Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಎಸ್‌ಸಿಡಿಸಿಸಿ ಬ್ಯಾಂಕ್‌ ಯುಪಿಐ, ಐಎಂಪಿಎಸ್ ಸೌಲಭ್ಯಕ್ಕೆ ಚಾಲನೆ
    News

    ಎಸ್‌ಸಿಡಿಸಿಸಿ ಬ್ಯಾಂಕ್‌ ಯುಪಿಐ, ಐಎಂಪಿಎಸ್ ಸೌಲಭ್ಯಕ್ಕೆ ಚಾಲನೆ

    adminBy adminFebruary 18, 2026

    ಎಲ್ಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲೂ ಈ ಸೌಲಭ್ಯ ಅಳವಡಿಸಲು ಡಾ.ಎಂ.ಎನ್‌.ರಾಜೇಂದ್ರ ಕುಮಾರ್‌ ಕರೆ

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಗ್ರಾಹಕರ ಅನುಕೂಲಕ್ಕಾಗಿ ಯುಪಿಐ ಮತ್ತು ಐಎಂಪಿಎಸ್ ಸೌಲಭ್ಯ ಆರಂಭಿಸಿದ್ದು, ಎಲ್ಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲೂ ಈ ಸೌಲಭ್ಯ ಅಳವಡಿಸಿಕೊಳ್ಳಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರಕುಮಾರ್ ಹೇಳಿದರು.
    ಎಸ್‌ಸಿಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ಮಂಗಳವಾರ ಡಿಜಿಟಲ್ ಬ್ಯಾಂಕಿಂಗ್ ಸೇವೆಗಳಾದ ಯುಪಿಐ ಮತ್ತು ಐಎಂಪಿಎಸ್ ಸೌಲಭ್ಯಗಳಿಗೆ ಅಧಿಕೃತ ಚಾಲನೆ ನೀಡಿ, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

