Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಶ್ರಯದಲ್ಲಿ ಫೆಬ್ರವರಿ 22ರಂದು ಬೃಹತ್ ಉಚಿತ ವೈದ್ಯಕೀಯ ತಪಾಸಣೆ, ಆರೋಗ್ಯ ಮಾಹಿತಿ ಶಿಬಿರ
    News

    ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಶ್ರಯದಲ್ಲಿ ಫೆಬ್ರವರಿ 22ರಂದು ಬೃಹತ್ ಉಚಿತ ವೈದ್ಯಕೀಯ ತಪಾಸಣೆ, ಆರೋಗ್ಯ ಮಾಹಿತಿ ಶಿಬಿರ

    adminBy adminFebruary 13, 2026

    ಸವಣೂರು: ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಶ್ರಯದಲ್ಲಿ ಶ್ರೀ ಪೂರ್ಣಾನಂದ ಸೇವಾ ಪ್ರತಿಷ್ಠಾನ, ಎನ್.ಜಿ ವರ್ಲ್ಡ್‌ ಚಾರಿಟೇಬಲ್ ಟ್ರಸ್ಟ್ ಮಂಗಳೂರು, ಕೆ.ಎಂ.ಸಿ ಆಸ್ಪತ್ರೆ ಅತ್ತಾವರ ಮಂಗಳೂರು, ಹಿರಿಯ ವಿದ್ಯಾರ್ಥಿ ಸಂಘ ಹಾಗೂ ಶಾಲಾಭಿವೃದ್ಧಿ ಸಮಿತಿ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕುದ್ಮಾರು ಇವುಗಳ ಸಹಯೋಗದೊಂದಿಗೆ ಫೆ.22ರಂದು ಕುದ್ಮಾರು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೃಹತ್ ಉಚಿತ ವೈದ್ಯಕೀಯ ತಪಾಸಣೆ ಹಾಗೂ ಆರೋಗ್ಯ ಮಾಹಿತಿ ಶಿಬಿರ ಹಮ್ಮಿಕೊಳ್ಳಲಾಗಿದೆ.

