ಪುತ್ತೂರು: ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಶ್ರಯದಲ್ಲಿ ಶ್ರೀ ಪೂರ್ಣಾನಂದ ಸೇವಾ ಪ್ರತಿಷ್ಠಾನ, ಎನ್.ಜಿ ವರ್ಲ್ಡ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು, ಕೆ.ಎಂ.ಸಿ ಆಸ್ಪತ್ರೆ ಅತ್ತಾವರ ಮಂಗಳೂರು, ಹಿರಿಯ ವಿದ್ಯಾರ್ಥಿ ಸಂಘ ಹಾಗೂ ಶಾಲಾಭಿವೃದ್ಧಿ ಸಮಿತಿ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕುದ್ಮಾರು ಇವುಗಳ ಸಹಯೋಗದಲ್ಲಿ ಭಾನುವಾರ ಕುದ್ಮಾರು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೃಹತ್ ಉಚಿತ ವೈದ್ಯಕೀಯ ತಪಾಸಣೆ ಹಾಗೂ ಆರೋಗ್ಯ ಮಾಹಿತಿ ಶಿಬಿರ ನಡೆಯಿತು.
https://chat.whatsapp.com/FCEnlTkAKCC0MGPhXtX4i4
ಶಾಸಕಿ ಭಾಗಿರಥಿ ಮುರುಳ್ಯ ಶಿಬಿರವನ್ನು ಉದ್ಘಾಟಿಸಿ ಮಾತನಾಡಿ, ಒಳ್ಳೆಯ ಆರೋಗ್ಯ ಕಾಪಾಡಿಕೊಂಡು ಬರುವುದು ಪ್ರತಿಯೊಬ್ಬರ ಕರ್ತವ್ಯ. ಆರೋಗ್ಯವೇ ಅಮೂಲ್ಯವಾದ ಸಂಪತ್ತು. ಯಾವುದೇ ಕ್ಷಣದಲ್ಲಿ ಅನಾರೋಗ್ಯ ಕಾಡಿದರೆ ತಕ್ಷಣವೇ ವೈದ್ಯರನ್ನು ಸಂಪರ್ಕ ಮಾಡಿ ಸೂಕ್ತ ಚಿಕಿತ್ಸೆ ಪಡೆಯುವುದು ನಮ್ಮ ಮುಖ್ಯ ಕೆಲಸವಾಗಬೇಕು. ಕುದ್ಮಾರಿನಂತ ಸಣ್ಣ ಗ್ರಾಮದಲ್ಲಿ ಬೃಹತ್ ಉಚಿತ ವೈದ್ಯಕೀಯ ತಪಾಸಣೆ, ಆರೋಗ್ಯ ಮಾಹಿತಿ ಶಿಬಿರವನ್ನು ಸಂಘಟಿಸಿದ ಆಯೋಜಕರ ಶ್ರಮ ಶ್ಲಾಘನೀಯ ಎಂದು ಹೇಳಿದರು. ಶ್ರೀ ಪೂರ್ಣಾನಂದ ಸೇವಾ ಪ್ರತಿಷ್ಠಾನದ ಸಂಚಾಲಕ ರಮೇಶ್ ಮಾತನಾಡಿ ಆರೋಗ್ಯ ತಪಾಸಣೆ ಮಾಡುವುದು ಪ್ರತಿಯೊಬ್ಬರ ಕರ್ತವ್ಯವಾಗಿದ್ದು, ಆರೋಗ್ಯಪೂರ್ಣ ಸಮಾಜ ನಿರ್ಮಾಣ ಮಾಡುವುದು ನಮ್ಮ ಗುರಿಯಾಗಬೇಕು ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಕುದ್ಮಾರು ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ದೇವರಾಜ್ ನೂಜಿ ಮಾತನಾಡಿ, ಕುದ್ಮಾರು ಅಭಿವೃದ್ಧಿ ಹೊಂದುತ್ತಿರುವ ಗ್ರಾಮ, ಗ್ರಾಮದ ಅಭಿವೃದ್ಧಿ ದೃಷ್ಟಿಯಲ್ಲಿ ನಾವೆಲ್ಲ ಕೆಲಸ ಮಾಡಬೇಕು. ಗ್ರಾಮದ ಪ್ರತಿಯೊಬ್ಬರೂ ಆರೋಗ್ಯವಂತರಾಗಬೇಕು. ಈ ನಿಟ್ಟಿನಲ್ಲಿ ಶಿಬಿರ ಆಯೋಜನೆ ಸಾರ್ಥಕವಾಗಿದೆ, ಕುದ್ಮಾರು ಸೇರಿದಂತೆ ಐದು ಗ್ರಾಮಗಳ ಜನರಿಗೆ ಇದರ ಪ್ರಯೋಜನ ಆಗಲಿದೆ ಎಂದರು.