    https://chat.whatsapp.com/FCEnlTkAKCC0MGPhXtX4i4

    ಬ್ಯಾಂಕಿಂಗ್ ಸೇವೆಯಲ್ಲಿ ದೇಶಕ್ಕೆ ಮಾದರಿಯಾಗಿ ಕಾರ್ಯನಿರ್ವಹಿಸುತ್ತಿರುವ ಎಸ್‌ಸಿಡಿಸಿಸಿ ಬ್ಯಾಂಕ್ ಅತ್ಯಾಧುನಿಕ ತಂತ್ರಜ್ಞಾನದ ಬ್ಯಾಂಕಿಂಗ್ ಸೇವೆಗಳನ್ನು ಗ್ರಾಹಕರಿಗೆ ನೀಡುತ್ತಿದ್ದು, ಇದೀಗ ಗ್ರಾಹಕರಿಗೆ ಡಿಜಿಟಲ್ ಬ್ಯಾಂಕಿಂಗ್ -ಯುಪಿಐ ಮತ್ತು ಐಎಂಪಿಎಸ್ ಸೌಲಭ್ಯ ಆರಂಭಿಸಿದೆ. ಈ ಸೇವೆಯ ಮೂಲಕ ಎಸ್‌ಸಿಡಿಸಿಸಿ ಬ್ಯಾಂಕಿನ ಮೊಬೈಲ್‌ ಅಪ್ಲಿಕೇಶನ್ ಬಳಸಿ ಗ್ರಾಹಕರು ಕ್ಷಣಾರ್ಧದಲ್ಲಿ ಹಣ ವರ್ಗಾವಣೆ ಮಾಡುವ ಸೌಲಭ್ಯ ಪಡೆಯಬಹುದು. ಈ ವ್ಯವಸ್ಥೆಯನ್ನು ಎಲ್ಲ ಸೊಸೈಟಿಗಳೂ ಅಳವಡಿಸಲು ಅಗತ್ಯ ತರಬೇತಿ ನೀಡಲಾಗುವುದು ಎಂದರು.
    ಯುಪಿಐ ಸೇವೆಯ ಮೂಲಕ ನಮ್ಮ ಗ್ರಾಹಕರು ಸುಲಭವಾಗಿ ಹಾಗೂ ಸುರಕ್ಷಿತವಾಗಿ ಹಣ ವರ್ಗಾವಣೆ ಮಾಡಬಹುದು. ಗ್ರಾಹಕರು ಗೂಗಲ್ ಪೇ, ಫೋನ್ ಪೇ, ಭೀಮ್, ವಾಟ್ಸ್‌ಆಪ್ ಪೇ, ಪೇಟಿಎಂ, ಫ್ರೀಚಾರ್ಜ್, ಸೂಪರ್‌ಮನಿ ಮುಂತಾದ ಅಪ್ಲಿಕೇಶನ್‌ಗಳ ಮೂಲಕ ಸುಲಭವಾಗಿ ವ್ಯವಹಾರಗಳನ್ನು ನಡೆಸಬಹುದು ಎಂದರು.
    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಹಕಾರಿ ಸಂಘಗಳು ಅತ್ಯಾಧುನಿಕವಾಗಿ ಬೆಳೆದು ನಿಂತಿವೆ. ಹೊಸ ಕಟ್ಟಡವಿದೆ. ಕೆಲವೆಡೆ ಹವಾನಿಯಂತ್ರಿತ ವ್ಯವಸ್ಥೆ ಒಳಗೊಂಡಿದೆ. ಎಲ್ಲ ಸಹಕಾರಿ ಸಂಘಗಳು ಲಾಭದಲ್ಲಿ ಕಾರ್ಯನಿರ್ವಹಿಸುತ್ತಿವೆ. ಈ ಸಾಧನೆ ನಮ್ಮ ಜಿಲ್ಲೆಯಲ್ಲಿ ಮಾತ್ರ ಆಗುತ್ತಿದೆ. ಪ್ರಾಥಮಿಕ ಕೃಷಿ ಸಹಕಾರ ಸಂಘಗಳು ಆಧುನಿಕ ತಂತ್ರಜ್ಞಾನವನ್ನೂ ಅಳವಡಿಸಿಕೊಳ್ಳಬೇಕಿದೆ ಎಂದು ಹೇಳಿದರು.
    ನೂತನ ವ್ಯವಸ್ಥೆ ಬಗ್ಗೆ ಮಾಹಿತಿ ನೀಡಿದ ನಂದಕುಮಾರ್, ಐಎಂಪಿಎಸ್ ಸೌಲಭ್ಯ ಮೂಲಕ ಎಸ್‌ಸಿಡಿಸಿಸಿ ಬ್ಯಾಂಕ್ ಗ್ರಾಹಕರು ಇನ್ನುಮುಂದೆ ತಕ್ಷಣ ಹಣ ಪಾವತಿ, ವರ್ಗಾವಣೆ ಮಾಡಬಹುದು. ಎಸ್‌ಸಿಡಿಸಿಸಿ ಬ್ಯಾಂಕ್ ಆಪ್ ಮೂಲಕ ಈ ತಂತ್ರಜ್ಞಾನವನ್ನು ಬಳಸಿಕೊಳ್ಳಬಹುದು. ಹೊಸ ತಂತ್ರಜ್ಞಾನ, ವ್ಯವಸ್ಥೆಗಳನ್ನು ಎಸ್‌ಸಿಡಿಸಿಸಿ ಬ್ಯಾಂಕ್ ದೇಶದಲ್ಲೇ ಮೊದಲಿಗೆ ಅಳವಡಿಕೆ ಮಾಡಿಕೊಳ್ಳುತ್ತಿದ್ದು, ದೇಶಕ್ಕೆ ಮಾದರಿಯಾಗಿದೆ ಎಂದರು.
    ಯುಪಿಐ ಮತ್ತು ಐಎಂಪಿಎಸ್ ವ್ಯವಸ್ಥೆಯ ಪೋಸ್ಟರ್, ಕ್ಯೂಆರ್‌ ಕೋಡ್‌ ಅನ್ನು ಡಾ. ಎಂ.ಎನ್. ರಾಜೇಂದ್ರಕುಮಾರ್ ಅನಾವರಣ ಮಾಡಿದರು. ನೂತನ ಸೌಲಭ್ಯಕ್ಕೆ ಸಹಕಾರ ನೀಡಿದವರನ್ನು ಗೌರವಿಸಲಾಯಿತು. ಎಸ್‌ಸಿಡಿಸಿಸಿ ಬ್ಯಾಂಕ್‌ ಉಪಾಧ್ಯಕ್ಷ ವಿನಯ್ ಕುಮಾರ್ ಸೂರಿಂಜೆ, ನಿರ್ದೇಶಕರಾದ ಭಾಸ್ಕರ್ ಎಸ್.ಕೋಟ್ಯಾನ್, ಎಂ.ವಾದಿರಾಜ ಶೆಟ್ಟಿ, ಸದಾಶಿವ ಉಳ್ಳಾಲ್, ಮಹೇಶ್ ಹೆಗ್ಡೆ ಎಂ., ಅಶೋಕ್ ಕುಮಾರ್ ಶೆಟ್ಟಿ, ರಾಜೇಶ್ ರಾವ್, ಎಸ್.ಎನ್.ಮನ್ಮಥ , ಕುಶಾಲಪ್ಪ ಗೌಡ, ಸಹಕಾರ ಸಂಘಗಳ ಉಪ ನಿಬಂಧಕ ರಮೇಶ್ ಎಚ್.ಎನ್, ಬ್ಯಾಂಕಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋಪಾಲಕೃಷ್ಣ ಭಟ್ ಉಪಸ್ಥಿತರಿದ್ದರು. ದ.ಕ. ಜಿಲ್ಲಾ ಸಹಕಾರಿ ಯೂನಿಯನ್‌ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು ಸ್ವಾಗತಿಸಿ, ವಂದಿಸಿದರು. ರಾಜೀವ್ ಕಕ್ಯಪದವು ಕಾರ್ಯಕ್ರಮ ನಿರೂಪಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    Dr. M.N Rajendrakumar IMPS SCDCC Bank UPI
    Previous Articleಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯ ಸಹಕಾರಿ ಸಂಘಗಳು ಎಫ್‌ಎಫ್‌ಪಿಒ ಆಗಿ ಪರಿವರ್ತನೆ
    Next Article ಮಾರ್ಚ್‌ 1ರಂದು ಸಹಕಾರ ಭಾರತಿಯಿಂದ ದ.ಕ. ಜಿಲ್ಲಾಮಟ್ಟದ ಸಹಕಾರಿ ಕ್ರೀಡೋತ್ಸವ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.