Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಬೆಂದೂರುವೆಲ್ ಶಾಖೆ ವತಿಯಿಂದ ಉಚಿತ ಚಿಕಿತ್ಸಾ ಶಿಬಿರ
    News

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಬೆಂದೂರುವೆಲ್ ಶಾಖೆ ವತಿಯಿಂದ ಉಚಿತ ಚಿಕಿತ್ಸಾ ಶಿಬಿರ

    adminBy adminFebruary 11, 2026

    ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಬೆಂದೂವೆಲ್ ಶಾಖೆಯ ಹದಿನಾಲ್ಕನೇ ವಾರ್ಷಿಕೋತ್ಸವ ಹಾಗೂ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ ಜಪ್ಪಿನಮೊಗರು ಮಂಗಳೂರು ಇದರ ಗುರುಮಂದಿರದ ಪ್ರತಿಷ್ಠಾಪನಾ ವರ್ಧಂತ್ಯುತ್ಸವದ ಪ್ರಯುಕ್ತ ಎನ್. ಜಿ. ವರ್ಲ್ಡ್‌ ಚಾರಿಟೇಬಲ್ ಟ್ರಸ್ಟ್ ಮಂಗಳೂರು ಇವರ ಸಹಯೋಗದೊಂದಿಗೆ ಮಂಗಳ ಕಾಲೇಜು, ಮಂಗಳ ಆಸ್ಪತ್ರೆ ಮತ್ತು ಮಂಗಳ ಕಿಡ್ನಿ ಫೌಂಡೇಶನ್, ಕದ್ರಿ ಮಂಗಳೂರು ಹಾಗೂ ಶ್ರೀನಿವಾಸ್ ಇನ್‌ಸ್ಟಿಟ್ಯೂಟ್ ಅಫ್ ಡೆಂಟಲ್ ಸಾಯನ್ಸ್ ಮುಕ್ಕ, ಸುರತ್ಕಲ್, ಮಂಗಳೂರು ಇದರ ನುರಿತ ವೈದ್ಯರ ತಂಡದವರಿಂದ ಉಚಿತ ಸಾಮಾನ್ಯ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ಚಿಕಿತ್ಸಾ ಶಿಬಿರವು ಕಂರ್ಭಿಬೈದೇದಿ ಚಾವಡಿ, ಬ್ರಹ್ಮಶ್ರೀ ನಾರಾಯಣ ಗುರು ಮಂದಿರ, ಜಪ್ಪಿನಮೊಗರು ಇಲ್ಲಿ ಜರುಗಿತು.