ಶ್ರೀ ಪೂರ್ಣಾನಂದ ಸೇವಾ ಪ್ರತಿಷ್ಠಾನದ ಅಧ್ಯಕ್ಷ ಮುರಳೀಧರ್ ಪ್ರಭು, ಕೆಎಂಸಿಯ ಪಿಆರ್‌ಒ ಡಾ.ಹರ್ಬರ್ಟ್, ಎನ್.ಜಿ ವರ್ಲ್ಡ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು ಇದರ ಲಿಲ್ಲಿ ಮೇರಿ, ಕುದ್ಮಾರು ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ, ಪತ್ರಕರ್ತ ರಾಮಚಂದ್ರ ಬರೆಪ್ಪಾಡಿ, ಕುದ್ಮಾರು ಶಾಲಾ ಮುಖ್ಯ ಶಿಕ್ಷಕರಾದ ಮಿನಿ ವರ್ಗೀಸ್, ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಉಪಾಧ್ಯಕ್ಷ ಚೇತನ್ ಕುಮಾರ್ ಕೋಡಿಬೈಲು, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಲಜಾ ಎಚ್ ರೈ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ತಾರಾನಾಥ ಕಾಯರ್ಗ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಕಡಬ ತಾಲೂಕು ಕೃಷಿಕ ಸಮಾಜದ ಅಧ್ಯಕ್ಷ ರಾಕೇಶ್ ರೈ ಕೆಡೆಂಜಿ ವಂದಿಸಿದರು. ಕುದ್ಮಾರು ಹಿರಿಯ ವಿದ್ಯಾರ್ಥಿ ಸಂಘದ ಪ್ರಧಾನ ಕಾಯದರ್ಶಿ ನಾಗೇಶ್ ಕೆಡೆಂಜಿ ಕಾರ್ಯಕ್ರಮ ನಿರೂಪಿಸಿದರು. ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರಾದ ಉದಯ ರೈ ಮಾದೋಡಿ, ಚೆನ್ನಪ್ಪ ಗೌಡ ನೂಜಿ, ಪ್ರಕಾಶ್ ರೈ ಸಾರಕರೆ, ಶಿವಪ್ರಸಾದ್ ಕಳುವಾಜೆ, ಜ್ಞಾನೇಶ್ವರಿ ಬರೆಪ್ಪಾಡಿ, ಗಂಗಾಧರ್ ಪೆರಿಯಡ್ಕ, ತಿಮ್ಮಪ್ಪ ಬನಾರಿ, ಪುತ್ತೂರು ಎಪಿಎಂಸಿ ಮಾಜಿ ಅಧ್ಯಕ್ಷ ದಿನೇಶ್ ಮೆದು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಕಡಬ ತಾಲೂಕು ಅಧ್ಯಕ್ಷ ಮಹೇಶ್ ಕೆ. ಸವಣೂರು, ಉದ್ಯಮಿ ರಾಜಾರಾಮ್ ಪ್ರಭು, ಸವಣೂರು ಬೊಳ್ಳಿ ಬೊಟ್ಟು ತುಳುಕೂಟದ ಗೌರವಾಧ್ಯಕ್ಷ ಗಿರಿಶಂಕರ್ ಸುಲಾಯ, ದ.ಕ. ಜಿಲ್ಲಾ ಯುವಜನ ಒಕ್ಕೂಟದ ಅಧ್ಯಕ್ಷ ಸುರೇಶ್ ರೈ ಸೂಡಿಮುಳ್ಳು, ನಿವೃತ್ತ ಮುಖ್ಯಗುರು ಕುಶಾಲಪ್ಪ ಗೌಡ, ಹಿರಿಯ ವಿದ್ಯಾರ್ಥಿ ಸಂಘದ ಕೋಶಾಧಿಕಾರಿ ಯಶೋಧರ್ ಕೆಡೆಂಜಿಕಟ್ಟ, ಸೀತಾರಾಮ ಗೌಡ ಮುಂಡಾಳ, ತಾಲೂಕು ಪಂಚಾಯತ್ ಮಾಜಿ ಸದಸ್ಯೆ ಲಲಿತಾ ಈಶ್ವರ್ ಬರೆಪ್ಪಾಡಿ, ಕುದ್ಗಾರು ಶಾಲಾ ಎಸ್‌ಡಿಎಂಸಿ ಉಪಾಧ್ಯಕ್ಷೆನವ್ಯ ಅನ್ಯಾಡಿ ಹಾಗೂ ಸದಸ್ಯರು, ಬೆಳಂದೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಪ್ರವೀಣ್ ಕೆರೆನಾರು, ತಾರಾ ಅನ್ಯಾಡಿ, ಸವಣೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯ ಸತೀಶ್ ಬಲ್ಯಾಯ ಕನ್ನಡಕುಮೇರು ಸೇರಿದಂತೆ ನೂರಾರು ಮಂದಿ ಭಾಗವಹಿಸಿದರು.
