Close Menu
    Top News

    ಸ್ವಚ್ಛತೆ, ಪರಿಸರ ಜಾಗೃತಿ ನಾಗರಿಕ ಶಿಷ್ಟಾಚಾರದ ಭಾಗ : ಡಾ.ರಾಧಾಕೃಷ್ಣ ನಾಯರ್

    June 7, 2026

    ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    June 6, 2026

    ನಾಳೆ ವಿಶ್ವಕರ್ಮ ಬ್ಯಾಂಕ್‌ ಸ್ವರ್ಣ ಸಂಭ್ರಮದ ಸ್ವಚ್ಛ ಭಾರತ್‌ ಕಾರ್ಯಕ್ರಮ ಸಮಾರೋಪ

    June 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಮಾರ್ಚ್‌ 1ರಂದು ಸಹಕಾರ ಭಾರತಿಯಿಂದ ದ.ಕ. ಜಿಲ್ಲಾಮಟ್ಟದ ಸಹಕಾರಿ ಕ್ರೀಡೋತ್ಸವ
    News

    ಮಾರ್ಚ್‌ 1ರಂದು ಸಹಕಾರ ಭಾರತಿಯಿಂದ ದ.ಕ. ಜಿಲ್ಲಾಮಟ್ಟದ ಸಹಕಾರಿ ಕ್ರೀಡೋತ್ಸವ

    adminBy adminFebruary 18, 2026
    Sports, set of athletes of various sports disciplines. Isolated vector silhouettes. Run, soccer, hockey, volleyball, basketball, rugby, baseball, american football, cycling, golf

    ಮಂಗಳೂರು: ಸಹಕಾರ ಭಾರತಿ ಮಂಗಳೂರು ಮಹಾನಗರ ಜಿಲ್ಲೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಆಶ್ರಯದಲ್ಲಿ ಸಹಕಾರಿ ಸಂಸ್ಥೆಗಳ ಆಡಳಿತ ಮಂಡಳಿ ಸದಸ್ಯರು ಮತ್ತು ಸಿಬ್ಬಂದಿಗಳಿಗಾಗಿ ಮಾರ್ಚ್‌ 1ರಂದು ಮಂಗಳೂರಿನ ಅಡ್ಯಾರು ಸಹ್ಯಾದ್ರಿ ಇಂಜಿನಿಯರಿಂಗ್‌ ಕಾಲೇಜು ಕ್ರೀಡಾಂಗಣದಲ್ಲಿ ದಕ್ಷಿಣ ಕನ್ನಡ ಜಿಲ್ಲಾಮಟ್ಟದ ಸಹಕಾರಿ ಕ್ರೀಡೋತ್ಸವ ಆಯೋಜಿಸಲಾಗಿದೆ.

