Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ವಾಮಂಜೂರಿನಲ್ಲಿ ವಿಜಯ ಕ್ರೆಡಿಟ್ ಕೋ ಆಪರೇಟಿವ್‌ ಸೊಸೈಟಿಯ 21ನೇ ಶಾಖೆ ಉದ್ಘಾಟನೆ
    News

    ವಾಮಂಜೂರಿನಲ್ಲಿ ವಿಜಯ ಕ್ರೆಡಿಟ್ ಕೋ ಆಪರೇಟಿವ್‌ ಸೊಸೈಟಿಯ 21ನೇ ಶಾಖೆ ಉದ್ಘಾಟನೆ

    adminBy adminFebruary 6, 2026

    ಮಂಗಳೂರು: ಬೆಳ್ತಂಗಡಿ ತಾಲೂಕಿನ ಗುರುವಾಯನಕರೆಯಲ್ಲಿ ಪ್ರಧಾನ ಕಚೇರಿ ಹೊಂದಿರುವ ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ 21ನೇ ಹವಾನಿಯಂತ್ರಿತ ಶಾಖೆಯು ವಾಮಂಜೂರು ಸ್ಮಾರ್ಟ್ ಸಿಟಿ ಕಮರ್ಷಿಯಲ್ ಕಾಂಪ್ಲೆಕ್ಸ್‌ನ ಮೊದಲನೇ ಮಹಡಿಯಲ್ಲಿ ಗುರುವಾರ ಉದ್ಘಾಟನೆಗೊಂಡಿತು.

    https://chat.whatsapp.com/FCEnlTkAKCC0MGPhXtX4i4

    ವಾಮಂಜೂರು ಚರ್ಚ್ ಧರ್ಮಗುರು ವಂದನೀಯ ಜೇಮ್ಸ್ ಡಿಸೋಜ ಉದ್ಘಾಟನೆ ನೆರವೇರಿಸಿ ಮಾತನಾಡಿ, ವಾಮಂಜೂರು ಪ್ರದೇಶದಲ್ಲಿ ಈ ಸೊಸೈಟಿ ತನ್ನ ಶಾಖೆ ಆರಂಭಿಸಿ ಜನರ ಸೇವೆಗೆ ಮುಂದಾಗಿದ್ದು ಇಲ್ಲಿನ ಜನರಿಗೆ ಅತ್ಯುತ್ತಮ ಸೇವೆ ಲಭಿಸಲಿ. ದೇವರ ಆಶೀರ್ವಾದ ನಿರಂತರ ಇರಲಿ ಎಂದು ಶುಭ ಹಾರೈಸಿದರು.
    ಗುರುಪುರ ಬಂಟರ ಸಂಘದ ಅಧ್ಯಕ್ಷ ಸಂತೋಷ್ ಶೆಟ್ಟಿ ಶೆಡ್ಡೆ ಮಾತನಾಡಿ, ಈ ಸಂಸ್ಥೆ ಇನ್ನೂ ಎತ್ತರಕ್ಕೆ ಬೆಳೆದು ಹೆಚ್ಚಿನ ಶಾಖೆಗಳನ್ನು ಪ್ರಾರಂಭಿಸುವಂತಾಗಲಿ ಎಂದರು. ಮಾಜಿ ಕಾರ್ಪೊರೇಟರ್‌ ಹೇಮಲತಾ ರಘು ಸಾಲ್ಯಾನ್ ಶುಭ ಹಾರೈಸಿದರು.

    ವಿಜಯ ಸೊಸೈಟಿಯ ಅಧ್ಯಕ್ಷ ಅಜಿತ್ ಜಿ.ಶೆಟ್ಟಿ ಕೊರ್ಯಾರು ಮಾತನಾಡಿ, 2005ರಲ್ಲಿ ಎಸ್. ಜಯರಾಮ ಶೆಟ್ಟಿ ಅವರು ಆರಂಭಿಸಿದ ಸಂಸ್ಥೆ 21ನೇ ಶಾಖೆ ತೆರೆಯುವ ಹಂತಕ್ಕೆ ತಲುಪಿದೆ. ಪ್ರಸ್ತುತ 345 ಕೋಟಿ ರೂ. ದುಡಿಯುವ ಬಂಡವಾಳ, 580 ಕೋಟಿ ರೂ. ವಹಿವಾಟು, 310 ಕೋಟಿ ರೂ. ಠೇವಣಿ ಹೊಂದಿದ್ದು, 270 ಕೋಟಿ ರೂ. ಸಾಲ ನೀಡಲಾಗಿದೆ. 35,500ಕ್ಕೂ ಮಿಕ್ಕಿ ಸದಸ್ಯರನ್ನು ಸೊಸೈಟಿ ಒಳಗೊಂಡಿದೆ. ಕಳೆದ 18 ವರ್ಷಗಳಲ್ಲಿ ಸೊಸೈಟಿ ಎ ಗ್ರೇಡ್ ಕಾಯ್ದುಕೊಂಡಿದೆ ಎಂದರು.

