ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಪಂಜಿಮೊಗರು ಶಾಖೆಯ ಒಂಬತ್ತನೇ ವಾರ್ಷಿಕೋತ್ಸವ ಪ್ರಯುಕ್ತ ಉಚಿತ ಸಾಮಾನ್ಯ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ಚಿಕಿತ್ಸಾ ಶಿಬಿರವು ಶ್ರೀ ಗೋಪಾಲಕೃಷ್ಣ ಭಜನಾ ಮಂಡಳಿ, ಉರುಂದಾಡಿ ಪಂಜಿಮೊಗರು, ಯುವವಾಹಿನಿ ಕೂಳೂರು ಘಟಕ, ಲಯನ್ಸ್ ಕ್ಲಬ್ ಮಂಗಳೂರು ಲೇಡಿಹಿಲ್ ಮತ್ತು ಲಯನ್ಸ್ ಕ್ಲಬ್ ಕುದುರೆಮುಖ ಹಾಗೂ ವಿಶ್ವ ಹಿಂದೂ ಪರಿಷತ್ ಬಜರಂಗದಳ ಕಾವೂರು ಪ್ರಖಂಡ ಇವರ ಸಹಯೋಗದೊಂದಿಗೆ ಉರುಂದಾಡಿಯ ಶ್ರೀ ಗೋಪಾಲಕೃಷ್ಣ ಭಜನಾ ಮಂಡಳಿಯ ಸಭಾಭವನದಲ್ಲಿ ಜರುಗಿತು.
https://chat.whatsapp.com/FCEnlTkAKCC0MGPhXtX4i4
ನಿಕಟಪೂರ್ವ ಕಾರ್ಪೋರೇಟರ್ ಅನಿಲ್ ಕುಮಾರ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ,ಆತ್ಮಶಕ್ತಿ ಸಹಕಾರಿ ಸಂಸ್ಥೆಯು ಗ್ರಾಮೀಣ ಭಾಗದ ಜನರಿಗೆ ನಿರಂತರವಾಗಿ ಆರೋಗ್ಯ ಶಿಬಿರ ಏರ್ಪಡಿಸುತ್ತ ಬಂದಿದ್ದು ಇಂತಹ ಸಮಾಜಮುಖಿ ಕಾರ್ಯಗಳನ್ನು ಮುಂದಿನ ದಿನಗಳಲ್ಲಿ ಇನ್ನಷ್ಟು ಮಾಡಲಿ ಎಂದು ಶುಭ ಹಾರೈಸಿದರು. ಮಂಗಳ ಕಾಲೇಜು ,ಮಂಗಳ ಆಸ್ಪತ್ರೆ ಮತ್ತು ಮಂಗಳ ಕಿಡ್ನಿ ಫೌಂಡೇಶನ್ ಕದ್ರಿ ಇದರ ವಿದ್ಯಾರ್ಥಿನಿ ಮಂಜುಳಾ ಆರೋಗ್ಯದ ಮುಂಜಾಗ್ರತೆ ಹಾಗೂ ಮಹತ್ವದ ಬಗ್ಗೆ ತಿಳಿಸಿದರು.
ಅಧ್ಯಕ್ಷತೆ ವಹಿಸಿದ್ದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಮಾತನಾಡಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಪ್ರತಿವರ್ಷ ಶಾಖೆಗಳ ವಾರ್ಷಿಕೋತ್ಸವದ ಸಂದರ್ಭದಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ನಿರಂತರ ಶಿಬಿರಗಳನ್ನು ಆಯೋಜಿಸುತ್ತಿದೆ. ಇದು ಸಂಘದ 98ನೇ ಉಚಿತ ವೈದ್ಯಕೀಯ ಶಿಬಿರವಾಗಿದೆ. ಪ್ರತಿ ಶಿಬಿರದಲ್ಲೂ 200ಕ್ಕೂ ಮಿಕ್ಕಿ ಶಿಬಿರಾರ್ಥಿಗಳು ಭಾಘವಹಿಸುತ್ತಿದ್ದಾರೆ.
ಶಿಬಿರದಲ್ಲಿ ಫಲಾನುಭವಿಗಳಿಗೆ ಉಚಿತ ಕನ್ನಡಕ ವಿತರಣೆ ಮಾಡಲಾಯಿತು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನಿರ್ದೇಶಕರಾದ ರಮಾನಾಥ್ ಸನಿಲ್, ಗೋಪಾಲ್ ಎಂ, ಗೋಪಾಲಕೃಷ್ಣ ಭಜನಾ ಮಂಡಳಿಯ ಅದ್ಯಕ್ಷ ಸುಜಿತ್ ಕುಮಾರ್, ಯುವವಾಹಿನಿ ಕೂಳೂರು ಘಟಕದ ಅದ್ಯಕ್ಷ ಲತೀಶ್, ಲಯನ್ಸ್ ಕ್ಲಬ್ ಮಂಗಳೂರು ಲೇಡಿಹಿಲ್ ಅದ್ಯಕ್ಷ ವಿಕ್ಟರ್ ಮೋರಸ್, ಲಯನ್ಸ್ ಕ್ಲಬ್ ಕುದುರೆಮುಖ ಇದರ ಕಾರ್ಯದರ್ಶಿ ನಾಗೇಶ್ ಕೆ., ವಿಶ್ವ ಹಿಂದೂ ಪರಿಷತ್ ಬಜರಂಗದಳ ಕಾವೂರು ಪ್ರಖಂಡದ ವಿಜಯ್, ಮಂಗಳ ಕಾಲೇಜು, ಮಂಗಳ ಆಸ್ಪತ್ರೆ ಮತ್ತು ಮಂಗಳ ಕಿಡ್ನಿ ಫೌಂಡೇಶನ್ ಕದ್ರಿ, ಇದರ ಸಂಯೋಜಕರು ಡಾ.ಆದ್ರ, ಶ್ರೀನಿವಾಸ್ ಇನ್‌ಸ್ಟಿಟ್ಯೂಟ್ ಆಫ್ ಡೆಂಟಲ್ ಸೈನ್ಸ್ ಮುಕ್ಕ ಸುರತ್ಕಲ್ ಇದರ ಡಾ.ಸಿಂಧು, ಲಯನ್ಸ್ ಕ್ಲಬ್ ಚೇರ್‌ಮನ್ ಎಸ್ ಶೀನ ಪೂಜಾರಿ ಉಪಸ್ಥಿತರಿದ್ದರು. 150ಕ್ಕೂ ಹೆಚ್ಚು ಶಿಬಿರಾರ್ಥಿಗಳಿಗೆ ಉಚಿತ ನೇತ್ರ ತಪಾಸಣಾ, ದಂತ ತಪಾಸಣಾ ಮತ್ತು ಸಾಮಾನ್ಯ ವೈದ್ಯಕೀಯ ಹಾಗೂ ಉಚಿತ ಔಷಧ ವಿತರಣೆ ನಡೆಸಲಾಯಿತು.
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್ ಕಾರ್ಯಕ್ರಮ ನಿರೂಪಿಸಿದರು. ಹಿರಿಯ ಶಾಖಾಧಿಕಾರಿ ರವಿಕಲಾ ಸ್ವಾಗತಿಸಿದರು, ಶ್ರುತಿ ಕುಮಾರಿ ವಂದಿಸಿದರು.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

