ಬಳ್ಳಾರಿ: ಸುಕೋ ಸೌಹಾರ್ದ ಸಹಕಾರಿ ಬ್ಯಾಂಕ್‌ನ ನೂತನ ಅಧ್ಯಕ್ಷರಾಗಿ ಮೋಹಿತ್ ಮಸ್ಕಿ ಅವರು ಮೂರನೇ ಅವಧಿಗೆ ಅವಿರೋಧವಾಗಿ ಆಯ್ಕೆಯಾಗಿದ್ದು ಸೋಮವಾರ ಸ್ವೀಕರಿಸಿದ್ದಾರೆ. ಸುಕೋ ಬ್ಯಾಂಕಿನ ಉಪಾಧ್ಯಕ್ಷರಾಗಿ ಮುರಳೀಧರ ರೆಡ್ಡಿಯವರು ಆಯ್ಕೆಯಾಗಿದ್ದಾರೆ ಎಂದು ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕರಾಗಿರುವ ಜಿ.ಎಸ್ ರವಿ ಸುಧಾಕರ್ ತಿಳಿಸಿದ್ದಾರೆ.
https://chat.whatsapp.com/FCEnlTkAKCC0MGPhXtX4i4
ಮೋಹಿತ್ ಮಸ್ಕಿ ಅವರು ಸುಕೋ ಬ್ಯಾಂಕಿನ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದು ಕಳೆದ ಎರಡು ಅವಧಿಗಳಲ್ಲಿ ಅಧ್ಯಕ್ಷರಾಗಿದ್ದು ಗ್ರಾಹಕರ ವಿಶ್ವಾಸ ಪಡೆದು ಬ್ಯಾಂಕನ್ನು ಆರ್ಥಿಕವಾಗಿ ಸದೃಢವಾಗಿಸುವಲ್ಲಿ ಶ್ರಮಿಸಿದ್ದಾರೆ. ಅಲ್ಲದೆ ರಿಸರ್ವ್ ಬ್ಯಾಂಕ್ ಸೂಚನೆ, ನಿರ್ದೇಶನಗಳನ್ನು ಕಾಲಕಾಲಕ್ಕೆ ಅನುಷ್ಠಾನಗೊಳಿಸಿ, ಎಟಿಎಂ, ಮೊಬೈಲ್ ಬ್ಯಾಂಕಿಂಗ್, ಯುಪಿಐ ಬ್ಯಾಂಕಿಂಗ್ ಸೇವೆ ಇತ್ಯಾದಿ ಸೌಲಭ್ಯಗಳನ್ನು ಗ್ರಾಹಕರಿಗೆ ಒದಗಿಸುವಲ್ಲಿ ಯಶಸ್ವಿಯಾಗಿದ್ದಾರೆ.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
EMAIL: sahakaraspandana@gmail.com


