Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಸಾರಸ್ವತ ಸೌಹಾರ್ದ ಸಹಕಾರಿ ಸಂಘದಲ್ಲಿ ಮಣಿಪಾಲ್ ಆರೋಗ್ಯ ಸುರಕ್ಷಾ ಯೋಜನೆ ನೋಂದಣಿ ಅವಕಾಶ
    News

    ಸಾರಸ್ವತ ಸೌಹಾರ್ದ ಸಹಕಾರಿ ಸಂಘದಲ್ಲಿ ಮಣಿಪಾಲ್ ಆರೋಗ್ಯ ಸುರಕ್ಷಾ ಯೋಜನೆ ನೋಂದಣಿ ಅವಕಾಶ

    adminBy adminJanuary 22, 2026

    ಮಣಿಪಾಲ: ಸಾರಸ್ವತ ಸೌಹಾರ್ದ ಸಹಕಾರಿ ಸಂಘ ನಿಯಮಿತ, ಮಣಿಪಾಲ, ಕೆ.ಎಂ.ಸಿ ಆಸ್ಪತ್ರೆಯ ಸಹಯೋಗ ಮತ್ತು ಮಾಹೆ-ಮಣಿಪಾಲ ಇವರ ಸಹಕಾರದೊಂದಿಗೆ ಅತ್ಯುನ್ನತ ಸೌಲಭ್ಯಗಳೊಂದಿಗೆ ರೂಪಿಸಲಾದ ಆಕರ್ಷಕ ಯೋಜನೆ ಮಣಿಪಾಲ್ ಆರೋಗ್ಯ ಸುರಕ್ಷಾ ಕಾರ್ಡ್ (ಕೊಂಕಣಿ ಮಣಿಪಾಲ್ ಆರೋಗ್ಯ ಸುರಕ್ಷಾ ಕಾರ್ಡ್) ನೋಂದಣಿ ಪಾರಂಭಗೊಂಡಿದ್ದು ಜನವರಿ 31 ನೋಂದಣಿ ಕೊನೆಯ ದಿನವಾಗಿದೆ.

