದೇಶಕರಾದ ವಸಂತ ಅಡ್ಯಂತಾಯ, ದಕ್ಷಿಣ ಕನ್ನಡ ಚಿನ್ನದ ಕೆಲಸಗಾರರ ಸಂಘದ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಹಳೇಜಿ, ಸಾಮಾಜಿಕ ಕಾರ್ಯಕರ್ತ ಅರುಣ್ ಶೆಟ್ಟಿ ಮರೋಳಿ, ಭಾಸ್ಕರ ದೇವಾಡಿಗ, ರಂಜಿತ್‌, ಯಮುನಾ ರೆಸಿಡೆನ್ಸಿ ಕಟ್ಟಡ ಮಾಲಕರ ಸಂಘದ ಪದಾಧಿಕಾರಿಗಳಾದ ರಾಧಾಕೃಷ್ಣ ರೈ, ಸಂಜೀವ ರೈ, ಪುರಂದರ ಶೆಟ್ಟಿ, ಡಾ.ಮಹೇಶ್ ಶೇಣವ, ಮಂಜುನಾಥ್ ಕುಲಕರ್ಣಿ, ಬಾಲಕೃಷ್ಣ ಶೆಟ್ಟಿ, ವಾಣಿ ರೈ, ಮಮತಾ ರೋಹಿತ್ ರಾಜ್ ಮತ್ತಿತರರು, ಕರಸೇವಾ ಬಳಗ ಶ್ರೀ ಸೂರ್ಯನಾರಾಯಣ ದೇವಸ್ಥಾನ ಮರೋಳಿ, ಹಿಂದೂ ಯುವ ಸೇನೆ ಸೂರ್ಯನಾರಾಯಣ ಶಾಖೆ, ಮರೋಳಿ ಯುವಕ ಮಂಡಳ, ವಿಶ್ವ ಹಿಂದೂ ಪರಿಷತ್, ಭಜರಂಗ ದಳ ಅಭಿಮನ್ಯು ಶಾಖೆ ಇದರ ಕಾರ್ಯಕರ್ತರು, ಬ್ಯಾಂಕಿನ ಸದಸ್ಯರು, ಗ್ರಾಹಕರು ಹಾಗೂ ಸಿಬ್ಬಂದಿಗಳು ಸ್ವಯಂಸೇವಕರಾಗಿ ಸಹಕರಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

     

    Dakshina Kannada Chinnada Kelasagarara Sangha Maroli Shree Suryanarayana temple Swachhatha Hi Seva Vishwakarma Sahakara Bank Limited Yamuna Residency Maroli
    Previous Articleನಮ್ಮ ಪರಿಸರ ನೈರ್ಮಲ್ಯ ನಮ್ಮದೇ ಹೊಣೆ
    Next Article ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆ ನವೀಕರಣ, ಹೊಸ ನೋಂದಣಿ ಪ್ರಾರಂಭ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.