ಮಂಗಳೂರು: ನಗರದ ಪಡೀಲ್‌ನಲ್ಲಿ ಸ್ವಂತ ಆಡಳಿತ ಕಟ್ಟಡ ಹೊಂದಿರುವ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ 34ನೇ ನೂತನ ಬೋಳಾರ ಶಾಖೆಯು ಮಾರ್ಚ್ 25ರಂದು ಉದ್ಘಾಟನೆಗೊಳ್ಳಲಿದೆ. ಆತ್ಮಶಕ್ತಿ ಸಹಕಾರಿ ಸಂಘವು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾದ್ಯಂತ 33 ಶಾಖೆಗಳನ್ನು ಹೊಂದಿದ್ದು, ತನ್ನ ನೂತನ 34ನೇ ಬೋಳಾರ ಶಾಖೆಯನ್ನು ಯುನಿಕ್ ಸ್ಟಿಕ್ ಕಾಂಪ್ಲೆಕ್ಸ್ ಭಗಿನಿ ಸಮಾಜದ ಬಳಿ ಜೆಪ್ಪು ಮಾರ್ಕೆಟ್, ಬೋಳಾರ, ಮಂಗಳೂರು, ಇಲ್ಲಿ ಮಾರ್ಚ್ 25ರಂದು ಬುಧವಾರ ಪೂರ್ವಾಹ್ನ 11 ಗಂಟೆಗೆ ಸಾರ್ವಜನಿಕ ಸೇವೆಗಾಗಿ ಲೋಕಾರ್ಪಣೆಗೊಳ್ಳಲಿದೆ.
https://chat.whatsapp.com/FCEnlTkAKCC0MGPhXtX4i4
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ “ಸಹಕಾರ ರತ್ನ” ಚಿತ್ತರಂಜನ್ ಬೋಳಾರ್ ವಹಿಸಲಿದ್ದಾರೆ. ಮಾಜಿ ಸಚಿವರಾದ ಕೃಷ್ಣ ಜೆ. ಪಾಲೆಮಾರ್ ನೂತನ ಶಾಖೆಯ ಉದ್ಘಾಟನೆ ನೆರವೇರಿಸಲಿದ್ದಾರೆ. ಸಮಾಜ ಸೇವಕಿ ತಾರಾ ಹೇಮಚಂದ್ರ ದೀಪ ಪ್ರಜ್ವಲನೆ ಮಾಡಲಿದ್ದಾರೆ. ಅಂಬಾ ಮಹೇಶ್ವರಿ ಸೇವಾ ಟ್ರಸ್ಟ್ ಅಧ್ಯಕ್ಷರಾದ ಸೀತಾರಾಮ್ ಎ. ಭದ್ರತಾಕೋಶ ಉದ್ಘಾಟನೆ ಮಾಡಲಿದ್ದಾರೆ. ಮೈಸೂರು ಪ್ರಾಂತದ ಸಹಕಾರ ಸಂಘಗಳ ಜಂಟಿ ನಿಬಂಧಕರಾದ ಸಿ. ಪ್ರಸಾದ್ ರೆಡ್ಡಿ ಗಣಕೀಕೃತ ಬ್ಯಾಂಕಿಂಗ್ ಗೆ ಚಾಲನೆ ನೀಡಲಿದ್ದಾರೆ. ಮಂಗಳೂರು ಮಹಾನಗರ ಪಾಲಿಕೆ ಮಾಜಿ ಮಹಾಪೌರರಾದ ಪ್ರೇಮಾನಂದ ಶೆಟ್ಟಿ ನಿರಖು ಠೇವಣಿ ಪತ್ರ ಬಿಡುಗಡೆ ಮಾಡಲಿದ್ದಾರೆ. ಮಂಗಳೂರು ಕೋ-ಆಪರೇಟಿವ್ ಬಿಲ್ಡಿಂಗ್ ಸೊಸೈಟಿಯ ಅಧ್ಯಕ್ಷರಾದ ರಂಜನ್ ಮಿಜಾರ್ ಮೈಕ್ರೋ ಸಾಲ ಯೋಜನೆಗೆ ಚಾಲನೆ ನೀಡಲಿದ್ದಾರೆ. ಮಂಗಳಾದೇವಿ ಸೇವಾ ಸಮಿತಿಯ ಗೌರವಾಧ್ಯಕ್ಷರಾದ ಅಶೋಕ್ ಕುಮಾರ್ ಇ-ಮುದ್ರಾಂಕ ಸೇವೆಗೆ ಚಾಲನೆ ನೀಡಲಿದ್ದಾರೆ. ದ.