Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಜನವರಿ 18ರಂದು ಪ್ರಣವ ಸೌಹಾರ್ದ ಸಹಕಾರಿ ಸಂಘದ 11ನೇ ವಾರ್ಷಿಕೋತ್ಸವ, ಗ್ರಾಹಕರ ಸಭೆ
    News

    ಜನವರಿ 18ರಂದು ಪ್ರಣವ ಸೌಹಾರ್ದ ಸಹಕಾರಿ ಸಂಘದ 11ನೇ ವಾರ್ಷಿಕೋತ್ಸವ, ಗ್ರಾಹಕರ ಸಭೆ

    adminBy adminJanuary 14, 2026

    ಮಂಗಳೂರು: ಇಲ್ಲಿನ ಯೆಯ್ಯಾಡಿಯಲ್ಲಿ ಪ್ರಧಾನ ಕಚೇರಿ ಹೊಂದಿರುವ ಪ್ರಣವ ಸೌಹಾರ್ದ ಸಹಕಾರಿ ಸಂಘದ ೧೧ನೇ ವಾರ್ಷಿಕೋತ್ಸವ ಸಮಾರಂಭ ಹಾಗೂ ಗ್ರಾಹಕರ ಸಭೆಯು ಜನವರಿ 18ರಂದು ತೋಟಬೆಂಗ್ರೆಯ ಸ್ಯಾಂಡ್ಸ್‌ಪಿಟ್‌ನಲ್ಲಿ ನಡೆಯಲಿದೆ.

    https://chat.whatsapp.com/FCEnlTkAKCC0MGPhXtX4i4
    ಜನವರಿ 18ರ ಬೆಳಗ್ಗೆ 9ರಿಂದ ಮಧ್ಯಾಹ್ನ 1 ಗಂಟೆಯ ತನಕ ದೇರಳಕಟ್ಟೆ ಕೆ.ಎಸ್‌ ಹೆಗ್ಡೆ ಆಸ್ಪತ್ರೆಯ ನುರಿತ ವೈದ್ಯರ ತಂಡದಿಂದ ಬೆಂಗ್ರೆಯ ಪಡುಹೊಯ್ಗೆ ಮೊಗವೀರ ಗ್ರಾಮ ಸಭಾ ಸಭಾಂಗಣದಲ್ಲಿ ಉಚಿತ ವೈದ್ಯಕೀಯ ಮತ್ತು ದಂತ ಚಿಕಿತ್ಸಾ ಶಿಬಿರ ನಡೆಯಲಿದೆ. ಸಂಜೆ 5 ಗಂಟೆಗೆ ಶ್ರೀ ಶೇಷಶಯನ ಬಯಲು ರಂಗಮಂದಿರದಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಪ್ರಣವ ಸಂಸ್ಥೆಯ ರಾಜ್ಯ ಪ್ರಶಸ್ತಿ ವಿಜೇತ ಇಬ್ಬರು ಸದಸ್ಯರಿಗೆ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿದೆ. ಸಹಕಾರಿ ಕ್ಷೇತ್ರದಲ್ಲಿ ರಾಜ್ಯಮಟ್ಟದ ಸಹಕಾರ ರತ್ನ ಪುರಸ್ಕಾರ ಪಡೆದ ಚೇತನ್‌ ಬೆಂಗ್ರೆ ಹಾಗೂ ಕರ್ನಾಟಕ ರಾಜ್ಯೋತ್ಸವ ಪುರಸ್ಕಾರ ಪಡೆದ ದೈವನರ್ತಕ ಉಮೇಶ್‌ ಪಂಬದ ಅವರನ್ನು ಸನ್ಮಾನಿಸಲಾಗುವುದು. ಸಂಜೆ 6 ಗಂಟೆಗೆ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು, ಅರೆಹೊಳೆ ಪ್ರತಿಷ್ಠಾನದವರಿಂದ ಕಾರ್ಯಕ್ರಮ ಆಯೋಜಿಸಲಾಗಿದೆ. ಹಾಗೂ ಅಂತಾರಾಷ್ಟ್ರೀಯ ಕಲಾವಿದ ಅಶೋಕ್‌ ಪೊಳಲಿ ಅವರಿಂದ ವಿಶೇಷ ಏಕವ್ಯಕ್ತಿ ಅಭಿನಯ ಪ್ರದರ್ಶನ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.


