ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ತುಂಬೆ ಶಾಖೆಯ ಐದನೇ ವಾರ್ಷಿಕೋತ್ಸವದ ಪ್ರಯುಕ್ತ ಉಚಿತ ಸಾಮಾನ್ಯ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ರಕ್ತದಾನ ಶಿಬಿರ, ಕುಲಾಲ ಸೇವಾ ಸಂಘ ಹಾಗೂ ಮಹಿಳಾ ಘಟಕ ತುಂಬೆ, ತುಂಬೆ ಸರಕಾರಿ ಶಾಲಾಭಿವೃದ್ದಿ ಸಮಿತಿ, ಭಾಗ್ಯೋದಯ ಮಿತ್ರ ಕಲಾವೃಂದ ತುಂಬೆ, ಆಶೀರ್ವಾದ ಸೇವಾ ಸಂಘ ಮತ್ತು ಮಹಿಳಾ ಸೇವಾ ಸಂಘ ತುಂಬೆ, ಯುವಶಕ್ತಿ ಮಜಿ, ಶ್ರೀ ಪಿಲಿಚಂಡಿ ತಾಯೇಶ್ವರಿ ಸೇವಾ ಸಮಿತಿ ತಂಜಕರಿಯ ತುಂಬೆ ಇವರ ಜಂಟಿ ಸಹಯೋಗದೊಂದಿಗೆ ಫೆಬ್ರವರಿ 15ರಂದು ಬೆಳಗ್ಗೆ 9ರಿಂದ 12.30ರ ತನಕ ದ.ಕ. ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ, ತುಂಬೆ ಇಲ್ಲಿ ಆಯೋಜಿಸಲಾಗಿದೆ.
https://chat.whatsapp.com/FCEnlTkAKCC0MGPhXtX4i4
ಈ ವೈದ್ಯಕೀಯ ಶಿಬಿರದಲ್ಲಿ ಜಸ್ಟಿಸ್ ಕೆ.ಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ ದೇರಳಕಟ್ಟೆ, ಮಂಗಳೂರು ಇವರ ನುರಿತ ವೈದ್ಯರ ತಂಡದವರಿಂದ ಕಣ್ಣಿನ ತಪಾಸಣೆ, ಅಗತ್ಯವುಳ್ಳವರಿಗೆ ಕಣ್ಣಿನ ಪೊರೆಯ ಶಸ್ತ್ರಚಿಕಿತ್ಸೆ, ಕನ್ನಡಕ ವಿತರಣೆ, ಮಧುಮೇಹ ತಪಾಸಣೆ, ಬಿ.ಪಿ. ತಪಾಸಣೆ, ಸಾಮಾನ್ಯ ವೈದ್ಯಕೀಯ ಸಮಾಲೋಚನೆ, ಕಿವಿ, ಮೂಗು ಮತ್ತು ಗಂಟಲು ತಪಾಸಣೆ, ಹೃದಯ ಸಂಬಂಧಿ ಕಾಯಿಲೆ, ರಕ್ತದಾನ ಶಿಬಿರ ಹಾಗೂ ಇತರ ವೈದ್ಯಕೀಯ ಸೇವೆಗಳು ಲಭ್ಯವಿರುತ್ತದೆ.
ಸಂಘದ ಸದಸ್ಯರು ಮತ್ತು ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆಯಬೇಕಾಗಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

