Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ
    News

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    adminBy adminMarch 6, 2026

    ದೇಶದಲ್ಲಿ ಅತ್ಯಧಿಕ ಬಜೆಟ್ ಮಂಡಿಸಿದ್ದು ವಜುಬಾಯಿ ವಾಲಾ, 18 ಬಜೆಟ್‌ ಮಂಡಿಸಿದ ದಾಖಲೆ

    ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ರಾಜ್ಯ ಬಜೆಟ್‌ ಮಂಡಿಸಿದ್ದಾರೆ. ತನ್ಮೂಲಕ ಅವರು 17ನೇ ರಾಜ್ಯ ಬಜೆಟ್ ಮಂಡಿಸಿದ್ದು ಮತ್ತೊಂದು ದಾಖಲೆ ಬರೆದಿದ್ದಾರೆ. ಕರ್ನಾಟಕದ ಇತಿಹಾಸದಲ್ಲಿ ಅತಿ ಹೆಚ್ಚು ಬಜೆಟ್ ಮಂಡಿಸಿದ ನಾಯಕ ಎಂದು ಅವರು ಗುರುತಿಸಿಕೊಂಡಿದ್ದಾರೆ.

    https://chat.whatsapp.com/FCEnlTkAKCC0MGPhXtX4i4
    ದೇಶದ ವಿವಿಧ ರಾಜ್ಯಗಳಲ್ಲಿ ಹಣಕಾಸು ಸಚಿವರಾಗಿ ಹಾಗೂ ಮುಖ್ಯಮಂತ್ರಿಗಳಾಗಿ ಅತಿ ಹೆಚ್ಚು ಬಾರಿ ಬಜೆಟ್ ಮಂಡಿಸಿದ ದಾಖಲೆ ಯಾ ಹೆಸರಲ್ಲಿದೆ ಎಂಬ ಕುತೂಹಲ ಸಹಜ. ಈ ಪಟ್ಟಿಯನ್ನು ನೋಡೊದರೆ, ರಾಷ್ಟ್ರಮಟ್ಟದಲ್ಲಿ ಅತಿಹೆಚ್ಚು ಬಜೆಟ್ ಮಂಡಿಸಿದ ಗುಜರಾತ್‌ನ ಮಾಜಿ ಹಣಕಾಸು ಸಚಿವ, ಕರ್ನಾಟಕದ ಮಾಜಿ ರಾಜ್ಯಪಾಲರೂ ಆಗಿದ್ದ ವಜುಭಾಯಿ ವಾಲಾ ಅವರ ಹೆಸರಲ್ಲಿದೆ. ಅವರು 18 ಬಾರಿ ಬಜೆಟ್ ಮಂಡಿಸಿ ಮೊದಲ ಸ್ಥಾನದಲ್ಲಿದ್ದಾರೆ.
    ಕರ್ನಾಟಕದ ಹಾಲಿ ಮುಖ್ಯಮಂತ್ರಿ ಹಾಗೂ ಹಣಕಾಸು ಸಚಿವರೂ ಆಗಿರುವ ಸಿದ್ದರಾಮಯ್ಯ ಒಟ್ಟು 17 ಬಾರಿ ಬಜೆಟ್ ಮಂಡಿಸುವ ಮೂಲಕ ದೇಶದಲ್ಲೇ ಎರಡನೇ ಅತಿ ಹೆಚ್ಚು ಬಜೆಟ್ ಮಂಡಿಸಿದ ನಾಯಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಕರ್ನಾಟಕದ ಮಟ್ಟಿಗೆ ಸಿದ್ದರಾಮಯ್ಯನವರದ್ದೇ ಅತಿ ದೊಡ್ಡ ದಾಖಲೆ. ಆಂಧ್ರಪ್ರದೇಶದ ಮಾಜಿ ಸಿಎಂ ಕೆ.ರೋಸಯ್ಯ 16 ಬಜೆಟ್‌ ಮಂಡಿಸಿದ್ದಾರೆ. ಅವಿಭಜಿತ ಆಂಧ್ರಪ್ರದೇಶದ ರೋಸಯ್ಯ ತಮ್ಮ ಸುದೀರ್ಘ ರಾಜಕೀಯ ಜೀವನದಲ್ಲಿ ರಾಜ್ಯದ ಖಜಾನೆಯನ್ನು ನಿರ್ವಹಿಸುವಲ್ಲಿ ಪರಿಣತಿ ಹೊಂದಿದ್ದು, ಸತತವಾಗಿ ಏಳು ಬಾರಿ ಬಜೆಟ್ ಮಂಡಿಸಿದ ಹೆಗ್ಗಳಿಕೆಯನ್ನೂ ಅವರು ಹೊಂದಿದ್ದಾರೆ. ನಂತರದ ಸ್ಥಾನದಲ್ಲಿರುವ ಅಸ್ಸಾಂನ ಮಾಜಿ ಮುಖ್ಯಮಂತ್ರಿ ತರುಣ್‌ ಗೊಗೋಯ್‌ ತಮ್ಮ ಮೂರು ಅವಧಿಯ ಅವಧಿಯಲ್ಲಿ ಸತತ 15 ಬಜೆಟ್‌ಗಳನ್ನು ಮಂಡಿಸಿದ್ದಾರೆ.
