ಸುರತ್ಕಲ್: ಇಲ್ಲಿನ ಸ್ವರ್ಣಕುಂಭ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾಗಿ ನಾಗೇಶ್ ಕುಲಾಲ್, ಉಪಾಧ್ಯಕ್ಷರಾಗಿ ಮಾಧವ ಬಂಗೇರ ಆಯ್ಕೆಯಾಗಿದ್ದಾರೆ.
https://chat.whatsapp.com/FCEnlTkAKCC0MGPhXtX4i4
ಮುಂದಿನ ಐದು ವರ್ಷಗಳ ಅವಧಿಯ ಆಡಳಿತ ಮಂಡಳಿ ಅಧ್ಯಕ್ಷ -ಉಪಾಧ್ಯಕ್ಷರ ಹಾಗೂ ನಿರ್ದೇಶಕರ ಆಯ್ಕೆ ಪ್ರಕ್ರಿಯೆ ಇತ್ತೀಚೆಗೆ ಚುನಾವಣಾಧಿಕಾರಿ ನಾಗೇಂದ್ರ ಇವರ ಸಮ್ಮುಖದಲ್ಲಿ ಸಂಘದ ಕೇಂದ್ರ ಕಚೇರಿಯಲ್ಲಿ ನಡೆಯಿತು. ಆಯ್ಕೆ ಪ್ರಕ್ರಿಯೆ ವೇಳೆ ಸಂಘದ ನಿರ್ದೇಶಕರಾದ, ಮುದ್ದು ಮೂಲ್ಯ, ಭೋಜ ಬಂಗೇರ, ಮೋಹನ್ ಐ, ಗಂಗಾಧರ ಬಂಜನ್, ವಾಸು ಬಂಜನ್, ಲೀಲಾ ಬಂಜನ್, ಉಷಾ ಆರ್ ಬಂಗೇರ, ಮಮತಾ ಗಣೇಶ್, ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಂಜೀವ ಮೂಲ್ಯ ಉಪಸ್ಥಿತರಿದ್ದರು.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