    https://chat.whatsapp.com/FCEnlTkAKCC0MGPhXtX4i4
    ಕಾರ್ಯಕ್ರಮವನ್ನುಶ್ರೀ ಬ್ರಹ್ಮ ಬೈದರ್ಕಳ ಗರೋಡಿ ಕ್ಷೇತ್ರ, ಕಂಕನಾಡಿ ಇದರ ಮೋಕ್ತಸರರಾದ ಚಂದ್ರನಾಥ್ ಅತ್ತಾವರ ಉದ್ಘಾಟಿಸಿ ಮಾತನಾಡಿ, ಉತ್ತಮ ಆರೋಗ್ಯವನ್ನು ನಮಗೆ ದೇವರು ಕರುಣಿಸುತ್ತಾರೆ ಎಂಬುದು ನಮ್ಮ ನಂಬಿಕೆ. ಆದರೆ ಈ ಆರೋಗ್ಯವನ್ನು ಕಾಪಾಡಿಕೊಂಡು ಬರುವಲ್ಲಿ ನಮ್ಮ ಪಾತ್ರ ಬಹಳ ಮುಖ್ಯವಾಗಿದೆ. ಉತ್ತಮವಾದ ಜೀವನ ಶೈಲಿ ರೂಢಿಸಿಕೊಳ್ಳುವುದು ನಮ್ಮ ಜವಾಬ್ದಾರಿ ಆಗಿರುವುದರಿಂದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅವರ ಮುಂದಾಳತ್ವದಲ್ಲಿ ಇಂತಹ ಶಿಬಿರಗಳು ಆಯೋಜಿಸುತ್ತಿರುವುದು ತುಂಬಾ ಪ್ರಯೋಜನಕಾರಿಯಾಗಿದೆ. ಈ ಶಿಬಿರದ ಪ್ರಯೋಜನವನ್ನು ಎಲ್ಲರೂ ಪಡೆಯಿರಿ ಎಂದು ತಿಳಿಸಿದರು.
    ಮಂಗಳೂರು ಮಹಾನಗರ ಪಾಲಿಕೆಯ ನಿಕಟಪೂರ್ವ ಸದಸ್ಯರಾದ ವೀಣಾಮಂಗಳ ಮಾತನಾಡಿ “ಈ ಕಾರ್ಯಕ್ರಮದ ಉಪಯೋಗವನ್ನು ಎಲ್ಲರು ಪಡೆಯಬೇಕು, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಹಾಗೂ ಸಹಭಾಗಿ ಸಂಸ್ಥೆಯವರು ಒಟ್ಟು ಸೇರಿ ನಮ್ಮೂರ ಜನರ ಆರೋಗ್ಯದ ಸಮಸ್ಯೆಗಳಿಗೆ ಹತ್ತಿರದಲ್ಲೇ ಪರಿಹಾರ ಸಿಗಬೇಕೆನ್ನುವ ಉದ್ದೇಶದಲ್ಲಿ ಆಯೋಜಿಸುತ್ತಿರುವ ಇಂತಹ ಸಮಾಜಮುಖಿ ಕಾರ್ಯಕ್ರಮಗಳು ಶ್ಲಾಘನೀಯ” ಎಂದು ಹೇಳಿದರು.
    ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಮಾತನಾಡಿ “ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಕೇವಲ ಬ್ಯಾಂಕಿಂಗ್ ಮಾತ್ರವಲ್ಲದೆ, ಜನರು ತಮ್ಮ ಆರೋಗ್ಯವನ್ನು ಕಾಪಾಡಿಕೊಂಡು ಬರುವ ಉದ್ದೇಶಕ್ಕಾಗಿ, ಜನರ ಆರೋಗ್ಯದ ದೃಷ್ಟಿಯಲ್ಲಿ ಎಲ್ಲಾ ಕಡೆಯಲ್ಲಿ ಉಚಿತ ಆರೋಗ್ಯ ಶಿಬಿರವನ್ನು ಆಯೋಜಿಸುತ್ತಿದ್ದೇವೆ, ನಮ್ಮ ಆರೋಗ್ಯದ ಬಗ್ಗೆ ಮುಂಜಾರೂಕತೆ ವಹಿಸಿದರೆ ನಮ್ಮ ಆರೋಗ್ಯ ಒಳ್ಳೆಯ ರೀತಿಯಲ್ಲಿರುತ್ತದೆ. ಸಹಕಾರಿ ಸಂಘದ ಸದಸ್ಯರಿಗೆ ಯಶಸ್ವಿನಿ ಆರೋಗ್ಯ ವಿಮೆಯ ನೋಂದಣಿಯ ಪ್ರಯೋಜನ ಸಂಘದ ಎಲ್ಲಾ ಶಾಖೆಗಳಲ್ಲಿ ಲಭ್ಯವಿದ್ದು, ಇದರ ಪ್ರಯೋಜನ ಪಡೆಯಬೇಕೆಂದು ತಿಳಿಸಿದರು.


