Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘ ರೂ. 3.50 ಕೋಟಿಗೂ ಮಿಕ್ಕಿ ಲಾಭ
    News

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘ ರೂ. 3.50 ಕೋಟಿಗೂ ಮಿಕ್ಕಿ ಲಾಭ

    adminBy adminApril 4, 2026

    ಮಂಗಳೂರು: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ 34 ಶಾಖೆಗಳೊಂದಿಗೆ ಕಾರ್ಯನಿರ್ವಹಿಸುತ್ತಿರುವ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು 2025-26ನೇ ಸಾಲಿನಲ್ಲಿ ರೂ. 3.50 ಕೋಟಿಗೂ ಮಿಕ್ಕಿ ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ತಿಳಿಸಿದ್ದಾರೆ.

    https://chat.whatsapp.com/FCEnlTkAKCC0MGPhXtX4i4

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ತನ್ನ ಸದಸ್ಯರಿಗೆ ಉತ್ತಮ ಸೇವೆ ನೀಡುವ ಮೂಲಕ ಉನ್ನತ ಸಾಧನೆಯ ಹಾದಿಯಲ್ಲಿ ಮುನ್ನಡೆಯುತ್ತಿದೆ. ಸಂಘವು ತನ್ನ ಸ್ವಂತ ಆಡಳಿತ ಹಾಗೂ ಪ್ರಧಾನ ಕಚೇರಿಯನ್ನು ನಗರದ ಅಳಪೆ ಗ್ರಾಮದ ಪಡೀಲ್‌ನಲ್ಲಿ ತೆರೆದು ಹವಾನಿಯಂತ್ರಿತ ಅತ್ಯಾಧುನಿಕ ಸೇವಾ ಸೌಲಭ್ಯಗಳೊಂದಿಗೆ ಕಾರ್ಯಾಚರಿಸುತ್ತಿದೆ. 2012ರಲ್ಲಿ 1200 ಸದಸ್ಯರ ಪಾಲು ಬಂಡವಾಳದೊಂದಿಗೆ ಸ್ಥಾಪನೆಯಾದ ಸಂಸ್ಥೆಯು ಇಂದು 9079 ಸದಸ್ಯರನ್ನೊಳಗೊಂಡು, ರೂ 1.80 ಕೋಟಿಗೂ ಮಿಕ್ಕಿ ಪಾಲು ಬಂಡವಾಳ ಹೊಂದಿದೆ. ರೂ.22 ಲಕ್ಷ ಠೇವಣಿಯೊಂದಿಗೆ ಆರಂಭಗೊಂಡ ಸಂಘವು 2025-26ನೇ ಸಾಲಿನಲ್ಲಿ ರೂ. 305೩ ಕೋಟಿಗೂ ಮಿಕ್ಕಿ ಠೇವಣಾತಿ ಹೊಂದಿದೆ. ಸಂಘವು 2025-26ನೇ ಸಾಲಿನಲ್ಲಿ ರೂ. 278 ಕೋಟಿಗೂ ಮಿಕ್ಕಿ ಹೊರಬಾಕಿ ಸಾಲ ಹೊಂದಿದೆ. ಸಂಘವು ಪ್ರತಿವರ್ಷವೂ ಶಾಸನಬದ್ಧ ಲೆಕ್ಕಪರಿಶೋಧನೆಯಲ್ಲಿ ‘ಎ’ ಶ್ರೇಣಿ ಕಾಯ್ದುಕೊಂಡಿದೆ.
    ಕೇವಲ ಮೂರು ಮಂದಿ ಸಿಬ್ಬಂದಿಗಳೊಂದಿಗೆ ಆರಂಭಗೊಂಡ ಸಂಘವು ಇಂದು ಮಹಿಳಾ ಸಬಲೀಕರಣದ ಧ್ಯೇಯದೊಂದಿಗೆ ಶೇ.95ರಷ್ಟು ಮಹಿಳಾ ಸಿಬ್ಬಂದಿಗಳಿಗೆ ಉದ್ಯೋಗಾವಕಾಶವನ್ನು ಕಲ್ಪಿಸಿದೆ. ದಕ್ಷ ಆಡಳಿತ ಮಂಡಳಿ, ಬದ್ದತೆಯಿಂದ ಕೂಡಿದ ಸಿಬ್ಬಂದಿ ವರ್ಗ, ನೆಚ್ಚಿನ ಸದಸ್ಯ ಬಂಧುಗಳ ಸಹಕಾರದಿಂದ ನಾವು ಉತ್ತಮ ಪ್ರಗತಿ ಸಾಧಿಸಲು ಸಾಧ್ಯವಾಗಿದೆ ಎಂದರು.