ಆರೋಗ್ಯ ತಪಾಸಣೆಯಲ್ಲಿ ಸಾಮಾನ್ಯ ರೋಗ ವಿಭಾಗ, ಬಿ.ಪಿ. ಹಾಗೂ ಮಧುಮೇಹ ತಪಾಸಣೆ, ಎಲುಬು ಮತ್ತು ಕೀಲುರೋಗ ವಿಭಾಗ, ಕಿವಿ, ಮೂಗು ಮತ್ತು ಗಂಟಲು ವಿಭಾಗ, ಹೃದಯ ರೋಗ ವಿಭಾಗ, ಕ್ಯಾನ್ಸರ್ ರೋಗ ತಪಾಸಣೆ ವಿಭಾಗ, ಸ್ತ್ರೀರೋಗ ವಿಭಾಗ, ಮಕ್ಕಳ ವಿಭಾಗ, ವೈದ್ಯರು ಸೂಚಿಸಿದಲ್ಲಿ ಉಚಿತ ಇಸಿಜಿ ತಪಾಸಣೆ, ಲಭ್ಯ ಇರುವ ಔಷಧ ಉಚಿತ ವಿತರಣೆ ಇತ್ಯಾದಿ ಸೌಲಭ್ಯಗಳನ್ನು ಶಿಬಿರದಲ್ಲಿ ಒದಗಿಸಲಾಯಿತು. ಕೆಎಂಸಿ ಆಸ್ಪತ್ರೆಯ ಲಾಯಲ್ಟಿ ಕಾರ್ಡಿನ ನೋಂದಾವಣೆ ನಡೆಯಿತು, ಆರೋಗ್ಯ ತಪಾಸಣೆಗಳ ಜೊತೆಗೆ ಕೆಎಂಸಿ ಆಸ್ಪತ್ರೆಯ ನುರಿತ ತಜ್ಞ ವೈದ್ಯರುಗಳು ಮಾಹಿತಿಯನ್ನು ನೀಡಿದರು.
ಪ್ರಾಥಮಿಕ ಆರೋಗ್ಯ ಕೇಂದ್ರ ಕಾಣಿಯೂರು, ಮಹಿಳಾ ಮಂಡಲ ಕುದ್ಮಾರು, ಕಾಣಿಯೂರು ಸವಣೂರು ರೈತ ಉತ್ಪಾದಕ ಕಂಪನಿ, ಸವಣೂರು ಯುವಕ ಮಂಡಲ ಸವಣೂರು, ಸ್ನೇಹಿತರ ಬಳಗ ಕುದ್ಮಾರು, ದ.ಕ. ಜಿಲ್ಲಾ ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘ, ಝಾನ್ಸಿ ಯುವತಿ ಮಂಡಲ ಕುದ್ಮಾರು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಕಡಬ ತಾಲೂಕು, ಬೆಳಂದೂರು ಗ್ರಾಮ ಪಂಚಾಯತ್, ಸ್ಕಂದಶ್ರೀ ಯುವಕ ಮಂಡಲ ಕುದ್ಮಾರು, ತಿರಂಗ ವಾರಿಯರ್ಸ್ ಕುದ್ಮಾರು, ಪ್ರಗತಿಬಂಧು ಸ್ವಸಹಾಯ ಸಂಘ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕುದ್ಮಾರು ಒಕ್ಕೂಟ, ಶ್ರೀ ಪಂಚಲಿಂಗೇಶ್ವರ ಮಹಿಳಾ ಮಂಡಲ ಬರೆಪ್ಪಾಡಿ ಈ ಸಂಘ ಸಂಸ್ಥೆಗಳು ಸಹಕರಿಸಿದರು.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
EMAIL: sahakaraspandana@gmail.com


