ಮಂಗಳೂರು: ನಗರದ ಪಡೀಲ್‌ನಲ್ಲಿ ಸ್ವಂತ ಆಡಳಿತ ಕಟ್ಟಡ ಹೊಂದಿರುವ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ 34ನೇ ನೂತನ ಶಾಖೆ ಮಾರ್ಚ್ 25ರಂದು ನಡೆಯಲಿದ್ದು ಇದರಲ್ಲಿ ಉದ್ಘಾಟನೆಯ ಆಮಂತ್ರಣ ಪತ್ರಿಕೆಯನ್ನು ಮಂಗಳವಾರ ಬಿಡುಗಡೆಗೊಳಿಸಲಾಯಿತು.
https://chat.whatsapp.com/FCEnlTkAKCC0MGPhXtX4i4
ಆತ್ಮಶಕ್ತಿ ಸಹಕಾರ ಸಂಘವು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾದ್ಯಂತ 33 ಶಾಖೆಗಳನ್ನು ಹೊಂದಿದ್ದು, ಇದೀಗ ತನ್ನ ನೂತನ 34ನೇ ಬೋಳಾರ ಶಾಖೆಯನ್ನು ಮಂಗಳೂರಿನ ಬೋಳಾರದ ಜೆಪ್ಪು ಮಾರ್ಕೆಟ್ ನ ಭಗಿನಿ ಸಮಾಜದ ಬಳಿಯಿರುವ “ಯುನಿಕ್ ಸ್ಟಿಕ್” ಕಾಂಪ್ಲೆಕ್ಸ್ ನಲ್ಲಿ ಮಾರ್ಚ್ 25ರಂದು ಬುಧವಾರ ಪೂರ್ವಾಹ್ನ 11 ಗಂಟೆಗೆ ಸಾರ್ವಜನಿಕ ಸೇವೆಗಾಗಿ ಲೋಕಾರ್ಪಣೆಗೊಳಿಸಲಿದೆ. ಆಮಂತ್ರಣ ಬಿಡುಗಡೆ ಕಾರ್ಯಕ್ರಮ ಸಂಘದ ಅಧ್ಯಕ್ಷರಾದ “ಸಹಕಾರ ರತ್ನ” ಚಿತ್ತರಂಜನ್ ಬೋಳಾರ್ ಅಧ್ಯಕ್ಷತೆಯಲ್ಲಿ ಮಂಗಳೂರಿನ ಮಹತೋಭಾರ ಶ್ರೀ ಮಂಗಳಾದೇವಿ ದೇವಸ್ಥಾನದಲ್ಲಿ ಜರುಗಿತು. ಮಹತೋಭಾರ ಶ್ರೀ ಮಂಗಳಾದೇವಿ ದೇವಸ್ಥಾನದ ಅನುವಂಶಿಕ ಆಡಳಿತ ಮೋಕ್ತೆಸರರಾದ ಎಂ. ಅರುಣ್ ಐತಾಳ್ ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನಿರ್ದೇಶಕರಾದ ದಿವಾಕರ್ ಬಿ.ಪಿ, ಉಮಾವತಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್, ಸ್ಥಳೀಯ ಮಂಗಳೂರು ನಗರ ಪಾಲಿಕೆಯ ನಿಕಟಪೂರ್ವ ಸದಸ್ಯರಾದ ಭಾನುಮತಿ, ಬಿಲ್ಲವ ಸಂಘ ಮಂಗಳಾದೇವಿಯ ಗೌರವ ಅಧ್ಯಕ್ಷರಾದ ಸದಾನಂದ ಸಾಲಿಯಾನ್, ಅಧ್ಯಕ್ಷರಾದ ರಾಜರತ್ನ ಸನಿಲ್, ಉಪಾಧ್ಯಕ್ಷರಾದ ದಿನೇಶ್, ಕಾರ್ಯದರ್ಶಿ ರಮಾನಂದ ಪೂಜಾರಿ, ಸಂಚಾಲಕರಾದ ಉದಯ ಕುಮಾರ್, ಲಲಿತಾ ಬಿ., ನೂತನ ಶಾಖೆಯ ಸಲಹಾ ಸಮಿತಿ ಸದಸ್ಯರಾದ ಮೋಹನ್ ರಾಜ್, ಚಂದ್ರಹಾಸ್ ಸುವರ್ಣ, ಆನಂದ, ಮೋಹನ್ ಕುಮಾರ್, ಅರುಣ್ ಕುಮಾರ್ ಸುವರ್ಣ ಮತ್ತಿತರರು ಉಪಸ್ಥಿತರಿದ್ದರು.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
EMAIL: sahakaraspandana@gmail.com



