Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ನಾಳೆ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನವೀಕೃತ, ವಿಸ್ತರಿತ ಹಾಗೂ ಹವಾನಿಯಂತ್ರಿತ ಬಿ.ಸಿ ರೋಡ್ ಶಾಖೆಯ ಉದ್ಘಾಟನಾ ಸಮಾರಂಭ
    News

    ನಾಳೆ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನವೀಕೃತ, ವಿಸ್ತರಿತ ಹಾಗೂ ಹವಾನಿಯಂತ್ರಿತ ಬಿ.ಸಿ ರೋಡ್ ಶಾಖೆಯ ಉದ್ಘಾಟನಾ ಸಮಾರಂಭ

    adminBy adminMarch 5, 2026

    ಮಂಗಳೂರು: ಬಿ.ಸಿ. ರೋಡ್‌ನಲ್ಲಿ 2012ರಿಂದ ಕಾರ್ಯಾಚರಿಸುತ್ತಿರುವ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಬಿ.ಸಿ. ರೋಡ್ ಶಾಖೆಯು ಸಂಘದ ಸದಸ್ಯರ ಅಪೇಕ್ಷೆಯಂತೆ ವಿಸ್ತಾರಗೊಂಡು ಸುಸಜ್ಜಿತವಾದ ಹವಾನಿಯಂತ್ರಿತ ಶಾಖೆಯಾಗಿ ಪರಿವರ್ತಿತಗೊಂಡಿದ್ದು ಮಾರ್ಚ್ 6ರಂದು ಶುಕ್ರವಾರ ಸಂಜೆ 4.35ಕ್ಕೆ ನವೀಕೃತ, ವಿಸ್ತರಿತ ಹಾಗೂ ಹವಾನಿಯಂತ್ರಿತ ಬಿ.ಸಿ ರೋಡ್ ಶಾಖೆ ಲೋಕಾರ್ಪಣೆಗೊಳ್ಳಲಿದೆ. ಕರ್ನಾಟಕ ಸರಕಾರದ ಮಾಜಿ ಸಚಿವರಾದ ಬಿ.ರಮಾನಾಥ ರೈಯವರು ಸ್ಥಳೀಯ ಗಣ್ಯ ಅತಿಥಿಗಳ ಸಮ್ಮುಖದಲ್ಲಿ ಉದ್ಘಾಟಿಸಲಿದ್ದಾರೆ.

