Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ವಿಶ್ವಕರ್ಮ ಸಹಕಾರ ಬ್ಯಾಂಕ್ ವತಿಯಿಂದ ಸ್ವಚ್ಛತಾ ಹೀ ಸೇವಾ 17ನೇ ಶ್ರಮದಾನ
    News

    ವಿಶ್ವಕರ್ಮ ಸಹಕಾರ ಬ್ಯಾಂಕ್ ವತಿಯಿಂದ ಸ್ವಚ್ಛತಾ ಹೀ ಸೇವಾ 17ನೇ ಶ್ರಮದಾನ

    adminBy adminJanuary 11, 2026
    filter: 0; fileterIntensity: 0.0; filterMask: 0; brp_mask:0; brp_del_th:null; brp_del_sen:null; delta:null; module: photo;hw-remosaic: false;touch: (-1.0, -1.0);sceneMode: 8;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 36;

    ಉಡುಪಿ: ವಿಶ್ವಕರ್ಮ ಸಹಕಾರ ಬ್ಯಾಂಕ್ ಇದರ ಸುವರ್ಣ ವರ್ಷಾಚರಣೆಯ ಅಂಗವಾಗಿ ಬ್ಯಾಂಕಿನ ಉಡುಪಿ ಶಾಖೆಯ ನೇತೃತ್ವದಲ್ಲಿ ಉಡುಪಿ ದೊಡ್ಡಣ್ಣಗುಡ್ಡೆ ಪರಿಸರದಲ್ಲಿ ಭಾನುವಾರ “ಸ್ವಚ್ಛತಾ ಹೀ ಸೇವಾ” ಘೋಷಣೆಯಡಿ ಬ್ಯಾಂಕಿನ ಸ್ವಚ್ಛ ಭಾರತ್ 17ನೇ ಶ್ರಮದಾನ ಕಾರ್ಯಕ್ರಮ ಯಶಸ್ವಿಯಾಗಿ ಆಯೋಜಿಸಲಾಯಿತು.

