Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಮಡಂತ್ಯಾರು ಶಾಖೆ ವತಿಯಿಂದ ಜನವರಿ 18ರಂದು ಸಾಮಾನ್ಯ ವೈದ್ಯಕೀಯ, ನೇತ್ರ ತಪಾಸಣಾ, ದಂತ ಚಿಕಿತ್ಸಾ ಶಿಬಿರ
    News

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಮಡಂತ್ಯಾರು ಶಾಖೆ ವತಿಯಿಂದ ಜನವರಿ 18ರಂದು ಸಾಮಾನ್ಯ ವೈದ್ಯಕೀಯ, ನೇತ್ರ ತಪಾಸಣಾ, ದಂತ ಚಿಕಿತ್ಸಾ ಶಿಬಿರ

    adminBy adminJanuary 14, 2026

    ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಮಡಂತ್ಯಾರು ಶಾಖೆಯ ತೃತೀಯ ವಾರ್ಷಿಕೋತ್ಸವದ ಪ್ರಯುಕ್ತ ಉಚಿತ ಸಾಮಾನ್ಯ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ಚಿಕಿತ್ಸಾ ಶಿಬಿರವನ್ನು ಜನವರಿ 18ರಂದು ಬೆಳಗ್ಗೆ 9.30ರಿಂದ ಅಪರಾಹ್ನ 12.30ರವರೆಗೆ ಕಲಾ (ಆಶೀರ್ವಾದ್) ಸಭಾಂಗಣ, ಶ್ರೀ ದುರ್ಗಾ ಕಾಂಪ್ಲೆಕ್ಸ್, ಮುಖ್ಯರಸ್ತೆ, ಮಡಂತ್ಯಾರು ಇಲ್ಲಿ ಆಯೋಜಿಸಲಾಗಿದೆ.

    https://chat.whatsapp.com/FCEnlTkAKCC0MGPhXtX4i4
    ಸ್ವರ್ಣ ಸಂಜೀವಿನಿ ಸೇವಾ ಟ್ರಸ್ಟ್ ಮಡವು, ಜೆಸಿಐ ಮಡಂತ್ಯಾರು, ಹೈಸ್ಕೂಲ್ ಯೂನಿಯನ್ ಮಡಂತ್ಯಾರು ಹಾಗೂ ರೋಟರಿ ಕ್ಲಬ್ ಮಡಂತ್ಯಾರು ಇವರ ಜಂಟಿ ಸಹಯೋಗದೊಂದಿಗೆ ಶಿಬಿರ ನಡೆಯಲಿದೆ. ವೈದ್ಯಕೀಯ ಶಿಬಿರದಲ್ಲಿ ದೇರಳಕಟ್ಟೆಯ ಯೆನಪೋಯ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ನುರಿತ ವೈದ್ಯರ ತಂಡದಿಂದ ಕಣ್ಣಿನ ತಪಾಸಣೆ, ಅಗತ್ಯವುಳ್ಳವರಿಗೆ ಕಣ್ಣಿನ ಪೊರೆಯ ಶಸ್ತ್ರಚಿಕಿತ್ಸೆ, ಸಾಮಾನ್ಯ ವೈದ್ಯಕೀಯ ಸಮಾಲೋಚನೆ, ಮಧುಮೇಹ ತಪಾಸಣೆ, ಬಿ.ಪಿ. ತಪಾಸಣೆ ಹಾಗೂ ಸಮುದಾಯ ದಂತ ಆರೋಗ್ಯ ವಿಭಾಗ, ಯೆನಪೋಯ ದೇರಳಕಟ್ಟೆ ಇವರ ನುರಿತ ವೈದ್ಯರ ತಂಡದವರಿಂದ ಹುಳುಕು ಹಲ್ಲುಗಳನ್ನು ಭರ್ತಿ ಮಾಡುವುದು, ಶುಚಿಗೊಳಿಸುವುದು, ರೋಗಗ್ರಸ್ತ ಹಲ್ಲುಗಳನ್ನು ಕೀಳುವುದು ಹಾಗೂ ಇತರ ವೈದ್ಯಕೀಯ ಸೇವೆಗಳು ಲಭ್ಯವಿರುತ್ತದೆ. ಹೆಚ್ಚಿನ ಚಿಕಿತ್ಸೆ ಅವಶ್ಯವಿದ್ದಲ್ಲಿ ಹಸಿರು ಕಾರ್ಡ್‌ ನೀಡಲಾಗುವುದು. ಅಗತ್ಯವುಳ್ಳವರಿಗೆ ಉಚಿತ ಕನ್ನಡಕ ವಿತರಣೆ ಮಾಡಲಾಗುವುದು. ಸಂಘದ ಸದಸ್ಯರು ಮತ್ತು ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆಯಬೇಕಾಗಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    Atmashakthi Vividhoddesha Sahakari Sangha Cooperative Department Madantyaru Swarna Sanjeevini Seva Trust Madavu
    Previous Articleಜನವರಿ 18ರಂದು ಪ್ರಣವ ಸೌಹಾರ್ದ ಸಹಕಾರಿ ಸಂಘದ 11ನೇ ವಾರ್ಷಿಕೋತ್ಸವ, ಗ್ರಾಹಕರ ಸಭೆ
    Next Article ನಾಳೆ ಮೈಸೂರು ಜಿಲ್ಲಾಮಟ್ಟದ ಸೌಹಾರ್ದ ರಜತ ಸಂಭ್ರಮ, ವಿವಿಧ ಸ್ಪರ್ಧೆಗಳ ಆಯೋಜನೆ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.