    ಸಂಘವು ಅಖಿಲ ಭಾರತ ಸಹಕಾರ ಸಪ್ತಾಹದಲ್ಲಿ 8 ಬಾರಿ ಉತ್ತಮ ವಿವಿಧೋದ್ದೇಶ ಸಹಕಾರಿ ಸಂಘ “ರಾಜ್ಯ ಪ್ರಶಸ್ತಿ”ಯನ್ನು ತನ್ನದಾಗಿಸಿಕೊಂಡಿದೆ. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಪ್ರಾರಂಭದಿಂದಲೂ ರಾಜ್ಯದಲ್ಲೇ ಅತೀ ಹೆಚ್ಚು ಇ-ಸ್ಟಾಂಪಿಂಗ್ ವಿತರಣೆ ಮಾಡುವುದರ ಮೂಲಕ ಸತತ 10 ವರ್ಷಗಳಿಂದ “ರಾಜ್ಯ ಮತ್ತು ಜಿಲ್ಲಾ ಪ್ರಶಸ್ತಿ” ತನ್ನದಾಗಿಸಿಕೊಂಡಿದೆ. ಸಂಘವು ವ್ಯವಹಾರದಲ್ಲಿ ಸರ್ವತೋಮುಖ ಪ್ರಗತಿಯನ್ನು ಸಾಧಿಸಿದುದರ ಪ್ರತೀಕವಾಗಿ ಸತತ 10 ವರ್ಷಗಳಿಂದ “ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಪ್ರಶಸ್ತಿ”ಯನ್ನು ತನ್ನದಾಗಿಸಿಕೊಂಡಿದೆ. ಸಂಘವು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಪಾತ್ರವಾದ ಸಂಸ್ಥೆಯೆನ್ನಲು ಹೆಮ್ಮೆಯೆನಿಸುತ್ತದೆ.
    ರಾಜ್ಯದಲ್ಲೇ ಪ್ರಥಮ ಬಾರಿಗೆ ಎನ್ನುವಂತೆ ಸಂಘವು ಪ್ರಾದೇಶಿಕ ಸಹಕಾರ ನಿರ್ವಹಣಾ ಸಂಸ್ಥೆ ಬೆಂಗಳೂರು ಇವರಿಂದ ನಡೆಸಲ್ಪಡುವ 26 ವಾರಗಳ ಹೆಚ್.ಡಿ.ಸಿ.ಎಮ್ ದೂರ ಶಿಕ್ಷಣ ತರಬೇತಿ ತರಗತಿಯನ್ನು ಸಂಘದ ಪ್ರಧಾನ ಕಚೇರಿಯಲ್ಲಿ ವ್ಯವಸ್ಥೆಗೊಳಿಸಿದೆ. ಸಹಕಾರ ಸಂಘಗಳಲ್ಲಿ ಉದ್ಯೋಗ ಸಂಪಾದಿಸಿಕೊಳ್ಳಲು, ಪದೋನ್ನತಿ ಹೊಂದಲು ಈ ಶಿಕ್ಷಣ ಬಹಳ ಪ್ರಾಮುಖ್ಯವಾಗಿದೆ. ಆತ್ಮಶಕ್ತಿಯು ಈ ಕೋರ್ಸಿನ ಮಂಗಳೂರು ವಿಭಾಗದ ಕೇಂದ್ರವಾಗಿ ಗುರುತಿಸಿಕೊಂಡಿದೆ. ಇದುವರೆಗೆ ವಿವಿಧ ಸಹಕಾರಿ ಸಂಘಗಳಲ್ಲಿ ದುಡಿಯುತ್ತಿರುವ 1000ಕ್ಕೂ ಅಧಿಕ ಸಿಬ್ಬಂದಿಗಳು ಇದರ ಪ್ರಯೋಜನವನ್ನು ಪಡೆದುಕೊಂಡಿದ್ದಾರೆ.
    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ತನ್ನ ಸದಸ್ಯರಿಗೆ ವಿಶೇಷ ಕೊಡುಗೆಯಾಗಿ 1000 ದಿನಗಳ ಠೇವಣಿಗಳಿಗೆ ಶೇ. 10.50ರವರಗೆ ಆಕರ್ಷಕ ಬಡ್ಡಿ ಯೋಜನೆಯನ್ನು ಜಾರಿಗೊಳಿಸಿದೆ. ಜೊತೆಗೆ ಚಿನ್ನಾಭರಣ ಸಾಲಗಳಿಗೆ ಪ್ರತಿ ಗ್ರಾಂ ಗೆ ಗರಿಷ್ಟ ಮೌಲ್ಯ ರೂ. 12,000- ರವರೆಗೆ ಯಾವುದೇ ಸೇವಾ ಶುಲ್ಕವಿಲ್ಲದೆ ಸಾಲ ನೀಡಲಾಗುತ್ತಿದೆ. ಮಕ್ಕಳ ಭವಿಷ್ಯಕ್ಕೆ ಆತ್ಮಶಕ್ತಿ ಭವಿಷ್ಯ ಸುರಕ್ಷಾ ಯೋಜನೆಯಲ್ಲಿ ಸದಸ್ಯರು ರೂ. 