    https://chat.whatsapp.com/FCEnlTkAKCC0MGPhXtX4i4

    ಕಾರ್ಯಕ್ರಮಕ್ಕೆ ವಿಷ್ಣುಮೂರ್ತಿ ಫ್ರೆಂಡ್ಸ್ ದೊಡ್ಡಣ್ಣಗುಡ್ಡೆ ಇದರ ಅಧ್ಯಕ್ಷ ರಾಧಾಕೃಷ್ಣ ಶೆಟ್ಟಿ, ಜೆಸಿಐ ದೊಡ್ಡಣ್ಣಗುಡ್ಡೆ ಪ್ರಕೃತಿ ಇದರ ಸಂಸ್ಥಾಪಕ ಎಂ.ಎನ್ ನಾಯಕ್ ಮತ್ತು ವಿಶ್ವಕರ್ಮ ಸಮಾಜ ಸೇವೆ ಸಂಘ, ಸಗ್ರಿ-ಚಕ್ರತೀರ್ಥ ಇದರ ಅಧ್ಯಕ್ಷರಾದ ಶ್ರೀಪತಿ ಆಚಾರ್ಯ ಮತ್ತು ವಿಶ್ವಕರ್ಮ ಸಹಕಾರ ಬ್ಯಾಂಕಿನ ಅಧ್ಯಕ್ಷರಾದ ಡಾ. ಎಸ್. ಆರ್. ಹರೀಶ್ ಆಚಾರ್ ಜೊತೆಗೂಡಿ ಚಾಲನೆ ನೀಡಿದರು.
    ವಿಷ್ಣುಮೂರ್ತಿ ಫ್ರೆಂಡ್ಸ್ ದೊಡ್ಡಣ್ಣಗುಡ್ಡೆ ಇದರ ಅಧ್ಯಕ್ಷ ರಾಧಾಕೃಷ್ಣ ಶೆಟ್ಟಿ ಮಾತನಾಡಿ ಸ್ವಚ್ಛ ಪರಿಸರವು ಉತ್ತಮ ಆರೋಗ್ಯ ಮತ್ತು ಸುಸ್ಥಿರ ಸಮಾಜದ ಆಧಾರವಾಗಿದ್ದು, ಸ್ವಚ್ಛತೆಯನ್ನು ಪ್ರತಿಯೊಬ್ಬರೂ ಜೀವನದ ಭಾಗವಾಗಿಸಿಕೊಳ್ಳಬೇಕು. ಈ ವಿಷಯದಲ್ಲಿ ಜಾಗೃತಿ ಮೂಡಿಸಿ ಎಚ್ಚರಿಸುವ ಮಾನವೀಯ ಹಾಗೂ ಸಾಮಾಜಿಕ ಕಾರ್ಯವನ್ನು ವಿಶ್ವಕರ್ಮ ಸಹಕಾರ ಬ್ಯಾಂಕ್ ಮಾಡುತ್ತಿರುವುದು ಅದರ ಸಾಮಾಜಿಕ ಬದ್ಧತೆಯನ್ನು ತೋರಿಸುತ್ತದೆ ಎಂದು ಹೇಳಿದರು.
    ಜೆಸಿಐ ದೊಡ್ಡಣ್ಣಗುಡ್ಡೆ ಪ್ರಕೃತಿ ಇದರ ಸಂಸ್ಥಾಪಕ ಎಂ.ಎನ್. ನಾಯಕ್ ಮಾತನಾಡಿ ನಮ್ಮ ಸುತ್ತಮುತ್ತಲ ಪರಿಸರ ಸ್ವಚ್ಛವಾಗಿದ್ದರೆ ಮಾತ್ರ ಮುಂದಿನ ತಲೆಮಾರಿಗೆ ಉತ್ತಮ ಭವಿಷ್ಯ ನೀಡಲು ಸಾಧ್ಯ ಎಂದು ಹೇಳಿದರು.
    ವಿಶ್ವಕರ್ಮ ಸಹಕಾರ ಬ್ಯಾಂಕಿನ ಉಪಾಧ್ಯಕ್ಷ ಜಗದೀಶ್ ಪಿ ಆಚಾರ್ಯ, ನಿರ್ದೇಶಕ ಜಗದೀಶ್ ಜೆ ಆಚಾರ್ಯ, ವಿಷ್ಣುಮೂರ್ತಿ ಫ್ರೆಂಡ್ಸ್ ದೊಡ್ಡಣ್ಣಗುಡ್ಡೆ ಇದರ ಅಧ್ಯಕ್ಷ ರಾಧಾಕೃಷ್ಣ ಶೆಟ್ಟಿ, ಸ್ಥಾಪಕಾಧ್ಯಕ್ಷ ಸತೀಶ್ ಪುತ್ರನ್, ಪದಾಧಿಕಾರಿಗಳಾದ ನಿತಿನ್, ರಾಜೇಶ್ ಮತ್ತು ಸದಸ್ಯರು ಹಾಗೂ ಜೆಸಿಐ ದೊಡ್ಡಣ್ಣಗುಡ್ಡೆ ಪ್ರಕೃತಿ ಇದರ ಸಂಸ್ಥಾಪಕ ಜೆಸಿ ಎಂ.ಎನ್. ನಾಯಕ್, ಅಧ್ಯಕ್ಷ ಜೆಸಿ ಭರತ್ ಕುಮಾರ್, ಪೂರ್ವ ಅಧ್ಯಕ್ಷ ಮಾಜಿ ಸೈನಿಕ ಜೆಸಿ ಕೇಶವ ಆಚಾರ್ಯ, ಪದಾಧಿಕಾರಿಗಳಾದ ಜೆಸಿ ಉಮೇಶ್ ಆಚಾರ್ಯ, ಜೆಸಿ ಪ್ರಶಾಂತ್ ಆಚಾರ್ಯ, ಜೆಸಿ ಪ್ರಾರ್ಥನಾ ಮತ್ತು ಸದಸ್ಯರು ಹಾಗೂ ವಿಶ್ವಕರ್ಮ ಸಮಾಜ ಸೇವಾ ಸಂಘ ಸಗ್ರಿ- ಚಕ್ರತೀರ್ಥ ಇದರ ಅಧ್ಯಕ್ಷ ಶ್ರೀಪತಿ ಆಚಾರ್ಯ, ಪದಾಧಿಕಾರಿಗಳಾದ ರಾಮ್ ಆಚಾರ್ಯ, ಹರಿಕೃಷ್ಣ ಆಚಾರ್ಯ, ಪ್ರಸಾದ್ ಮತ್ತು ಸದಸ್ಯರು ಹಾಗೂ ವಿಷ್ಣುಮೂರ್ತಿ ಮಹಿಳಾ ಮಂಡಳಿ ದೊಡ್ಡಣ್ಣಗುಡ್ಡೆ ಇದರ ಅಧ್ಯಕ್ಷೆ ವಾರಿಜಾ, ಗೌರವಾಧ್ಯಕ್ಷೆ ರೂಪಾ ಸಂದೇಶ್, ಕಾರ್ಯದರ್ಶಿ ಸುಮನಾ ಜಿ ಮತ್ತು ಸದಸ್ಯರು, ಬ್ಯಾಂಕಿನ ಗ್ರಾಹಕರು ಹಾಗೂ ಸಿಬ್ಬಂದಿಗಳು ಸ್ವಯಂಸೇವಕರಾಗಿ ಶ್ರಮದಾನದಲ್ಲಿ ಭಾಗವಹಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    JCI Doddanagudde Vishnumurti friends doddanagudde Vishwakarma Sahakara Bank Limited
    Previous Articleಸಹಕಾರದಿಂದ ಸಮೃದ್ಧಿ: ಸಹಕಾರ ಭಾರತಿಯಿಂದ ಸಹಕಾರ ಕ್ಷೇತ್ರ ಬಲವರ್ಧನೆ
    Next Article ಸಹಕಾರ ಭಾರತಿ ಸ್ಥಾಪನಾ ದಿನ ಆಚರಣೆ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.