    ಬೆಳಗ್ಗೆ ಆರೋಗ್ಯ ಶಿಬಿರವು ಪ್ರಣವ ಸೌಹಾರ್ದ ಸಹಕಾರಿ ಸಂಘದ ಅಂಗಸಂಸ್ಥೆ ಪ್ರಣವ ಚಾರಿಟೇಬಲ್‌ ಟ್ರಸ್ಟ್‌ ಆಶ್ರಯದಲ್ಲಿ ನಡೆಯಲಿದ್ದು, ಸ್ವೀಡಿ ಮಲ್ಟಿಮೋಡ್ಸ್‌, ಪ್ರಜ್ಞಾ ಸಲಹಾ ಕೇಂದ್ರ ಕಂಕನಾಡಿ, ಮಂಗಳೂರು, ಪಡುಹೊಯ್ಗೆ ಗ್ರಾಮ ಸಭಾ ಬೆಂಗ್ರೆ, ಜಸ್ಟಿಸ್‌ ಕೆ.ಎಸ್‌ ಹೆಗ್ಡೆ ಚಾರಿಟೇಬಲ್‌ ಆಸ್ಪತ್ರೆ, ದೇರಳಕಟ್ಟೆ ಹಾಗೂ ಎ.ಬಿ ಶೆಟ್ಟಿ ಮೆಮೋರಿಯಲ್‌ ಇನ್‌ಸ್ಟಿಟ್ಯೂಟ್‌ ಆಫ್‌ ಡೆಂಟಲ್‌ ಸೈನ್ಸ್‌ ಸಹಯೋಗದಲ್ಲಿ ನಡೆಯಲಿದೆ. ಶಿಬಿರದಲ್ಲಿ ಸಾಮಾನ್ಯ ಆರೋಗ್ಯ ತಪಾಸಣೆ (ಕಿವಿ, ಮೂಗು, ಗಂಟಲು ತಜ್ಞರು), ಚರ್ಮರೋಗ ತಜ್ಞರು, ಎಲುಬು ತಜ್ಞರು, ದಂತ ಚಿಕಿತ್ಸಾ ತಜ್ಞರು, ಕಣ್ಣಿನ ತಜ್ಞರು, ಬಿ.ಪಿ. ಮಧುಮೇಹ ತಪಾಸಣೆ, ಇಸಿಜಿ ಮೊದಲಾದ ತಪಾಸಣೆ ಹಾಗೂ ಚಿಕಿತ್ಸೆಗಳು ನಡೆಯಲಿವೆ. ಇದೇ ಕಾರ್ಯಕ್ರಮದಲ್ಲಿ ಕ್ಷೇಮ ಹೆಲ್ತ್‌ ಕಾರ್ಡ್‌ ಮಾಡಲಾಗುವುದು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

     

    Free Health Camp Kshema Health Card Pranava Charitable Trust Pranava Souharda Sahakari Sangha Sandspit Bengre
    Previous Articleಶ್ರೀ ಶರಣ ಸಕ್ಕರೆ ಕರಡೀಶ ಸೌಹಾರ್ದ ಪತ್ತಿನ ಸಹಕಾರ ಸಂಘದ ಹೊಸಪೇಟೆ ಶಾಖೆ ಫೆಬ್ರವರಿ 8ರಂದು ಲೋಕಾರ್ಪಣೆ
    Next Article ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಮಡಂತ್ಯಾರು ಶಾಖೆ ವತಿಯಿಂದ ಜನವರಿ 18ರಂದು ಸಾಮಾನ್ಯ ವೈದ್ಯಕೀಯ, ನೇತ್ರ ತಪಾಸಣಾ, ದಂತ ಚಿಕಿತ್ಸಾ ಶಿಬಿರ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.