    ಅಧ್ಯಕ್ಷತೆಯನ್ನು ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ (ಜಪ್ಪಿನಮೊಗರು ಇದರ ಅಧ್ಯಕ್ಷರಾದ ಮನೋಜ್ ಪೂಜಾರಿ ವಹಿಸಿದ್ದರು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಉಪಾಧ್ಯಕ್ಷರಾದ ನೇಮಿರಾಜ್ ಪಿ, ನಿರ್ದೇಶಕರಾದ ಗೋಪಾಲ್ ಎಮ್., ಪಿಲಿಚಾಮುಂಡಿ ಕ್ಷೇತ್ರ , ಪಿಲಿಚಂಡಿ ಪಾದೆ ತಂದೋಳಿಗೆ ಇದರ ಅಧ್ಯಕ್ಷರಾದ ಹರಿಶ್ಚಂದ್ರ ತಂದೋಳಿಗೆ, ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ ಜಪ್ಪಿನಮೊಗರು ಇದರ ಮಹಿಳಾ ಘಟಕದ ಅಧ್ಯಕ್ಷರಾದ ಶಶಿಕಲಾ ಸತೀಶ್ , ಶ್ರೀನಿವಾಸ್ ಇನ್‌ಸ್ಟಿಟ್ಯೂಟ್ ಅಫ್ ಡೆಂಟಲ್ ಸಾಯನ್ಸ್ , ಮುಕ್ಕ , ಸುರತ್ಕಲ್ ಇಲ್ಲಿನ ವೈದ್ಯರಾದ ಡಾ| ಆದ್ರಾ ಮತ್ತು ಮಂಗಳ ಕಾಲೇಜು , ಮಂಗಳ ಆಸ್ಪತ್ರೆ ಮತ್ತು ಮಂಗಳ ಕಿಡ್ನಿ ಫೌಂಡೇಶನ್ , ಕದ್ರಿ ಮಂಗಳೂರು ಇಲ್ಲಿನ ಎಂ.ಎಸ್.ಡಬ್ಲ್ಯು ವಿದ್ಯಾರ್ಥಿ ಸುಷ್ಮಾ, ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ ಜಪ್ಪಿನಮೊಗರು ಇದರ ಪದಾಧಿಕಾರಿಗಳು ಮತ್ತಿತ್ತರರು ಉಪಸ್ಥಿತರಿದ್ದರು.
    ಕಾರ್ಯಕ್ರಮದಲ್ಲಿ ೧೧೦ಕ್ಕೂ ಹೆಚ್ಚು ಶಿಬಿರಾರ್ಥಿಗಳಿಗೆ ಉಚಿತ ನೇತ್ರ ತಪಾಸಣಾ, ದಂತ ತಪಾಸಣಾ ಮತ್ತು ಸಾಮಾನ್ಯ ವೈದ್ಯಕೀಯ ಹಾಗೂ ಉಚಿತ ಔಷಧ ವಿತರಣೆಯನ್ನು ನಡೆಸಲಾಯಿತು ಹಾಗೂ ಅಗತ್ಯವುಳ್ಳವರಿಗೆ ಉಚಿತ ಕನ್ನಡಕ ವಿತರಣೆ ಮಾಡಲಾಯಿತು.
    ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ ಜಪ್ಪಿನಮೊಗರು ಇದರ ಪ್ರಧಾನ ಕಾರ್ಯದರ್ಶಿ ಚಂದ್ರಹಾಸ್ ಕಟ್ಟಪುಣಿ ಸ್ವಾಗತಿಸಿ, ಕೋಶಾಧಿಕಾರಿ ಚಿತ್ರಾಕ್ಷ ಪೂಜಾರಿ ವಂದಿಸಿದರು, ಸಂಘದ ಸದಸ್ಯರಾದ ಅಶೋಕ್ ತಂದೋಳಿಗೆ ಕಾರ್ಯಕ್ರಮದ ನಿರೂಪಣೆ ಮಾಡಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    Atmashakti vividhoddesha sahakara sangha Banking Chittaranjan Bolar Co Operative ministry Cooperative Cooperative Department Cooperative Registrar
    Previous Article10 ಲಕ್ಷ ಬಳಕೆದಾರರು, 3 ಲಕ್ಷ ಚಾಲಕರು: ಭಾರತ್ ಟ್ಯಾಕ್ಸಿ ಸಹಕಾರ ಪ್ರಗತಿ
    Next Article ಒಡಿಯೂರು ಶ್ರೀವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷರಾಗಿ ಎ.ಸುರೇಶ್‌ ರೈ, ಉಪಾಧ್ಯಕ್ಷರಾಗಿ ಲಿಂಗಪ್ಪ ಗೌಡ ಪನೆಯಡ್ಕ ಪುನರಾಯ್ಕೆ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.