ಮಂಗಳೂರು: ಶ್ರೀಶಾ ಸೌಹಾರ್ದ ಸೊಸೈಟಿಯ ವತಿಯಿಂದ ಭಾನುವಾರ ಮಂಗಳೂರು ನಗರದ ಹೊರವಲಯದ ಸೋಮೇಶ್ವರ ಕಡಲ ತಡಿಯಲ್ಲಿ ಸ್ವಚ್ಛತಾ ಅಭಿಯಾನ ಹಮ್ಮಿಕೊಳ್ಳಲಾಗಿತ್ತು.
https://chat.whatsapp.com/FCEnlTkAKCC0MGPhXtX4i4
ಶ್ರೀಶಾ ಸೊಸೈಟಿಯ ಎಲ್ಲಾ ಸಿಬ್ಬಂದಿಗಳು ಹಾಗೂ ನಿರ್ದೇಶಕ ಮಂಡಳಿಯ ಸದಸ್ಯರು ಭಾಗವಹಿಸಿದ್ದು, ಈ ಸ್ವಚ್ಛತಾ ಕಾರ್ಯದಲ್ಲಿ ಬೀಚ್ ನಲ್ಲಿ ಹೇರಳವಾಗಿ ಬಿದ್ದಿದ್ದ ಪ್ಲಾಸ್ಟಿಕ್ ಮತ್ತು ಗ್ಲಾಸ್ ಬಾಟಲಿಗಳು, ಪ್ಲಾಸ್ಟಿಕ್ ಇತರೆ ತುಣುಕುಗಳನ್ನು ಹೆಕ್ಕಿ ಸಂಗ್ರಹಿಸಲಾಯಿತು. ಬೀಚ ನಲ್ಲಿ ಸುಮಾರು ಒಂದು ಕಿಲೋಮೀಟರ್ ವರೆಗೆ ಶ್ರಮದಾನ ಮೂಲಕ ಪ್ಲಾಸ್ಟಿಕ್ ಮುಕ್ತಗೊಳಿಸಲಾಯಿತು.

ಬೆಳಗ್ಗೆ 7 ಗಂಟೆಯಿಂದ 9ರವರಿಗೆ ನಡೆದ ಸ್ವಚ್ಛತಾ ಕಾರ್ಯದಲ್ಲಿ 20ಕ್ಕೂ ಹೆಚ್ಚು ಮೂಟೆಗಳಷ್ಟು ತ್ಯಾಜ್ಯವನ್ನು ಸಂಗ್ರಹಿಸಲಾಯಿತು. ನಂತರ ಸಾಂದರ್ಭಿಕವಾಗಿ ಮಾತನಾಡಿದ ಶ್ರೀಶಾ ಸೊಸೈಟಿಯ ಅಧ್ಯಕ್ಷ ಎಂ. ಎಸ್. ಗುರುರಾಜ್, ನಮ್ಮ ಪರಿಸರವನ್ನು ಸ್ವಚ್ಛವಾಗಿ ಇಡಬೇಕಾದ್ದು ನಮ್ಮೆಲ್ಲರ ಆದ್ಯ ಕರ್ತವ್ಯ. ಸ್ವಚ್ಛತೆ ಇದ್ದಲ್ಲಿ ದೇವರ ಸಾನ್ನಿಧ್ಯ ಇರುತ್ತದೆ. ಅಲ್ಲದೆ ಪರಿಸರ ಸ್ವಚ್ಛತೆಯಿಂದ ನಮ್ಮ ಸ್ವಾಸ್ತ್ಯವೂ ಹೆಚ್ಚುತ್ತದೆ. ಪ್ಲಾಸ್ಟಿಕ್ ಪರಿಸರಕ್ಕೆ ದೊಡ್ಡ ಮಾರಕ. ಅವನ್ನು ಸಮುದ್ರದ ಹಾಗೂ ನೆಲದ ಪ್ರಾಣಿ ಸಂಕುಲಗಳು ತಿಂದು ಪ್ರಾಣ ಕಳೆದುಕೊಳ್ಳುತ್ತಿರುವುದನ್ನು ಕಾಣುತ್ತಿದ್ದೇವೆ. ನಮ್ಮ ಸೊಸೈಟಿಯ ವತಿಯಿಂದ ಸಮಾಜದಲ್ಲಿ ಜಾಗೃತಿ ಮೂಡಿಸುವ ಇಂತಹ ಇನ್ನೂ ಹೆಚ್ಚಿನ ಕಾರ್ಯಗಳು ನಿರಂತರ ನಡೆಯಲಿದೆ ಎಂದರು.
ಸೊಸೈಟಿಯ ಉಪಾಧ್ಯಕ್ಷ ಉದಯ ವಿ ಶಾಸ್ತ್ರಿ, ನಿರ್ದೇಶಕರಾದ ಸುರೇಶ್ ಬೈಂದೂರು, ಪ್ರಸನ್ನ ಕುಮಾರ ರಾಜೇಶ್ ಪೂಂಜಾಲಕಟ್ಟೆ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಿತ್ರಾ ಡಿಸೋಜ ಮತ್ತು ಎಲ್ಲಾ ಸಿಬ್ಬಂದಿಗಳು ಭಾಗವಹಿಸಿದ್ದರು.
ಸಂಗ್ರಹಿಸಿದ ತ್ಯಾಜ್ಯವನ್ನು ತ್ಯಾಜ್ಯ ಸಂಗ್ರಹಿಸುವವರಿಗೆ ನೀಡಲಾಯಿತು.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