    14 ಬಜೆಟ್‌ ಮಂಡಿಸಿರುವ ತಮಿಳುನಾಡಿನ ವಿ.ಆರ್ ನೆಡುಂಚೆಳಿಯನ್ ತಮಿಳುನಾಡು ಪಾಲಿಗೆ ದಾಖಲೆಯನ್ನು ಹೊಂದಿದ್ದಾರೆ. ಎಂ.ಜಿ ರಾಮಚಂದ್ರನ್ ಮತ್ತು ಜೆ.ಜಯಲಲಿತಾ ನೇತೃತ್ವದ ಸಚಿವ ಸಂಪುಟಗಳಲ್ಲಿ ಅವರು 12 ವರ್ಷ ಕಾಲ ಹಣಕಾಸು ಸಚಿವರಾಗಿದ್ದರು. ಕರ್ನಾಟಕದ ರಾಮಕೃಷ್ಣ ಹೆಗಡೆ 13 ಬಜೆಟ್‌ ಮಂಡಿಸಿದ್ದು, ಕರ್ನಾಟಕದ ಪಾಲಿಗೆ ಎರಡನೇ ಸ್ಥಾನದಲ್ಲಿದ್ದಾರೆ. ಕೇರಳದ ಅನುಭವಿ ರಾಜಕಾರಣಿ ಕೆ.ಎಂ ಮಣಿ ಅವರು ಹಲವು ವರ್ಷಗಳ ಕಾಲ ಯುಡಿಎಫ್ ಸರ್ಕಾರಗಳಲ್ಲಿ ಹಣಕಾಸು ಖಾತೆಯನ್ನು ಹೊಂದಿದ್ದು, 13 ಬಜೆಟ್‌ಗಳನ್ನು ಮಂಡಿಸಿದ್ದಾರೆ.
    ಕರ್ನಾಟಕದ ಪಾಲಿಗೆ ಸಿದ್ದರಾಮಯ್ಯ ಅವರು ಉಪಮುಖ್ಯಮಂತ್ರಿಯಾಗಿ ಏಳು ಬಾರಿ ಬಜೆಟ್ ಮಂಡಿಸಿದ್ದಾರೆ. ಅವರು ಮೂರು ಮುಖ್ಯಮಂತ್ರಿಗಳ ಅಡಿಯಲ್ಲಿ, 1995 ಮತ್ತು 1996ರಲ್ಲಿ ಎಚ್.ಡಿ ದೇವೇಗೌಡರ ನೇತೃತ್ವದಲ್ಲಿ ಎರಡು ಬಾರಿ, 1997, 1998 ಮತ್ತು 1999ರಲ್ಲಿ ಜೆ.ಎಚ್ ಪಟೇಲ್ ಅವರ ನೇತೃತ್ವದಲ್ಲಿ ಮೂರು ಬಾರಿ ಮತ್ತು 2005 ಮತ್ತು 2006ರಲ್ಲಿ ಎನ್.ಧರಂ ಸಿಂಗ್ ಅವರ ನೇತೃತ್ವದಲ್ಲಿ ಹಣಕಾಸು ಸಚಿವರಾಗಿ ಎರಡು ಬಾರಿ ಬಜೆಟ್ ಮಂಡಿಸಿದ್ದಾರೆ. ಉಳಿದದ್ದು ಸಿಎಂ ಆಗಿಯೇ ಬಜೆಟ್‌ ಮಂಡಿಸಿದ್ದಾರೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    Karnataka State Budget Ramkrishna Hegde Siddaramayya Vajubayi Vaala
    Previous Articleಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌
    Next Article 38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026

    ಸುಕೋ ಬ್ಯಾಂಕ್, ಕಿಷ್ಕಿಂಧಾ ವಿಶ್ವವಿದ್ಯಾಲಯ ‘ಜ್ಞಾನ ವಿನಿಮಯ’ ಒಪ್ಪಂದ

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.