ಮಂಗಳೂರು: ನವೋದಯ ವಿವಿಧೋದ್ದೇಶ ಸೌಹಾರ್ದ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಮೇಘರಾಜ್ ಜೈನ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
https://chat.whatsapp.com/FCEnlTkAKCC0MGPhXtX4i4
ಮೇಘರಾಜ್ ಜೈನ್ ಅವರು ನವೋದಯ ಗ್ರಾಮವಿಕಾಸ ಚಾರಿಟೆಬಲ್ ಟ್ರಸ್ಟ್ ಇದರ ಮ್ಯಾನೇಜಿಂಗ್ ಟ್ರಸ್ಟಿ ಆಗಿದ್ದಾರೆ. ಉಪಾಧ್ಯಕ್ಷರಾಗಿ ಬಜ್ಪೆ ವ್ಯವಸಾಯ ಸೇವಾ ಸಹಕಾರಿ ಸಂಘದ ನಿರ್ದೇಶಕ ರತ್ನಾಕರ ಶೆಟ್ಟಿ ಅವರನ್ನು ಆಯ್ಕೆ ಮಾಡಲಾಗಿದೆ. ಮಂಗಳವಾರ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸಭಾಂಗಣದಲ್ಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಹುದ್ದೆಗೆ ಚುನಾವಣಾ ಪ್ರಕ್ರಿಯೆ ನಡೆಯಿತು. ಚುನಾವಣಾ ಪ್ರಕ್ರಿಯೆಯನ್ನು ಸಹಾಯಕ ನಿಬಂಧಕರ ಕಚೇರಿ ಅಧೀಕ್ಷಕ ಬಿ.ನಾಗೇಂದ್ರ ಅವರು ನಡೆಸಿಕೊಟ್ಟರು.
ಸಂಘದ ಮುಂದಿನ ಐದು ವರ್ಷಗಳ ಅವಧಿಗೆ ನಡೆದ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಯಲ್ಲಿ 16 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಾಮಾನ್ಯ ಕ್ಷೇತ್ರದಿಂದ ಡಾ। ಎಂ.ಎನ್. ರಾಜೇಂದ್ರ ಕುಮಾರ್, ವಿನಯ ಕುಮಾರ್ ಸೂರಿಂಜೆ, ರತ್ನಾಕರ ಶೆಟ್ಟಿ, ರಾಘವ ಶೆಟ್ಟಿ, ಮೋನಪ್ಪ ಶೆಟ್ಟಿ, ಸುನೀಲ್ ಕುಮಾರ್, ನಜೀರ್ ಹುಸೈನ್, ಎಂ.ಮಹೇಶ್ ಹೆಗ್ಡೆ, ಎಸ್.ರಾಜು ಪೂಜಾರಿ, ಎಂ. ವಾದಿರಾಜ ಶೆಟ್ಟಿ, ಮೇಘರಾಜ್ ಜೈನ್, ಹಿಂದುಳಿದ ‘ಎ’ ವರ್ಗದಿಂದ ಭಾಸ್ಕರ್ ಎಸ್. ಕೋಟ್ಯಾನ್, ಪರಿಶಿಷ್ಟ ಜಾತಿ ವರ್ಗದಿಂದ ಜಗದೀಶ್ಚಂದ್ರ ಎಸ್., ಹಿಂದುಳಿದ ‘ಬಿ’ ವರ್ಗದಿಂದ ಗುಲ್ಬರ್ ಹುಸೈನ್, ಮಹಿಳಾ ಮೀಸಲು ಕ್ಷೇತ್ರದಿಂದ ಸಾವಿತ್ರಿ ರೈ, ಪೂರ್ಣಿಮಾ ಶೆಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