    ಗಣ್ಯರಾದ ಮಂಜುನಾಥ ಭಂಡಾರಿ, ಎಸ್. ಶಿವರಾಮ ಮಲ್ಲಿ, ದಿನೇಶ್ ಜೆ.ಕರ್ಕೇರ ಸಾನ ಮನೆ, ಮೊಹಮ್ಮದ್ ಇಸ್ಮಾಯಿಲ್, ಜಗದೀಶ್ ಶೇಣವ, ಸೊಸೈಟಿಯ ಉಪಾಧ್ಯಕ್ಷ ಜಯಂತ ಶೆಟ್ಟಿ ಕೆ., ನಿರ್ದೇಶಕರಾದ ಸೀತಾರಾಮ ಶೆಟ್ಟಿ ಬಿ., ಬಾಲಕೃಷ್ಣ ಪೂಂಜ ಎಚ್. ಪುಷ್ಪರಾಜ್ ಶೆಟ್ಟಿ, ರಘುರಾಮ ಶೆಟ್ಟಿ ಎ., ಕೃಷ್ಣ ರೈ ಟಿ., ಎಂ. ಜಯರಾಮ ಭಂಡಾರಿ ಧರ್ಮಸ್ಥಳ, ಪುರಂದರ ಶೆಟ್ಟಿ ಪಾಡ್ಯಾರು, ಮಂಜುನಾಥ ರೈ, ರಾಜು ಶೆಟ್ಟಿ ಬೆಂಗತ್ಯಾರು, ಜಯರಾಮ ಶೆಟ್ಟಿ ಮುಂಡಾಡಿಗುತ್ತು, ರಾಜೇಶ್ ಶೆಟ್ಟಿ ‘ನವಶಕ್ತಿ’, ಪ್ರಕಾಶ್ ಶೆಟ್ಟಿ ನೊಚ್ಚ, ಸಾರಿಕ ಶೆಟ್ಟಿ ವಿಜಯ ಬಿ. ಶೆಟ್ಟಿ ಪ್ರಾದೇಶಿಕ ವ್ಯವಸ್ಥಾಪಕರಾದ ಸಂತೋಷ್ ಕುಮಾರ್, ಅಜಿತ್ ಕುಮಾರ್, ಶಾಖಾ ಪ್ರಬಂಧಕ ವಿಶ್ವನಾಥ ಶೆಟ್ಟಿ ಉಪಸ್ಥಿತರಿದ್ದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಜಯ್ ಶೆಟ್ಟಿ ವಂದಿಸಿದರು.

    ಗ್ರಾಹಕರಿಗೆ ವಿಶೇಷ ಕೊಡುಗೆಗಳು
    ಸೊಸೈಟಿಯಲ್ಲಿ ನಿರಖು ಠೇವಣಿ (ಎಫ್.ಡಿ.)ಗಳಿಗೆ 9.50 ಶೇ. ಬಡ್ಡಿ ದರವಿದೆ. ವಿಜಯ ಸಮೃದ್ಧಿ ಠೇವಣಿಗೆ ಶೇ. 9.25 ಬಡ್ಡಿದರವಿದ್ದು, 7 ವರ್ಷ 7 ತಿಂಗಳಲ್ಲಿ ಠೇವಣಿ ದ್ವಿಗುಣಗೊಳ್ಳಲಿದೆ. ಆವರ್ತಕ ಠೇವಣಿಗಳ ಮೇಲೆ ಶೇ. 8ರಿಂದ 9ರ ವರೆಗೆ ಆಕರ್ಷಕ ಬಡ್ಡಿದರಗಳು ಲಭ್ಯವಿದೆ. ಸ್ಪರ್ಧಾತ್ಮಕ ಬಡ್ಡಿದರದಲ್ಲಿ ಚಿನ್ನಾಭರಣ ಈಡಿನ ಸಾಲ, ಆಭರಣ, ವಾಹನ, ಅಡಮಾನ, ವೈಯುಕ್ತಿಕ ಸಾಲಗಳು ಲಭ್ಯವಿದೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    Banking Co Operative ministry Cooperative Cooperative Department Vamanjuru Smart city complex Vijaya Credit Co Operative Society Guruvayanakere
    Previous Articleಕೋ ಆಪರೇಟಿವ್ ಕ್ಷೇತ್ರದಲ್ಲಿ ಹೊಸ ಕ್ರಾಂತಿ: ಭಾರತ್ ಸಹಕಾರ್ ಟ್ಯಾಕ್ಸಿಗೆ ಅಧಿಕೃತ ಚಾಲನೆ
    Next Article ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಳದಂಗಡಿ ಶಾಖೆಯ ಮೂರನೇ ವಾರ್ಷಿಕೋತ್ಸವ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.