ಮೈಸೂರು: ಮೈಸೂರು, ಮಂಡ್ಯ ಹಾಗೂ ಕೊಡಗು ಜಿಲ್ಲಾ ಸೌಹಾರ್ದ ಸಹಕಾರಿಗಳ ಒಕ್ಕೂಟದ ವತಿಯಿಂದ ಜನವರಿ 18ರಂದು ಮೈಸೂರು ಜಿಲ್ಲೆಯ ಸೌಹಾರ್ದ ಸಹಕಾರಿಗಳ ಆಡಳಿತ ಮಂಡಳಿ ಸದಸ್ಯರು ಹಾಗೂ ಸಿಬ್ಬಂದಿಗಳಿಗಾಗಿ ಸೌಹಾರ್ದ ರಜತ ಸಂಭ್ರಮದ ಅಂಗವಾಗಿ ದೇಶೀಯ ಹಾಗೂ ತಮಾಷೆಯ ಆಟೋಟ ಸ್ಪರ್ಧೆ, ಗೀತಗಾಯನ ಸ್ಪರ್ಧೆ, ಪ್ರಬಂಧ ಹಾಗೂ ಚರ್ಚಾ ಸ್ಪರ್ಧೆಯನ್ನು ಆಯೋಜಿಸಲಾಗಿದೆ.
https://chat.whatsapp.com/FCEnlTkAKCC0MGPhXtX4i4
ಮೈಸೂರು ಕುವೆಂಪುನಗರದ ಉದಯರವಿ ರಸ್ತೆಯ ಪ್ರಮತಿ ಹಿಲ್‌ವ್ಯೂ ಅಕಾಡೆಮಿ ಪಿಯು ಕಾಲೇಜಿನಲ್ಲಿ ಕಾರ್ಯಕ್ರಮ ನಡೆಯಲಿದ್ದು, ಸಹಕಾರಿ ಧುರೀಣ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ, ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ಶಿಕ್ಷಣ ಸಲಹಾ ಸಮಿತಿಯ ಸದಸ್ಯರಾದ ಹೆಚ್.ವಿ ರಾಜೀವ್ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ವೃತತಿಪರ ನಿರ್ದೇಶಕ ಬಿ.ಮಹದೇವಸ್ವಾಮಿ, ಮೈಸೂರು, ಮಂಡ್ಯ ಹಾಗೂ ಕೊಡಗು ಜಿಲ್ಲಾ ಸೌಹಾರ್ದ ಸಹಕಾರಿಗಳ ಒಕ್ಕೂಟದ ಅಧ್ಯಕ್ಷರಾದ ಎಸ್.ಆರ್ ನಾರಾಯಣರಾವ್, ಉಪಾಧ್ಯಕ್ಷ ಇ.ಕೆ ರಾಜನ್ ಬಾಬು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