    https://chat.whatsapp.com/FCEnlTkAKCC0MGPhXtX4i4
    ಸಹಕಾರ ತತ್ವದ ಮೂಲಕ ಸಾರ್ವಜನಿಕ ಸೇವೆಯ ಸದುದ್ದೇಶದ ಧ್ಯೇಯದೊಂದಿಗೆ ಸಾಕಾರಗೊಳಿಸುವ ಮುಖ್ಯ ಉದ್ದೇಶದೊಂದಿಗೆ ಮಂಗಳೂರು ತಾಲೂಕಿನ ಬೆಂದೂರ್‌ವೆಲ್‌ನಲ್ಲಿ 30-01-2012ರಲ್ಲಿ ಕೇಂದ್ರದ ಮಾಜಿ ವಿತ್ತ ಸಚಿವರಾದ ಬಿ.ಜನಾರ್ದನ ಪೂಜಾರಿಯವರ ಅಮೃತ ಹಸ್ತದಿಂದ ಉದ್ಘಾಟನೆಗೊಂಡು, ದಶಮಾನೋತ್ಸವ ಸಂದರ್ಭದಲ್ಲಿ ಸ್ವಂತ ಆಡಳಿತ ಹಾಗೂ ಪ್ರಧಾನ ಕಚೇರಿಯನ್ನು ಪಡೀಲ್‌ನಲ್ಲಿ ಹೊಂದಿ, ಕಾರ್ಯನಿರ್ವಹಿಸುತ್ತಿರುವ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಉನ್ನತ ಸಾಧನೆಯ ಹಾದಿಯಲ್ಲಿದೆ.
    ಸಂಘದ ದಶಮಾನೋತ್ಸವದ ಸಂದರ್ಭದಲ್ಲಿ ಸುಸಜ್ಜಿತವಾದ ಹವಾನಿಯಂತ್ರಿತ ಸ್ವಂತ ಕಟ್ಟಡವನ್ನು ಹೊಂದಿದ ದಕ್ಷಿಣ ಕನ್ನಡ ಜಿಲ್ಲೆಯ ಏಕಮಾತ್ರ ವಿವಿಧೋದ್ದೇಶ ಸಹಕಾರಿ ಸಂಘವಾಗಿದೆ. ಅಲ್ಪಾವಧಿಯಲ್ಲಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 33 ಶಾಖೆಗಳು ಆರಂಭವಾಗಿ ನುರಿತ ಸಿಬ್ಬಂದಿ ವರ್ಗದ ಅತ್ಯುತ್ತಮ ಗುಣಮಟ್ಟದ ಸೇವೆಗಾಗಿ ಈಗಾಗಲೇ ರಾಜ್ಯ ಹಾಗೂ ರಾಷ್ಟ್ರಮಟ್ಟದ ಹಲವು ಪ್ರಶಸ್ತಿಗಳ ಗರಿಗಳನ್ನು ಮುಡಿಗೇರಿಸಿಕೊಂಡಿದೆ.
    ಆತ್ಮಶಕ್ತಿ ಸಹಕಾರಿ ಸಂಘವು ಮಹಿಳಾ ಸಬಲೀಕರಣದೊಂದಿಗೆ ಶೇ.95 ಮಹಿಳಾ ಸಿಬ್ಬಂದಿಗಳಿಂದ ಗ್ರಾಹಕರಿಗೆ ಅತ್ಯುತ್ತಮ ಸೇವೆಯೊಂದಿಗೆ ನಿರಂತರವಾಗಿ ಲಾಭಗಳಿಸುತ್ತ ಮುಂದುವರಿದಿದೆ. ಮುಂದಿನ ದಿನಗಳಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಮಾತ್ರವಲ್ಲದೇ ಕೊಡಗು, ಚಿಕ್ಕಮಗಳೂರು ಹಾಗೂ ಮೈಸೂರು ಜಿಲ್ಲೆಗಳ ವ್ಯಾಪ್ತಿಗಳಿಗೆ ತನ್ನ ಶಾಖೆಗಳನ್ನು ವಿಸ್ತರಿಸಿ, 50 ಶಾಖೆಗಳನ್ನು ಹೊಂದುವ ಯೋಜನೆಯನ್ನು ಹಮ್ಮಿಕೊಂಡಿದೆ.
    ನವೀಕೃತ ಶಾಖೆಯ ಉದ್ಘಾಟನಾ ಸಮಾರಂಭದ ಪ್ರಯಕ್ತ 100 ದಿನಗಳ ಠೇವಣಿಗಳಿಗೆ ವಿಶೇಷ ಬಡ್ಡಿ ದರ ಶೇ.8.50, 500 ದಿನಗಳ ಠೇವಣಿಗಳಿಗೆ ವಿಶೇಷ ಬಡ್ಡಿ ದರ ಶೇ10.00 ಹಾಗೂ 1000 ದಿನಗಳ ಠೇವಣಿಗಳಿಗೆ ವಿಶೇಷ ಬಡ್ಡಿ ದರ ಶೇ.10.50ವನ್ನು ನೀಡಲಾಗುತ್ತಿದ್ದು, ಚಿನ್ನಾಭರಣ ಸಾಲಗಳಿಗೆ ಪ್ರತಿ ಗ್ರಾಂ ಗೆ ಗರಿಷ್ಟ ಮೌಲ್ಯ ರೂ. 12,000ರವರೆಗೆ ಯಾವುದೇ ಸೇವಾ ಶುಲ್ಕವಿಲ್ಲದೆ ಸಾಲವನ್ನು ಸದಸ್ಯರಿಗೆ ನೀಡಲಾಗುವುದು. ನಮ್ಮ ಎಲ್ಲಾ ಶಾಖೆಗಳಲ್ಲಿ ಇ-ಮುದ್ರಾಂಕ, ನೆಫ್ಟ್, ಆರ್‌ಟಿಜಿಎಸ್ ಸೇವೆಯು ವ್ಯವಹಾರದ ಸಮಯದಲ್ಲಿ ಲಭ್ಯವಿದ್ದು, ಅದೇ ರೀತಿ ವಿಮಾ ಪಾಲಿಸಿಗಳಾದ ಎಲ್‌ಐಸಿ, ಕೇರ್, ಇಫ್ಕೋಟೋಕಿಯ, ಜನರಲ್ ಇನ್ಸುರೆನ್ಸ್ ಕಂಪೆನಿ ಮುಂತಾದ ಕಂಪೆನಿಗಳ ವಿಮಾ ಸೌಲಭ್ಯಗಳು ಲಭ್ಯವಿರುತ್ತದೆ ಎಂದು ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್‌ರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    Atmashakti vividhoddesha sahakara sangha B Ramanath Rai BCRoad Chittaranjan Bolar
    Previous Articleಸೌಹಾರ್ದ ಸಹಕಾರ ಕಾಯ್ದೆ ತಿದ್ದುಪಡಿ: ಎರಡು ವಾರದಲ್ಲಿ ಆಕ್ಷೇಪಣೆ ಸಲ್ಲಿಸಲು ಹೈಕೋರ್ಟ್ ಸೂಚನೆ
    Next Article ಶೇ.22ರ ತೆರಿಗೆ ದರವನ್ನು ಶೇ.18ಕ್ಕೆ ಇಳಿಸಿ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.