1,00,000 18 ವರ್ಷಗಳ ಅವಧಿಗೆ ಠೇವಣಾತಿ ಮಾಡಿದಾಗ ರೂ. 5,00,000 ವನ್ನು ಪಡೆಯಬಹುದು. ಈ ಯೋಜನೆಯಲ್ಲಿ ಗ್ರಾಹಕರು ತಮ್ಮ ಮಕ್ಕಳ ಭವಿಷ್ಯದ ಸುರಕ್ಷತೆಗಾಗಿ ಕನಿಷ್ಟ ರೂ. 25,000 ಹೂಡಿಕೆ ಮಾಡಬಹುದು. ಈ ಯೋಜನೆಯು ಸೀಮಿತ ಅವಧಿಯದ್ದಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಸಂಘದ ಸಮೀಪದ ಶಾಖೆಗಳನ್ನು ಸಂಪರ್ಕಿಸಬಹುದು.
    ಸಂಘವು ಕೇವಲ ಆರ್ಥಿಕ ಚಟುವಟಿಕೆಗಳಿಗಷ್ಟೇ ಸೀಮಿತವಾಗಿರದೆ ತನ್ನ ಕಾರ್ಯಕ್ಷೇತ್ರವನ್ನು ಸಮಾಜಸೇವೆಯಲ್ಲಿ ಕೂಡಾ ವಿಸ್ತಾರಕವಾಗಿಸಿಕೊಂಡಿದೆ . ಮುಖ್ಯವಾಗಿ ಸಾಮುದಾಯಿಕವಾಗಿ ಉಚಿತ ಆರೋಗ್ಯ ತಪಾಸಣಾ, 106ಕ್ಕೂ ಮಿಕ್ಕಿ ಉಚಿತ ವೈದ್ಯಕೀಯ ಆರೋಗ್ಯ ಶಿಬಿರ, 950ಕ್ಕೂ ಮಿಕ್ಕಿ ಕಣ್ಣಿನ ಶಸ್ತ್ರ ಚಿಕಿತ್ಸೆ, 21,000ಕ್ಕೂ ಮಿಕ್ಕಿ ಉಚಿತ ಕನ್ನಡಕ ವಿತರಣೆ, ಉಚಿತ ಔಷದಿ ವಿತರಣೆ, ಉಚಿತ ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್ ವಿತರಣೆ, ಸಂಘದ ಪಿಗ್ಮಿ ಸಂಗ್ರಾಹಕರಿಗೆ ಉಚಿತ ಆರೋಗ್ಯ ವಿಮೆ, ಸಾರ್ವಜನಿಕರ ಉಪಯೋಗಕ್ಕಾಗಿ ಬಸ್ಸು ತಂಗುದಾಣ ನಿರ್ಮಾಣ, ಮನೆ ನಿರ್ಮಾಣ, ಮನೆ ನವೀಕರಣ, ಆರ್ಥಿಕವಾಗಿ ತೀರಾ ಹಿಂದುಳಿದ ಬಡ ವಿದ್ಯಾರ್ಥಿಗಳಿಗೆ, ಪ್ರತಿಭಾವಂತ ಜಿಜ್ಞಾಸುಗಳಿಗೆ ವಿದ್ಯಾರ್ಥಿವೇತನ, ವಿಮಾ ಸೌಲಭ್ಯ, ಶಾಖೆಗಳ ವಾರ್ಷಿಕೋತ್ಸವ ಸಂದರ್ಭದಲ್ಲಿ ಗ್ರಾಹಕರ ಸಭೆಗಳನ್ನು ಆಯೋಜಿಸಲಾಗುತ್ತಿದೆ. ಸಂಘದ ಸಿಬ್ಬಂದಿಗಳಿಗೆ ತರಬೇತಿ ಕಾರ್ಯಗಾರ, ವಾರ್ಷಿಕ ಅಧ್ಯಯನ ಪ್ರವಾಸವನ್ನು ಹಮ್ಮಿಕೊಳ್ಳಲಾಗುತ್ತಿದೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    Atmashakti vividhoddesha sahakara sangha Chittaranjan Bolar Co Operative ministry Cooperative Cooperative Department
    Previous Articleಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿ ದಾಖಲೆಯ 483 ಕೋಟಿ ರೂಪಾಯಿ ವ್ಯವಹಾರ
    Next Article ಸಾರ್ವಜನಿಕರ ಸಹಭಾಗಿತ್ವವೇ ಸ್ವಚ್ಛತಾ ಜಾಗೃತಿಗೆ ಪ್ರೇರಣೆ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.