Close Menu
    Top News

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳ ಎನ್‌ಪಿಎ 21,769 ಕೋಟಿ ರೂ.ಗೆ ಇಳಿಕೆ

    July 23, 2026

    ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಎನ್‌ಸಿಡಿಸಿ 5.74 ಕೋಟಿ ರೂ. ವಿತರಣೆ

    July 23, 2026

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿ ದಾಖಲೆಯ 483 ಕೋಟಿ ರೂಪಾಯಿ ವ್ಯವಹಾರ
    News

    ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿ ದಾಖಲೆಯ 483 ಕೋಟಿ ರೂಪಾಯಿ ವ್ಯವಹಾರ

    adminBy adminApril 4, 2026

    ಹಳೆಯಂಗಡಿ: ಸದಸ್ಯರ ಪ್ರೋತ್ಸಾಹ, ಗ್ರಾಹಕರ ಸಹಕಾರ, ಆಡಳಿತ ವರ್ಗದವರ ಮಾರ್ಗದರ್ಶನ ಹಾಗೂ ಸಿಬ್ಬಂದಿಗಳ ಕಾರ್ಯಶ್ರಮತೆಯಿಂದಾಗಿ 2025-26ನೇ ಸಾಲಿನಲ್ಲಿ ಪ್ರಿಯದರ್ಶಿನಿ ಕೋ-ಆಪರೇಟಿವ್‌ ಸೊಸೈಟಿ ಲಿ. ಹಳೆಯಂಗಡಿ 483 ಕೋಟಿ ರೂ. ವ್ಯವಹಾರ ನಡೆಸಿದೆ ಎಂದು ಸೊಸೈಟಿ ಅಧ್ಯಕ್ಷ ವಸಂತ್‌ ಬರ್ನಾರ್ಡ್ ತಿಳಿಸಿದ್ದಾರೆ.

    https://chat.whatsapp.com/FCEnlTkAKCC0MGPhXtX4i4

    ಶನಿವಾರ ಪ್ರಿಯದರ್ಶಿನಿ ಕೋ- ಆಪರೇಟಿವ್ ಸೊಸೈಟಿಯ ಕೇಂದ್ರ ಕಚೇರಿಯಲ್ಲಿ ನಡೆದ ಅವಲೋಕನ ಸಭೆಯಲ್ಲಿ ಅವರು ಮಾಹಿತಿ ನೀಡಿದರು.
    ಮಾಜಿ ಸಚಿವರಾದ ಕೆ.ಅಭಯಚಂದ್ರ ಜೈನ್‌ ಅವರ ಮಾರ್ಗದರ್ಶನ ಹಾಗೂ ಸಹಕಾರಿ ಭೀಷ್ಮ ದಿ.ಎಚ್‌. ನಾರಾಯಣ ಸನಿಲ್ ಮತ್ತು ದಿ.ಪಂಜದಗುತ್ತು ಶಾಂತಾರಾಮ ಶೆಟ್ಟಿ ಅವರ ಪ್ರೇರಣಾ ಶಕ್ತಿಯಿಂದ 2021ರಲ್ಲಿ ಪ್ರಾರಂಭವಾದ ಪ್ರಿಯದರ್ಶಿನಿ ಕೋ- ಆಪರೇಟಿವ್ ಸೊಸೈಟಿಯು, ವರದಿ ಸಾಲಿನಲ್ಲಿ 483 ಕೋಟಿ ರೂ. ವ್ಯವಹಾರ ದಾಖಲಿಸಿದೆ. ಕಳೆದ ಸಾಲಿನ ವ್ಯವಹಾರವನ್ನು ತುಲನೆ ಮಾಡಿದರೇ ಶೇ.72.86 ಏರಿಕೆ ದಾಖಲಿಸಿದೆ. ಪ್ರಸ್ತುತ 38.32 ಕೋಟಿ ರೂ. ಠೇವಣಿ, 32.48 ಕೋಟಿ ರೂ. ಸಾಲ ಮತ್ತು ಮುಂಗಡಗಳೊಂದಿಗೆ, ರೂ.76.57 ಲಕ್ಷ ಪಾಲು ಬಂಡವಾಳ, ರೂ.90.50 ಲಕ್ಷ ನಿಧಿಗಳು, ರೂ.40 ಕೋಟಿ ದುಡಿಯುವ ಬಂಡವಾಳ ಹೊಂದಿದೆ ಎಂದರು. ಸಂಸ್ಥೆಯು 2025-26ನೇ ಸಾಲಿನಲ್ಲಿ ಉತ್ತಮ ಲಾಭಾಂಶ ಗಳಿಸಿದ್ದು, ಸದಸ್ಯರಿಗೆ ಉತ್ತಮ ರೀತಿಯ ಪಾಲು ಮುನಾಫೆಯನ್ನು ಹಂಚುವ ಗುರಿ ಹೊಂದಿದೆ ಎಂದು ತಿಳಿಸಿದರು.
    ಹಳೆಯಂಗಡಿ, ಪಡುಬಿದ್ರೆ, ಕಿನ್ನಿಗೋಳಿ ಮತ್ತು ಮೂಡುಬಿದಿರೆಯಲ್ಲಿ ಒಟ್ಟು ನಾಲ್ಕು ಶಾಖೆಗಳನ್ನು ಹೊಂದಿರುವ ಸೊಸೈಟಿಯು ವರದಿ ವರ್ಷದಲ್ಲಿ ಕೂಡ ಹೊಸ ಶಾಖೆ ಒಂದನ್ನು ತೆರೆಯುವ ಗುರಿ ಇಟ್ಟುಕೊಂಡಿದೆ ಎಂದು ತಿಳಿಸಿದರು.
    ಅವಲೋಕನ ಸಭೆಯಲ್ಲಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುದರ್ಶನ, ಲೆಕ್ಕಿಗರಾದ ಲೋಲಾಕ್ಷಿ ಮೊದಲಾದವರು ಉಪಸ್ಥಿತರಿದ್ದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    Co Operative ministry Cooperative Cooperative Registrar Priyadarshini Co Operative Society Haleyangadi Vasanth Bernad
    Previous Articleಶ್ರೀಶಾ ಸೌಹಾರ್ದ ಸೊಸೈಟಿ 2.16 ಕೋಟಿ ರೂ. ನಿವ್ವಳ ಲಾಭ
    Next Article ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘ ರೂ. 3.50 ಕೋಟಿಗೂ ಮಿಕ್ಕಿ ಲಾಭ

    Related Posts

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳ ಎನ್‌ಪಿಎ 21,769 ಕೋಟಿ ರೂ.ಗೆ ಇಳಿಕೆ

    July 23, 2026

    ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಎನ್‌ಸಿಡಿಸಿ 5.74 ಕೋಟಿ ರೂ. ವಿತರಣೆ

    July 23, 2026

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳ ಎನ್‌ಪಿಎ 21,769 ಕೋಟಿ ರೂ.ಗೆ ಇಳಿಕೆ

    July 23, 2026

    ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಎನ್‌ಸಿಡಿಸಿ 5.74 ಕೋಟಿ ರೂ. ವಿತರಣೆ

    July 23, 2026

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.