    https://chat.whatsapp.com/FCEnlTkAKCC0MGPhXtX4i4
    ಈ ಸೌಲಭ್ಯವು ಮಣಿಪಾಲ ಸಮೂಹದ ಆಸ್ಪತ್ರೆಗಳಲ್ಲಿ ಮಾತ್ರ ಈ ಯೋಜನೆ ಸೀಮಿತವಾಗಿದ್ದು, ಈ ಸುರಕ್ಷಾ ಕಾರ್ಡ್‌ನ ಸೌಲಭ್ಯ ಪಡೆಯುವ ಅವಧಿ 15 ಫೆಬ್ರವರಿ 2026ರಿಂದ ಪ್ರಾರಂಭವಾಗಲಿದೆ. ಈ ಹಿಂದೆ ಮಣಿಪಾಲ್ ಆರೋಗ್ಯ ಸುರಕ್ಷಾ ಕಾರ್ಡ್ (ಕೊಂಕಣಿ ಮಣಿಪಾಲ್ ಆರೋಗ್ಯ ಸುರಕ್ಷಾ ಕಾರ್ಡ್) ಹೊಂದಿದ್ದವರು ಹಾಗೂ ಹೊಸತಾಗಿ ಕಾರ್ಡ್ ಮಾಡಲಿಚ್ಚಿಸುವ ಕುಟುಂಬದ ಪ್ರತಿ ಸದಸ್ಯರ ಆಧಾರ್ ಕಾರ್ಡ್ ಪ್ರತಿ, ಕುಟುಂಬದ ರೇಷನ್ ಕಾರ್ಡ್ ಪ್ರತಿಯೊಂದಿಗೆ ಸಾರಸ್ವತ ಸೌಹಾರ್ದ ಸಹಕಾರಿ ಸಂಘಕ್ಕೆ ಬಂದು ನೋಂದಣಿ ಮಾಡಬಹುದು. ಈ ಆರೋಗ್ಯ ಸುರಕ್ಷಾ ಯೋಜನೆಯು ಮಣಿಪಾಲದ ಸಮೂಹ ಸಂಸ್ಥೆಯ ಆಸ್ಪತ್ರೆಗಳಾದ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ ಇಲ್ಲಿ ಹೊರರೋಗಿ ವಿಭಾಗದ ವೈದ್ಯಕೀಯ ಚಿಕಿತ್ಸೆಗೆ ಶೇ.50, ಡಾ. ಟಿ.ಎಂ.ಎ ಪೈ ಆಸ್ಪತ್ರೆ ಉಡುಪಿ ಇಲ್ಲಿ ಹೊರರೋಗಿ ವಿಭಾಗದ ವೈದ್ಯಕೀಯ ಚಿಕಿತ್ಸೆಗೆ ಶೇ.20, ಕೆ.ಎಂ.ಸಿ ಆಸ್ಪತ್ರೆ ಅತ್ತಾವರ, ಮಂಗಳೂರು ಇಲ್ಲಿ ಹೊರರೋಗಿ ವಿಭಾಗದ ವೈದ್ಯಕೀಯ ಚಿಕಿತ್ಸೆಗೆ ಶೇ.50, ಕೆ.ಎಂ.ಸಿ ಆಸ್ಪತ್ರೆ ಅಂಬೇಡ್ಕರ್ ಸರ್ಕಲ್ ಮಂಗಳೂರು ಇಲ್ಲಿ ಹೊರರೋಗಿ ವಿಭಾಗದ ವೈದ್ಯಕೀಯ ಚಿಕಿತ್ಸೆಗೆ ಶೇ.25, ಕಾರ್ಕಳ ಟಿ.ಎಂ.ಎ ಪೈ ಆಸ್ಪತ್ರೆ ಇಲ್ಲಿ ಹೊರರೋಗಿ ವಿಭಾಗದ ವೈದ್ಯಕೀಯ ಚಿಕಿತ್ಸೆಗೆ ಶೇ.20, ದುರ್ಗಾ ಸಂಜೀವಿನಿ ಮಣಿಪಾಲ್ ಆಸ್ಪತ್ರೆ ಕಟೀಲು ಇಲ್ಲಿ ಹೊರರೋಗಿ ವಿಭಾಗದ ವೈದ್ಯಕೀಯ ಚಿಕಿತ್ಸೆಗೆ ಶೇ.50 ರಿಯಾಯಿತಿ ಇರಲಿದೆ. ಆರೋಗ್ಯ ಸುರಕ್ಷಾ ಕಾರ್ಡ್ನ ಸದಸ್ಯರ ಚಿಕಿತ್ಸೆಗೆ ಒಳರೋಗಿಯಾಗಿ ದಾಖಲಾದಲ್ಲಿ ಯಾವುದೇ ನಿರ್ಬಂಧವಿಲ್ಲದೇ (ಜನರಲ್ ವಾರ್ಡ್ ಮಾತ್ರ) ಶೇ.35% ರಿಯಾಯಿತಿ ಪಡೆಯಬಹುದಾದ ವಿಶೇಷ ಸೌಲಭ್ಯ ಹೊಂದಿರುತ್ತದೆ (ಕೆ.ಎಂ.ಸಿ ಆಸ್ಪತ್ರೆ ಅಂಬೇಡ್ಕರ್ ಸರ್ಕಲ್, ಮಂಗಳೂರು ಹೊರತುಪಡಿಸಿ).
    ನೋಂದಣಿ ಮಾಡಲು ಬರುವವರು ಪ್ರತಿದಿನ ಬೆಳಗ್ಗೆ 10ರಿಂದ ಸಂಜೆ 4ರವರೆಗೆ (ಸರಕಾರಿ ರಜಾದಿನಗಳನ್ನು ಹೊರತುಪಡಿಸಿ) ಕಛೇರಿ ಸಮಯದಲ್ಲಿ (ಕಛೇರಿ ವಿಳಾಸ :- ಪ್ರಧಾನ ಕಛೇರಿ: ಮೊದಲನೇ ಮಹಡಿ ಆರ್.ಎಸ್.ಬಿ ಭವನ, ಮಣಿಪಾಲ, ದೂರವಾಣಿ 0820-2573677 ಮತ್ತು ಮುದರಂಗಡಿ ಶಾಖೆ: ಮೊದಲನೇ ಮಹಡಿ, ಜಾಸ್ಮಿನ್ ಕಾಂಪ್ಲೆಕ್ಸ್, ಬಸ್‌ಸ್ಟಾಂಡ್ ಬಳಿ, ಮುದರಂಗಡಿ ದೂರವಾಣಿ- 7338673777) ಭೇಟಿ ನೀಡಬಹುದು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    Cooperative Cooperative Department Manipal Health Card Saraswatha Souharda Society Manipal Souharda Sahakari
    Previous Articleಪ್ರಣವ ಸೌಹಾರ್ದ ಸಹಕಾರಿ ಸಂಘದ 11ನೇ ವಾರ್ಷಿಕೋತ್ಸವ ಪ್ರಯುಕ್ತ ವೈದ್ಯಕೀಯ ಶಿಬಿರ, ರಾಜ್ಯಮಟ್ಟದ ಸಾಧಕರಿಗೆ ಸನ್ಮಾನ
    Next Article ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘಕ್ಕೆ ನಬಾರ್ಡ್‌ ಅಧಿಕಾರಿಗಳ ಅಧ್ಯಯನ ಪ್ರವಾಸ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.