    https://chat.whatsapp.com/FCEnlTkAKCC0MGPhXtX4i4
    ಬೆಳಗ್ಗೆ 9ಕ್ಕೆ ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಅಧ್ಯಕ್ಷರಾದ ಡಾ.ಪ್ರಭಾಕರ ಭಟ್‌ ಕಲ್ಲಡ್ಕ ಧ್ವಜಾರೋಹಣ ಮಾಡಲಿದ್ದಾರೆ. ಸಹಕಾರ ಭಾರತಿ ಮಂಗಳೂರು ಮಹಾನಗರ ಜಿಲ್ಲೆಯ ಅಧ್ಯಕ್ಷರಾದ ಜಿ.ಆರ್‌ ಪ್ರಸಾದ್‌ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಸದರಾದ ಕ್ಯಾ.ಬ್ರಿಜೇಶ್‌ ಚೌಟ ಕ್ರೀಡೋತ್ಸವ ಉದ್ಘಾಟಿಸಲಿದ್ದಾರೆ. ರಾಷ್ಟ್ರೀಯ ವಾಲಿಬಾಲ್‌ ಆಟಗಾರ ಸುಪ್ರೀತ್‌ ಆಳ್ವ ಪೊನ್ನೋಡಿ ಕ್ರೀಡಾಜ್ಯೋತಿ ಪ್ರಜ್ವಲನೆ ಮಾಡಲಿದ್ದಾರೆ. ಉಚಿತ ವೈದ್ಯಕೀಯ ಶಿಬಿರವನ್ನು ವಿಧಾನ ಪರಿಷತ್‌ ಸದಸ್ಯರಾದ, ಸಹ್ಯಾದ್ರಿ ಇಂಜಿನಿಯರಿಂಗ್‌ ಕಾಲೇಜಿನ ಅಧ್ಯಕ್ಷರಾದ ಮಂಜುನಾಥ್‌ ಭಂಡಾರಿ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮಂಗಳೂರು ವಿಭಾಗ ಕಾರ್ಯವಾಹರಾದ ವಾದಿರಾಜ್‌, ಸಹಕಾರ ಭಾರತಿ ರಾಜ್ಯ ಕಾರ್ಯದರ್ಶಿ ಗಣೇಶ್‌ ಶೆಣೈ ಭಾಗವಹಿಸಲಿದ್ದಾರೆ. ಶ್ರೀನಿವಾಸ ವೈದ್ಯಕೀಯ ಮತ್ತು ದಂತ ವಿದ್ಯಾಲಯ ಮುಕ್ಕ ಇಲ್ಲಿನ ನುರಿತ ವೈದ್ಯರಿಂದ ಸಹಕಾರಿ ಬಂಧುಗಳಿಗೆ ಉಚಿತ ವೈದ್ಯಕೀಯ ತಪಾಸಣಾ ಮತ್ತು ದಂತ ತಪಾಸಣಾ ಶಿಬಿರವು ಮಧ್ಯಾಹ್ನ 1 ಗಂಟೆಯ ತನಕ ನಡೆಯಲಿದೆ.