    https://chat.whatsapp.com/FCEnlTkAKCC0MGPhXtX4i4
    ಬೆಳಗ್ಗೆ 9ರಿಂದ ಮಧ್ಯಾಹ್ನ 1ರವರೆಗೆ ಶಿಬಿರ ನಡೆಯಲಿದ್ದು, ಸಾಮಾನ್ಯ ರೋಗ ವಿಭಾಗ, ಬಿ.ಪಿ. ಹಾಗೂ ಮಧುಮೇಹ ತಪಾಸಣೆ, ಎಲುಬು ಮತ್ತು ಕೀಲು ರೋಗ ವಿಭಾಗ, ಕಿವಿ, ಮೂಗು ಮತ್ತು ಗಂಟಲು ವಿಭಾಗ, ಹೃದಯ ರೋಗ ವಿಭಾಗ, ಕ್ಯಾನ್ಸರ್ ರೋಗ ತಪಾಸಣೆ ವಿಭಾಗ, ಸ್ತ್ರೀ ರೋಗ ವಿಭಾಗ, ಮಕ್ಕಳ ವಿಭಾಗ, ವೈದ್ಯರು ಸೂಚಿಸಿದಲ್ಲಿ ಉಚಿತ ಇಸಿಜಿ ತಪಾಸಣೆ, ಉಚಿತ ಲಭ್ಯ ಇರುವ ಔಷಧ ವಿತರಣೆ ಇತ್ಯಾದಿ ಸೌಲಭ್ಯಗಳನ್ನು ಈ ಆರೋಗ್ಯ ಶಿಬಿರದಲ್ಲಿ ಒದಗಿಸಲಾಗುವುದು. ಕೆಎಂಸಿ ಆಸ್ಪತ್ರೆಯ ಲಾಯಲ್ಟಿ ಕಾರ್ಡಿನ ನೋಂದಾವಣೆ ನಡೆಯಲಿದ್ದು, ಇದಕ್ಕಾಗಿ ಶಿಬಿರಕ್ಕೆ ಬರುವಾಗ ಕುಟುಂಬ ಸದಸ್ಯರ ಆಧಾರ್ ಪ್ರತಿಯನ್ನು ತರಬೇಕು. ಆರೋಗ್ಯ ತಪಾಸಣೆಗಳ ಜೊತೆಗೆ ಸೂಕ್ತ ಹಾಗೂ ಮಾಹಿತಿಯನ್ನೂ ಕೆಎಂಸಿ ಆಸ್ಪತ್ರೆಯ ನುರಿತ ತಜ್ಞ ವೈದ್ಯರುಗಳು ನೀಡಲಿದ್ದಾರೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶಿಬಿರದ ಸದುಪಯೋಗವನ್ನು ಪಡೆದುಕೊಳ್ಳುವಂತೆ ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಪ್ರಕಟನೆ ತಿಳಿಸಿದೆ.
    ಈ ಆರೋಗ್ಯ ಶಿಬಿರದಲ್ಲಿ ಕೃಷಿಕ ಸಮಾಜ ಕಡಬ ತಾಲೂಕು, ಪ್ರಾಥಮಿಕ ಆರೋಗ್ಯ ಕೇಂದ್ರ ಕಾಣಿಯೂರು, ಮಹಿಳಾ ಮಂಡಲ ಕುದ್ಮಾರು, ಕಾಣಿಯೂರು ಸವಣೂರು ರೈತ ಉತ್ಪಾದಕ ಕಂಪನಿ, ಸವಣೂರು ಯುವಕ ಮಂಡಲ ಸವಣೂರು, ಸ್ನೇಹಿತರ ಬಳಗ, ಕುದ್ಮಾರು, ದ.ಕ. ಜಿಲ್ಲಾ ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘ, ಝಾನ್ಸಿ ಯುವತಿ ಮಂಡಲ, ಕುದ್ಮಾರು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಕಡಬ ತಾಲೂಕು, ಬೆಳಂದೂರು ಗ್ರಾಮ ಪಂಚಾಯತ್, ಸ್ಕಂದಶ್ರೀ ಯುವಕ ಮಂಡಲ ಕುದ್ಮಾರು, ತಿರಂಗ ವಾರಿಯರ್ಸ್ ಕುದ್ಮಾರು, ಪ್ರಗತಿಬಂಧು ಸ್ವಸಹಾಯ ಸಂಘ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕುದ್ಮಾರು ಒಕ್ಕೂಟ, ಶ್ರೀ ಪಂಚಲಿಂಗೇಶ್ವರ ಮಹಿಳಾ ಮಂಡಲ ಬರೆಪ್ಪಾಡಿ ಈ ಸಂಘ ಸಂಸ್ಥೆಗಳು ಸಹಕರಿಸಲಿವೆ.
    ಹೆಚ್ಚಿನ ಮಾಹಿತಿಗಾಗಿ: 9901346804, 9148325258, 9606372100, 9901351027 ಈ ಸಂಖ್ಯೆಯನ್ನು ಸಂಪರ್ಕಿಸಬಹುದು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    KMC Hospital Mangalore Kudmaru School N.G World Charitable Trust Mangalore Savanuru Prathamika Krishi Pattina Sahakara Sangha Shree Poornananda Seva Prathishtana
    Previous Articleಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ತುಂಬೆ ಶಾಖೆ ವತಿಯಿಂದ ಉಚಿತ ಸಾಮಾನ್ಯ ವೈದ್ಯಕೀಯ, ನೇತ್ರ ತಪಾಸಣೆ, ರಕ್ತದಾನ ಶಿಬಿರ
    Next Article ಪ್ರಭಾಕರ ಪ್ರಭುವಿಗೆ ಸಂದ ಸಹಕಾರ ಶಿರೋಮಣಿ ಪ್ರಶಸ್ತಿ ಸಮಾಜದ ಧ್ವನಿಗೆ ಸಿಕ್ಕಿದ ಗೌರವ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.