ಕಾರ್ಕಳ: ಮುಂದಿನ ಪೀಳಿಗೆಗೆ ಪರಿಸರವನ್ನು ಸಮೃದ್ಧಗೊಳಿಸಿ ಹಸ್ತಾಂತರಿಸುವ ಮಹತ್ತರ ಜವಾಬ್ದಾರಿ ನಮ್ಮೆಲ್ಲರ ಮೇಲಿದ್ದು, ಸ್ವಚ್ಛ ಪರಿಸರವನ್ನು ನಿರ್ಮಿಸುವ ಜವಾಬ್ದಾರಿಯನ್ನು ನಾವು ಹೊರಬೇಕಾಗಿದೆ ಮತ್ತು ಮಕ್ಕಳು ಹಾಗೂ ಯುವಕರಲ್ಲಿ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸುವ ಕೆಲಸ ಇಂದೇ ಮಾಡಬೇಕು. ಈ ಮೂಲಕ ಸ್ವಚ್ಛ ಪರಿಸರವನ್ನು ಮುಂದಿನ ಸಮಾಜಕ್ಕೆ ಹಸ್ತಾಂತರಿಸಬೇಕಾಗಿದೆ ಎಂದು ವಿಶ್ವಕರ್ಮ ಬ್ಯಾಂಕಿನ ನಿರ್ದೇಶಕರಾದ ಭರತ್ ನಿಡ್ಪಳ್ಳಿ ಹೇಳಿದರು.
https://chat.whatsapp.com/FCEnlTkAKCC0MGPhXtX4i4
ಅವರು ವಿಶ್ವಕರ್ಮ ಸಹಕಾರ ಬ್ಯಾಂಕಿನ ಕಾರ್ಕಳ ಶಾಖೆಯ ವತಿಯಿಂದ ಭಾನುವಾರ “ಸ್ವಚ್ಛತಾ ಹೀ ಸೇವಾ” ಎಂಬ ಧ್ಯೇಯದಂತೆ ನಡೆದ 28ನೇ ಸ್ವಚ್ಛ ಭಾರತ್ ಶ್ರಮದಾನದಲ್ಲಿ ಭಾಗವಹಿಸಿದ ಸ್ವಯಂಸೇವಕರನ್ನು ಉದ್ದೇಶಿಸಿ ಹೇಳಿದರು.
ಧಾರ್ಮಿಕ ಹಾಗೂ ಸಾಮಾಜಿಕ ಕಾರ್ಯಕರ್ತರಾದ ಗುಣವರ್ಮ ಜೈನ್ ಹಾಗೂ ಎಸ್‌ವಿಟಿ ವಿದ್ಯಾಕೇಂದ್ರದ ಸ್ಕೌಟ್ಸ್ ಆಂಡ್ ಗೈಡ್ಸ್ ಯೋಜನಾಧಿಕಾರಿ ಅಕ್ಷತಾ ಪ್ರಶಾಂತ್ ಆಚಾರ್ಯ ಹಸಿರು ನಿಶಾನೆ ತೋರುವ ಮೂಲಕ ಶ್ರಮದಾನಕ್ಕೆ ಚಾಲನೆ ನೀಡಿದರು. ಕಾರ್ಕಳದ ಆನೆಕೆರೆ ಸುತ್ತಮುತ್ತಲಿನ ಪರಿಸರದಲ್ಲಿ ಸ್ವಚ್ಛತೆಯ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಶ್ರಮದಾನ ಕಾರ್ಯಕ್ರಮ ನಡೆಯಿತು.

ಸ್ವಚ್ಛ ಬ್ರಿಗೇಡ್ ಬಜಗೋಳಿ ಇದರ ಪ್ರಶಾಂತ್ ಹಾಗೂ ಸದಸ್ಯರು, ಶ್ರೀಕೃಷ್ಣ ಕ್ಷೇತ್ರ ಸೇವಾದಳ ಆನೆಕೆರೆ ಇದರ ಅಧ್ಯಕ್ಷ ಸತೀಶ್ ಕೋಟ್ಯಾನ್ ಹಾಗೂ ಸದಸ್ಯರು, ನವಜ್ಯೋತಿ ಫ್ರೆಂಡ್ಸ್ ಕ್ಲಬ್ ಆನೆಕೆರೆ ಇದರ ಅಧ್ಯಕ್ಷ ರಾಜೇಶ್ ನಾಯ್ಕ್ ಹಾಗೂ ಸದಸ್ಯರು, ಶ್ರೀ ಭುವನೇಂದ್ರ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿ ಶಂಕರ್ ಕುಡ್ವ ಹಾಗೂ ವಿದ್ಯಾರ್ಥಿಗಳು, ಸ್ವಚ್ಛತಾ ಸೇನಾನಿ ನೀಲಾಧರ್, ರಾಘವೇಂದ್ರ ಗೇಮ್ಸ್ ಕ್ಲಬ್ ಇದರ ರಾಜೇಶ್ ಆಚಾರ್ಯ, ರಾಮಪ್ಪ ಶಾಲೆ ಆನೆಕೆರೆ ಇದರ ಅಧ್ಯಾಪಕ ವೃಂದ ಹಾಗೂ ವಿದ್ಯಾರ್ಥಿಗಳು , ಎಸ್ ವಿ ಟಿ ವಿದ್ಯಾಕೇಂದ್ರ ಸ್ಕೌಟ್ಸ್ ಆಂಡ್ ಗೈಡ್ಸ್ ವಿದ್ಯಾರ್ಥಿಗಳು, ವಿಶ್ವಕರ್ಮ ಸಹಕಾರ ಬ್ಯಾಂಕಿನ ಕಾರ್ಕಳ ಶಾಖೆಯ ಶಾಖಾಧಿಕಾರಿ ನಿತಿನ್ ಕೆ. ಹಾಗೂ ಸಿಬ್ಬಂದಿಗಳು, ಬ್ಯಾಂಕಿನ ಸದಸ್ಯರು, ಗ್ರಾಹಕರು ಹಾಗೂ ಹಿತೈಷಿಗಳು ಭಾಗವಹಿಸಿ ಶ್ರಮದಾನದಲ್ಲಿ ಕೈ ಜೋಡಿಸಿ ಸಹಕರಿಸಿದರು.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