    ಸಂಜೆ 5 ಗಂಟೆಗೆ ಪ್ರಶಸ್ತಿ ವಿತರಣಾ ಸಮಾರಂಭ ನಡೆಯಲಿದ್ದು, ಸಹಕಾರ ಭಾರತಿ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರಾದ ಬಿ.ಸುಧಾಕರ ರೈ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ದಕ್ಷಿಣ ಪ್ರಾಂತ ಸಹಕಾರ್ಯವಾಹ ಪ್ರಕಾಶ್‌ ಪಿ.ಎಸ್‌, ಶಾಸಕರಾದ ಡಾ.ವೈ ಭರತ್‌ ಶೆಟ್ಟಿ, ವೇದವ್ಯಾಸ ಕಾಮತ್‌, ಜನತಾ ಬಜಾರ್‌ ಅಧ್ಯಕ್ಷರಾದ ಪ್ರಸನ್ನ ಕೆ., ಸಹಕಾರ ಭಾರತಿ ಮೈಸೂರು ವಿಭಾಗ ಸಂಘಟನಾ ಕಾರ್ಯದರ್ಶಿ ಮೋಹನ್‌ ಕುಮಾರ್‌ ಕುಂಬ್ಳೇಕರ್‌ ಭಾಗವಹಿಸಲಿದ್ದಾರೆ. ಅಂತಾರಾಷ್ಟ್ರೀಯ ಮಟ್ಟದ ಕಬಡ್ಡಿ ಆಟಗಾರ್ತಿ ಧನಲಕ್ಷ್ಮೀ ಪೂಜಾರಿ ವಿಶೇಷ ಆಹ್ವಾನಿತರಾಗಿ ಭಾಗವಹಿಸಲಿದ್ದಾರೆ. ಸಹಕಾರ ಭಾರತಿ ಮಂಗಳೂರು ಮಹಾನಗರ ಜಿಲ್ಲೆಯ ಪ್ರಧಾನ ಕಾರ್ಯದರ್ಶಿ ಚರಣ್‌ ರಾಜ್‌, ಸಂಘಟನಾ ಕಾರ್ಯದರ್ಶಿ ವಲ್ಸರಾಜ್‌, ಮಹಿಳಾ ಪ್ರಮುಖ್‌ ಮದಲಾಕ್ಷಿ ರೈ, ದ.ಕ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದೇವಿಪ್ರಸಾದ್‌ ಕಲ್ಲಾಜೆ, ಸಂಘಟನಾ ಕಾರ್ಯದರ್ಶಿ ಸುರೇಶ್‌ ಆಳ್ವ, ಮಹಿಳಾ ಪ್ರಮುಖ್‌ ಸುಭದ್ರಾ ಎನ್‌.ರಾವ್‌ ಪಾಲ್ಗೊಳ್ಳಲಿದ್ದಾರೆ.
    ಕ್ರೀಡೋತ್ಸವದಲ್ಲಿ 100, ಮೀ ಓಟ, 200 ಮೀ., ಶಾಟ್‌ಪುಟ್‌, ಕ್ರಿಕೆಟ್‌, ವಾಲಿಬಾಲ್‌, ತ್ರೋಬಾಲ್‌, ಹಗ್ಗಜಗ್ಗಾಟ, ಆಶುಭಾಷಣ, ರಸಪ್ರಶ್ನೆ ಇತ್ಯಾದಿ ಸ್ಪರ್ಧೆಗಳು ನಡೆಯಲಿವೆ ಎಂದು ಸಹಕಾರ ಭಾರತಿಯ ಪ್ರಕಟಣೆ ತಿಳಿಸಿದೆ. ಹೆಚ್ಚಿನ ಮಾಹಿತಿಗೆ 9480575927, 9886652495, 9845752649, 9900523733 ಈ ನಂಬರ್‌ ಅನ್ನು ಸಂಪರ್ಕಿಸಬಹುದು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    Sahakara Bharathi Sahakari Kreedotsava Sahyadri Engineering College Adyar
    Previous Articleಎಸ್‌ಸಿಡಿಸಿಸಿ ಬ್ಯಾಂಕ್‌ ಯುಪಿಐ, ಐಎಂಪಿಎಸ್ ಸೌಲಭ್ಯಕ್ಕೆ ಚಾಲನೆ
    Next Article ಅಡಕೆ ಕುರಿತ ರಚನಾತ್ಮಕ, ವೈಜ್ಞಾನಿಕ ಸಂಶೋಧನೆಗೆ ಕ್ಯಾಂಪ್ಕೊ ಪೂರ್ಣ ಬೆಂಬಲ

    Related Posts

    ಸ್ವಚ್ಛತೆ, ಪರಿಸರ ಜಾಗೃತಿ ನಾಗರಿಕ ಶಿಷ್ಟಾಚಾರದ ಭಾಗ : ಡಾ.ರಾಧಾಕೃಷ್ಣ ನಾಯರ್

    June 7, 2026

    ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    June 6, 2026

    ನಾಳೆ ವಿಶ್ವಕರ್ಮ ಬ್ಯಾಂಕ್‌ ಸ್ವರ್ಣ ಸಂಭ್ರಮದ ಸ್ವಚ್ಛ ಭಾರತ್‌ ಕಾರ್ಯಕ್ರಮ ಸಮಾರೋಪ

    June 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಸ್ವಚ್ಛತೆ, ಪರಿಸರ ಜಾಗೃತಿ ನಾಗರಿಕ ಶಿಷ್ಟಾಚಾರದ ಭಾಗ : ಡಾ.ರಾಧಾಕೃಷ್ಣ ನಾಯರ್

    June 7, 2026

    ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    June 6, 2026

    ನಾಳೆ ವಿಶ್ವಕರ್ಮ ಬ್ಯಾಂಕ್‌ ಸ್ವರ್ಣ ಸಂಭ್ರಮದ ಸ್ವಚ್ಛ ಭಾರತ್‌ ಕಾರ್ಯಕ್ರಮ ಸಮಾರೋಪ

    June 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.