Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಶ್ರೀ ಭಗವತಿ ಸಹಕಾರ ಬ್ಯಾಂಕ್ ದಾಖಲೆಯ ಲಾಭ ಗಳಿಕೆ
    News

    ಶ್ರೀ ಭಗವತಿ ಸಹಕಾರ ಬ್ಯಾಂಕ್ ದಾಖಲೆಯ ಲಾಭ ಗಳಿಕೆ

    adminBy adminApril 7, 2026

    ಮಂಗಳೂರು: ಶ್ರೀ ಭಗವತಿ ಸಹಕಾರ ಬ್ಯಾಂಕ್‌ ಕಳೆದ ಆರ್ಥಿಕ ವರ್ಷದಲ್ಲಿ (2025-26) ಅತ್ಯುತ್ತಮ ವ್ಯವಹಾರ ದಾಖಲಿಸಿದ್ದು, ಬ್ಯಾಂಕಿನ ಚರಿತ್ರೆಯಲ್ಲೇ ಅತ್ಯಧಿಕ ಲಾಭ 1,35,92,000 ರೂ. ಗಳಿಸಿದೆ. ಇದು ಹಿಂದಿನ ವರ್ಷಕ್ಕಿಂತ ಶೇ.85ರಷ್ಟು ಹೆಚ್ಚಾಗಿದೆ.

