Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಸಾರ್ವಜನಿಕರ ಸಹಭಾಗಿತ್ವವೇ ಸ್ವಚ್ಛತಾ ಜಾಗೃತಿಗೆ ಪ್ರೇರಣೆ
    News

    ಸಾರ್ವಜನಿಕರ ಸಹಭಾಗಿತ್ವವೇ ಸ್ವಚ್ಛತಾ ಜಾಗೃತಿಗೆ ಪ್ರೇರಣೆ

    adminBy adminApril 7, 2026

    ವಿಶ್ವಕರ್ಮ ಸಹಕಾರ ಬ್ಯಾಂಕ್‌ ಉಪಾಧ್ಯಕ್ಷ ಜಗದೀಶ್ ಪಡುಪಣಂಬೂರು ಅಭಿಪ್ರಾಯ

    ಉಡುಪಿ: ಸ್ವಚ್ಛ ಹಾಗೂ ಅರೋಗ್ಯಕರ ಪರಿಸರ ನಿರ್ಮಿಸುವ ನಿಟ್ಟಿನಲ್ಲಿ ಸ್ವಚ್ಛತೆಯ ಅರಿವು ಮತ್ತು ಜಾಗೃತಿ ಮೂಡಿಸುವ ಉದ್ದೇಶದಿಂದ ವಿಶ್ವಕರ್ಮ ಬ್ಯಾಂಕ್ ನಿರಂತರವಾಗಿ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮಗಳನ್ನು ನಡೆಸುತ್ತಿರುವುದಕ್ಕೆ ಮುಖ್ಯ ಪ್ರೇರಣೆ ಎಂದರೆ ಸಾರ್ವಜನಿಕರು ಹಾಗೂ ಸಂಘ ಸಂಸ್ಥೆಗಳಿಂದ ನಮಗೆ ದೊರೆತ ಉತ್ತಮ ಸ್ಪಂದನೆ ಕಾರಣ. ಈ ಜನಸ್ಪಂದನೆಯು ಇಂತಹ ಇನ್ನಷ್ಟು ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಮಾಡಿದೆ ಎಂದು ವಿಶ್ವಕರ್ಮ ಸಹಕಾರ ಬ್ಯಾಂಕಿನ ಉಪಾಧ್ಯಕ್ಷ ಜಗದೀಶ್ ಪಡುಪಣಂಬೂರು ಹೇಳಿದರು.

    https://chat.whatsapp.com/FCEnlTkAKCC0MGPhXtX4i4
    ವಿಶ್ವಕರ್ಮ ಸಹಕಾರ ಬ್ಯಾಂಕಿನ ಉಡುಪಿ ಶಾಖೆಯ ವತಿಯಿಂದ “ಸ್ವಚ್ಛತಾ ಹೀ ಸೇವಾ” ಎಂಬ ಧ್ಯೇಯದೊಂದಿಗೆ ಉಡುಪಿಯಲ್ಲಿ ನಡೆದ 37ನೇ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
    ತೆಂಕನಿಡಿಯೂರು ವಿಷ್ಣುಮೂರ್ತಿ ದೇವಸ್ಥಾನ ಬ್ರಹ್ಮಕಲಶ ಸಮಿತಿಯ ಅಧ್ಯಕ್ಷ ದಯಾನಂದ ಆಚಾರ್ಯ ಹಾಗೂ ಗೆಳೆಯರ ಬಳಗ, ವಿಷ್ಣುನಗರ ಅಧ್ಯಕ್ಷ ಚರಣ್ ರಾಜ್ ಹಸಿರು ನಿಶಾನೆ ತೋರಿಸಿ ಶ್ರಮದಾನಕ್ಕೆ ಚಾಲನೆ ನೀಡಿದರು. ಉಡುಪಿಯ ಕೆಳಾರ್ಕಳಬೆಟ್ಟು, ತೆಂಕನಿಡಿಯೂರು ಪರಿಸರಗಳಲ್ಲಿ ಸ್ವಚ್ಛತಾ ಶ್ರಮದಾನ ನಡೆಯಿತು.


    ವಿಶ್ವಕರ್ಮ ಬ್ಯಾಂಕಿನ ನಿರ್ದೇಶಕ ಜಗದೀಶ್ ಆಚಾರ್ಯ ಕಪ್ಪೆಟ್ಟು, ಹಿಂದೂ ಹಿತರಕ್ಷಣಾ ಸಮಿತಿ, ತೆಂಕನಿಡಿಯೂರು ಇದರ ಸದಸ್ಯರು, ಶ್ರೀ ಆನೆಗುಂದಿ ಗುರುಸೇವಾ ಪರಿಷತ್‌, ತೆಂಕನಿಡಿಯೂರು ಮಂಡಲದ ಸದಸ್ಯರು, ಗೆಳೆಯರ ಬಳಗ ವಿಷ್ಣುಮೂರ್ತಿ ನಗರ ಇದರ ಸದಸ್ಯರು, ಶ್ರೀ ವೀರಮಾರುತಿ ವ್ಯಾಯಾಮ ಶಾಲೆ ವಿಷ್ಣುಮೂರ್ತಿ ನಗರ ಇದರ ಸದಸ್ಯರು, ಶ್ರೀ ದೇವಿ ಭೂದೇವಿ ಮಹಿಳಾ ಮಂಡಳಿ ತೆಂಕನಿಡಿಯೂರು ಇದರ ಸದಸ್ಯರು, ಇಲೆವೆನ್ ಸ್ಟಾರ್ ಕ್ರಿಕೆಟರ್ಸ್ ಇದರ ಸದಸ್ಯರು, ವಿಶ್ವಕರ್ಮ ಸಹಕಾರ ಬ್ಯಾಂಕಿನ ಉಡುಪಿ ಶಾಖೆಯ ಶಾಖಾಧಿಕಾರಿ ಸುದೇಶ್ ಹಾಗೂ ಸಿಬ್ಬಂದಿಗಳು, ಬ್ಯಾಂಕಿನ ಸದಸ್ಯರು, ಗ್ರಾಹಕರು, ಹೆತೈಷಿಗಳು ಹಾಗೂ ಸ್ಥಳೀಯರು ಸ್ವಯಂ ಸೇವಕರಾಗಿ ಶ್ರಮದಾನದಲ್ಲಿ ಕೈ ಜೋಡಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    Kelarkalabettu Swaccha Bharath Swacchatha Hi Seva Tenkanidiyuru Vishwakarma Sahakara Bank Limited
    Previous Articleಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘ ರೂ. 3.50 ಕೋಟಿಗೂ ಮಿಕ್ಕಿ ಲಾಭ
    Next Article ಶ್ರೀ ಭಗವತಿ ಸಹಕಾರ ಬ್ಯಾಂಕ್‌ ದಾಖಲೆಯ ಲಾಭ ಗಳಿಕೆ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.