Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಸೌಹಾರ್ದ ಸಹಕಾರ ಕಾಯ್ದೆ ತಿದ್ದುಪಡಿ: ಎರಡು ವಾರದಲ್ಲಿ ಆಕ್ಷೇಪಣೆ ಸಲ್ಲಿಸಲು ಹೈಕೋರ್ಟ್ ಸೂಚನೆ
    News

    ಸೌಹಾರ್ದ ಸಹಕಾರ ಕಾಯ್ದೆ ತಿದ್ದುಪಡಿ: ಎರಡು ವಾರದಲ್ಲಿ ಆಕ್ಷೇಪಣೆ ಸಲ್ಲಿಸಲು ಹೈಕೋರ್ಟ್ ಸೂಚನೆ

    adminBy adminMarch 4, 2026

    ಬೆಂಗಳೂರು: ಸೌಹಾರ್ದ ಸಹಕಾರ ಬ್ಯಾಂಕುಗಳು ತಮ್ಮ ಠೇವಣಿಯ ಶೇ.20ರಷ್ಟು ಮೊತ್ತವನ್ನು ಪ್ರತಿ ಮೂರು ತಿಂಗಳಿಗೊಮ್ಮೆ ಅಪೆಕ್ಸ್ ಅಥವಾ ಡಿಸಿಸಿ ಬ್ಯಾಂಕುಗಳಲ್ಲಿ ಇರಿಸಬೇಕು. ಬ್ಯಾಂಕುಗಳ ಅಧ್ಯಕ್ಷರು, ಪದಾಧಿಕಾರಿಗಳು ಪ್ರತಿವರ್ಷ ತಮ್ಮ ಆಸ್ತಿ ಘೋಷಿಸುವುದು ಸೇರಿದಂತೆ ಹಲವು ಷರತ್ತುಗಳನ್ನು ಒಳಗೊಂಡ ಕರ್ನಾಟಕ ಸೌಹಾರ್ದ ಸಹಕಾರ (ತಿದ್ದುಪಡಿ) ಕಾಯ್ದೆ-2025ರ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗೆ ಸಂಬಂಧಿಸಿ ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.

    https://chat.whatsapp.com/FCEnlTkAKCC0MGPhXtX4i4

    ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರ ನಿಯಮಿತದ ಅಧ್ಯಕ್ಷ ಜಿ.ನಂಜನಗೌಡ ಹಾಗೂ 12 ಸಹಕಾರ ಸಂಘಗಳು ಸಲ್ಲಿಸಿದ ಈ ಅರ್ಜಿಯನ್ನು ನ್ಯಾಯಮೂರ್ತಿ ಇ.ಎಸ್. ಇಂದಿರೇಶ್ ಅವರಿದ್ದ ಪೀಠ ಮಂಗಳವಾರ ವಿಚಾರಣೆ ನಡೆಸಿದೆ. ಹೊಸ ಕಾಯ್ದೆಯು ಠೇವಣಿಯ ಶೇ.20ರಷ್ಟು ಮೊತ್ತವನ್ನು ಅಪೆಕ್ಸ್ ಅಥವಾ ಡಿಸಿಸಿ ಬ್ಯಾಂಕುಗಳಲ್ಲಿ ಇರಿಸಬೇಕು ಮತ್ತು ಪದಾಧಿಕಾರಿಗಳು ಪ್ರತಿವರ್ಷ ಆಸ್ತಿ ಘೋಷಿಸಬೇಕು ಎಂಬ ಷರತ್ತುಗಳನ್ನು ವಿಧಿಸಿದೆ. ಈ ತಿದ್ದುಪಡಿಗಳು ಸಹಕಾರ ಸಂಘಗಳ ಸ್ವಾಯತ್ತತೆ ಮತ್ತು ಮೂಲಭೂತ ಹಕ್ಕುಗಳಿಗೆ ಧಕ್ಕೆ ತರುತ್ತವೆ ಎಂದು ಅರ್ಜಿದಾರರು ವಾದಿಸಿದ್ದಾರೆ.
    ಅರ್ಜಿ ವಿಚಾರಣೆ ನಡೆಸಿದ ನ್ಯಾಯಪೀಠ, ಆಕ್ಷೇಪಣೆ ಸಲ್ಲಿಸಲು ಸರಕಾರಕ್ಕೆ ಎರಡು ವಾರಗಳ ಕಾಲಾವಕಾಶ ನೀಡಿದ್ದು, ಈ ಅವಧಿಯಲ್ಲಿ ಒಂದೊಮ್ಮೆ ಆಕ್ಷೇಪಣೆ ಸಲ್ಲಿಸದಿದ್ದರೆ, ಕಾಯ್ದೆ ಜಾರಿಗೆ ತಡೆ ನೀಡಬೇಕೆಂಬ ಮಧ್ಯಂತರ ಮನವಿಯನ್ನು ಪರಿಗಣಿಸುವುದಾಗಿ ನ್ಯಾಯಪೀಠ ತಿಳಿಸಿದೆ. ತಿದ್ದುಪಡಿ ಕಾಯ್ದೆಯನ್ನು ಸಂವಿಧಾನಬಾಹಿರ ಎಂದು ಘೋಷಿಸುವಂತೆ ಅರ್ಜಿಯಲ್ಲಿ ಮನವಿ ಮಾಡಲಾಗಿದ್ದು, ವಿಚಾರಣೆಯನ್ನು ಮುಂದೂಡಲಾಗಿದೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    G. Nanjana Gowda Karnataka Highcourt Karnataka Souharda Cooperative (Amendment) Bill
    Previous Articleಸಹಕಾರಿ ಕ್ರೀಡೋತ್ಸವದಲ್ಲಿ ಕ್ಯಾಂಪ್ಕೊ ಕಾವು ತಂಡ ಪಾರಮ್ಯ
    Next Article ನಾಳೆ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನವೀಕೃತ, ವಿಸ್ತರಿತ ಹಾಗೂ ಹವಾನಿಯಂತ್ರಿತ ಬಿ.ಸಿ ರೋಡ್ ಶಾಖೆಯ ಉದ್ಘಾಟನಾ ಸಮಾರಂಭ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.