ಕ ಜಿಲ್ಲಾ ಅಮೆಚೂರು ಕುಸ್ತಿ ಫೆಡರೇಷನ್‌ನ ಅಧ್ಯಕ್ಷರಾದ ದಿಲ್‌ರಾಜ್ ಆಳ್ವ ಭವಿಷ್ಯ ಸುರಕ್ಷಾ ಯೋಜನೆಗೆ ಚಾಲನೆ ನೀಡಲಿದ್ದಾರೆ. ಬಿಲ್ಲವ ಸಂಘ ಮಂಗಳಾದೇವಿಯ ಅಧ್ಯಕ್ಷರಾದ ರಾಜರತ್ನ ಸನಿಲ್ ಉಳಿತಾಯ ಖಾತೆಗೆ ಚಾಲನೆ ನೀಡಲಿದ್ದಾರೆ. ದ.ಕ ಜಿಲ್ಲೆಯ ಸಹಕಾರ ಸಂಘಗಳ ಉಪನಿಬಂಧಕರಾದ ರಮೇಶ್ ಎಚ್.ಎನ್ ಆವರ್ತನ ಠೇವಣಿಗೆ ಚಾಲನೆ ನೀಡಲಿದ್ದಾರೆ. ಮಂಗಳೂರು ಮಹಾನಗರ ಪಾಲಿಕೆಯ ನಿಕಟಪೂರ್ವ ಸದಸ್ಯರಾದ ಭಾನುಮತಿ ಪಿಗ್ಮಿ ಖಾತೆಗೆ ಚಾಲನೆ ನೀಡಲಿದ್ದಾರೆ. ಬೋಳಾರದ ಉದ್ಯಮಿ ರಮಾನಂದ ಪೂಜಾರಿ ಹಾಗೂ ಕಟ್ಟಡದ ಮಾಲಿಕರಾದ ಜೆನೆಟ್ ಮೆಲ್ವಿನ್ ಡಿಸೋಜ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ನೂತನ ಶಾಖೆಯ ಉದ್ಘಾಟನಾ ಸಮಾರಂಭದ ಪ್ರಯಕ್ತ 100 ದಿನಗಳ ಠೇವಣಿಗಳಿಗೆ ವಿಶೇಷ ಬಡ್ಡಿ ದರ ಶೇ.8.50, 500 ದಿನಗಳ ಠೇವಣಿಗಳಿಗೆ ವಿಶೇಷ ಬಡ್ಡಿ ದರ ಶೇ.10.00 ಹಾಗೂ 1000 ದಿನಗಳ ಠೇವಣಿಗಳಿಗೆ ವಿಶೇಷ ಬಡ್ಡಿ ದರ ಶೇ.10.50 ನೀಡಲಾಗುತ್ತಿದ್ದು, ಚಿನ್ನಾಭರಣ ಸಾಲಗಳಿಗೆ ಪ್ರತಿ ಗ್ರಾಂ ಗೆ ಗರಿಷ್ಟ ಮೌಲ್ಯ ರೂ. 12,000- ರವರೆಗೆ ಯಾವುದೇ ಸೇವಾ ಶುಲ್ಕವಿಲ್ಲದೆ ಸಾಲವನ್ನು ಸದಸ್ಯರಿಗೆ ನೀಡಲಾಗುವುದು. ನಮ್ಮ ಎಲ್ಲಾ ಶಾಖೆಗಳಲ್ಲಿ ಇ-ಮುದ್ರಾಂಕ, ನೆಫ್ಟ್, ಆರ್‌ಟಿಜಿಎಸ್ ಸೇವೆಯು ವ್ಯವಹಾರದ ಸಮಯದಲ್ಲಿ ಲಭ್ಯವಿದ್ದು, ಅದೇ ರೀತಿ ವಿಮಾ ಪಾಲಿಸಿಗಳಾದ ಎಲ್‌ಐಸಿ, ಕೇರ್, ಇಫ್ಕೋಟೋಕಿಯ, ಜನರಲ್ ಇನ್ಸುರೆನ್ಸ್ ಕಂಪೆನಿ ಮುಂತಾದ ಕಂಪೆನಿಗಳ ವಿಮಾ ಸೌಲಭ್ಯಗಳು ಲಭ್ಯವಿರುತ್ತದೆ. ಸಹಕಾರಿ ಸಂಘದ ಸದಸ್ಯರಿಗೆ ಯಶಸ್ವಿನಿ ಆರೋಗ್ಯ ವಿಮೆಯ ನೋಂದಣಿಯ ಪ್ರಯೋಜನ ಸಂಘದ ಎಲ್ಲಾ ಶಾಖೆಗಳಲ್ಲಿ ಲಭ್ಯವಿದ್ದು, ಇದರ ಪ್ರಯೋಜನ ಪಡೆಯಬೇಕೆಂದು ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

