ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಲಾಲ್‌ಭಾಗ್ ಶಾಖೆಯ 11ನೇ ವಾರ್ಷಿಕೋತ್ಸವದ ಪ್ರಯುಕ್ತ ಉಚಿತ ಸಾಮಾನ್ಯ ವೈದ್ಯಕೀಯ ಮತ್ತು ನೇತ್ರ ತಪಾಸಣಾ ಶಿಬಿರವನ್ನು ಕುದ್ರೋಳಿ ಯುವಕ ಸಂಘ (ರಿ), ಕುದ್ರೋಳಿ, ಮಂಗಳೂರು ಹಾಗೂ ಎನ್.ಜಿ. ವಲ್ಡ್ ಚಾರಿಟೇಬಲ್ ಟ್ರಸ್ಟ್ (ರಿ) ಮಂಗಳೂರು ಇವರ ಜಂಟಿ ಸಹಯೋಗದೊಂದಿಗೆ ಫೆ.22ರಂದು ಆದಿತ್ಯವಾರ ಪೂರ್ವಾಹ್ನ 9.30ರಿಂದ ಅಪರಾಹ್ನ 12.30ರವರೆಗೆ ಕುದ್ರೋಳಿ ಯುವಕ ಸಂಘದಲ್ಲಿ ಆಯೋಜಿಸಲಾಗಿದೆ.
https://chat.whatsapp.com/FCEnlTkAKCC0MGPhXtX4i4
ಈ ವೈದ್ಯಕೀಯ ಶಿಬಿರದಲ್ಲಿ ಮಂಗಳ ಕಾಲೇಜು, ಮಂಗಳ ಆಸ್ಪತ್ರೆ ಮತ್ತು ಮಂಗಳ ಕಿಡ್ನಿ ಪೌಂಡೇಶನ್, ಮಂಗಳೂರು ಇವರ ನುರಿತ ವೈದ್ಯರ ತಂಡದವರಿಂದ ಕಣ್ಣಿನ ತಪಾಸಣೆ, ಅಗತ್ಯವುಳ್ಳವರಿಗೆ ಕಣ್ಣಿನ ಪೊರೆಯ ಶಸ್ತ್ರಚಿಕಿತ್ಸೆ, ಇ.ಸಿ.ಜಿ, ಕಿವಿ, ಮೂಗು, ಗಂಟಲು ತಪಾಸಣೆ, ಸಾಮಾನ್ಯ ವೈದ್ಯಕೀಯ ಸಮಾಲೋಚನೆ, ಮಧುಮೇಹ ತಪಾಸಣೆ, ಬಿ.ಪಿ. ತಪಾಸಣೆ, ಚರ್ಮರೋಗ ತಪಾಸಣೆ ಹಾಗೂ ಇತರ ವೈದ್ಯಕೀಯ ಸೇವೆಗಳು ಲಭ್ಯವಿದೆ. ಅಗತ್ಯವುಳ್ಳವರಿಗೆ ಉಚಿತ ಕನ್ನಡಕ ವಿತರಣೆ ಮಾಡಲಾಗುವುದು. ಸಂಘದ ಸದಸ್ಯರು ಮತ್ತು ಸಾರ್ವಜನಿಕರು ಇದರ ಸದುಪಯೋಗ ಪಡೆಯಬೇಕಾಗಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