    https://chat.whatsapp.com/FCEnlTkAKCC0MGPhXtX4i4

    ಶ್ರೀ ಭಗವತಿ ಸಹಕಾರ ಬ್ಯಾಂಕ್‌ ಮಂಗಳೂರು, ತೊಕ್ಕೊಟ್ಟು, ಬಿ.ಸಿ.ರೋಡ್, ಕೈಕಂಬ, ವಿಟ್ಲ ಮತ್ತು ಪುತ್ತೂರುಗಳಲ್ಲಿ ಎಂಟು ಶಾಖೆಗಳನ್ನು ಹೊಂದಿದ್ದು, ಜಪ್ಪು ಮೋರ್ಗನ್ಸ್‌ ಗೇಟ್‌ನಲ್ಲಿ ಪ್ರಧಾನ ಕಚೇರಿ ಹೊಂದಿದೆ. ಬ್ಯಾಂಕಿನ ಕಳೆದ ಆರ್ಥಿಕ ವರ್ಷದಲ್ಲಿ ಒಟ್ಟು ಠೇವಣಿ 12,536.95 ಲಕ್ಷ ರೂ. ಆಗಿದ್ದು, ಹೊರಬಾಕಿ ಸಾಲ 10,545.87 ಲಕ್ಷ ರೂ. ಆಗಿರುತ್ತದೆ. ಒಟ್ಟು ವ್ಯವಹಾರವು 23,082.82 ಲಕ್ಷ ರೂ. ಆಗಿದೆ. ಬ್ಯಾಂಕಿನಲ್ಲಿ ಒಟ್ಟು 22,317 ಸದಸ್ಯರಿದ್ದು ಪಾಲು ಬಂಡವಾಳ ರೂ. 472.89 ಲಕ್ಷ ರೂ. ಇದ್ದು, 2,934.72 ಲಕ್ಷ ರೂ.ನಿಧಿಗಳಾಗಿ ಹಾಗೂ 13,589.16 ಲಕ್ಷ ರೂ. ದುಡಿಯುವ ಬಂಡವಾಳ ಹೊಂದಿರುತ್ತದೆ. ಬ್ಯಾಂಕಿನಲ್ಲಿ ಒಟ್ಟು 39 ಮಂದಿ ನೌಕರರಿದ್ದು, 12 ಮಂದಿ ಆಡಳಿತ ನಿರ್ದೇಶಕರು, 4 ಮಂದಿ ವ್ಯವಸ್ಥಾಪನಾ ಸಮಿತಿ ಸದಸ್ಯರುಗಳು, 10 ನಿತ್ಯನಿಧಿ ಏಜೆಂಟರು, 8 ಶರಾಪರು, 7 ಕಾನೂನು ತಜ್ಞರು, ಇಬ್ಬರು ಮೌಲ್ಯಮಾಪಕರು ಇದ್ದು ಬ್ಯಾಂಕಿನ ಬೆಳವಣಿಗೆಗೆ ಸಹಕರಿಸಿರುತ್ತಾರೆ.
    ಬ್ಯಾಂಕ್‌ನ ಮಹಾಸಭೆಯ ಸಂದರ್ಭ, ಬ್ಯಾಂಕಿನ ಉತ್ತಮ ಗ್ರಾಹಕರನ್ನು ಸಮ್ಮಾನಿಸಲಾಗುತ್ತದೆ. ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿವೇತನ ನೀಡಲಾಗುತ್ತದೆ. ಉತ್ತಮ ಸಾಧನೆ ಮಾಡಿರುವ ಸಾಧಕರನ್ನು ಗೌರವಿಸಲಾಗುತ್ತದೆ ಹಾಗೂ ಬ್ಯಾಂಕ್‌ನ ಸರ್ವತೋಮುಖ ಅಭಿವೃದ್ಧಿಯನ್ನು ಮಾಡಿರುವ ಶಾಖೆಗಳನ್ನು ಸಮ್ಮಾನಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ.
    ಬ್ಯಾಂಕಿನ ಪ್ರಧಾನ ವ್ಯವಸ್ಥಾಪಕರಾದ ಶ್ರೀಮತಿ ಸುಷ್ಮಾ ಇವರು ಕಾರ್ಯನಿರ್ವಹಿಸುತ್ತಿದ್ದಾರೆ. ಬ್ಯಾಂಕ್‌ನ ಈ ಅಭಿವೃದ್ಧಿಗೆ ಕಾರಣಕರ್ತರಾದ ಬ್ಯಾಂಕ್ ನ ಎಲ್ಲ ಸಿಬ್ಬಂದಿ, ಶಾಖಾಧಿಕಾರಿಗಳು, ಪ್ರಧಾನ ವ್ಯವಸ್ಥಾಪಕರು, ಆಡಳಿತ ಮಂಡಳಿಯ ಎಲ್ಲ ನಿರ್ದೇಶಕರು, ಬ್ಯಾಂಕ್‌ನ ವ್ಯವಸ್ಥಾಪನಾ ಸಮಿತಿ ಸದಸ್ಯರು ಮತ್ತು ಬ್ಯಾಂಕ್‌ನ ಸದಸ್ಯರನ್ನು ಬ್ಯಾಂಕ್‌ನ ಅಧ್ಯಕ್ಷ ಬಿ.ಎಂ. ಮಾಧವ ಮತ್ತು ಮತ್ತು ಬ್ಯಾಂಕಿನ ಉಪಾಧ್ಯಕ್ಷರಾದ ದೇವದಾಸ್ ಕೊಲ್ಯ ಅವರು ಅಭಿನಂದಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

     

    B.M Madhava Cooperative Cooperative Department Cooperative Registrar Devadas Kolya Shree Bhagavathi Sahakara Bank
    Previous Articleಆತ್ಮಶಕ್ತಿ ಮಾಡೂರು ಶಾಖೆಯಲ್ಲಿ ಉಚಿತ ವೈದ್ಯಕೀಯ, ನೇತ್ರ ತಪಾಸಣಾ, ದಂತ ಚಿಕಿತ್ಸಾ ಶಿಬಿರ
    Next Article ಎಂಸಿಸಿ ಬ್ಯಾಂಕ್ 2025-26ರ ವಿತ್ತೀಯ ವರ್ಷದಲ್ಲಿ ರೂ. 13 ಕೋಟಿ ಲಾಭ ದಾಖಲು

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.