ಮಂಗಳೂರು: ಎಸ್.ಕೆ. ಗೋಲ್ಡ್‌ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಯ ಹವಾನಿಯಂತ್ರಿತವಾಗಿ ನವೀಕೃತಗೊಂಡ ಬೆಳ್ಳಂಪಳ್ಳಿ ಶಾಖೆಯ ಉದ್ಘಾಟನಾ ಸಮಾರಂಭ ಏಪ್ರಿಲ್ 8ರಂದು ಬುಧವಾರ ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ.
https://chat.whatsapp.com/FCEnlTkAKCC0MGPhXtX4i4
ಬೆಳ್ಳಂಪಳ್ಳಿ ಶಾಖೆಯ ವಠಾರದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಪರಮಪೂಜ್ಯ ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ, ಸರಸ್ವತೀ ಪೀಠ, ವೇಣುಗಿರಿ ಪಡುಕುತ್ಯಾರು ಇಲ್ಲಿಯ ಜಗದ್ಗುರು, ಅನಂತಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮೀಜಿಗಳವರು ಉದ್ಘಾಟನೆ ನೆರವೇರಿಸಿ ದೀಪ ಪ್ರಜ್ವಲನೆ ಮಾಡಿ ಆಶೀರ್ವಚನ ನೀಡಲಿದ್ದಾರೆ.
ಪರಮಪೂಜ್ಯ ಜಗದ್ಗುರು ಅನಂತಶ್ರೀ ವಿಭೂಷಿತ ಶಿವಸುಜ್ಞಾನ ತೀರ್ಥ ಮಹಾಸ್ವಾಮೀಜಿಗಳವರು ಶ್ರೀ ವಿಶ್ವಕರ್ಮ ಜಗದ್ಗುರು ಪೀಠ, ಅರೆಮಾದನಹಳ್ಳಿ, ವಿಶ್ವಬ್ರಾಹ್ಮಣ ಮಹಾಸಂಸ್ಥಾನ ಮಠ, ಅರಕಲಗೂಡು, ಹಾಸನ ಜಿಲ್ಲೆ ಇವರು ಆಶೀರ್ವಚನ ನೀಡುವರು.
ಎಸ್.ಕೆ.ಜಿ.ಐ. ಕೋ-ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಪಿ. ಉಪೇಂದ್ರ ಆಚಾರ್ಯ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬಿ.ಜಯಕರ ಶೆಟ್ಟಿ ಇಂದ್ರಾಳಿ, ಉಡುಪಿ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕರಾದ ಲಾವಣ್ಯ ಆರ್.ಕೆ, ರೈತರ ಸಹಕಾರಿ ಸಂಘ ನಿ.. ಹಿರಿಯಡ್ಕ ಇದರ ಅಧ್ಯಕ್ಷ ಬಿ.ಅಶೋಕ್ ಕುಮಾರ್ ಶೆಟ್ಟಿ, ನಿವೃತ್ತ ಮುಖ್ಯ ಶಿಕ್ಷಕ ಸೀತಾರಾಮ ಶೆಟ್ಟಿಗಾರ್ ಸಿ, ಶ್ರೀ ವಿಶ್ವಕರ್ಮ ಸಮಾಜೋದ್ಧಾರಕ ಸಂಘದ ಅಧ್ಯಕ್ಷ ಅಚ್ಚುತ ಆಚಾರ್ಯ, ಕಟ್ಟಡ ಮಾಲಕರಾದ ಪ್ರಸನ್ನ ಪ್ರಭು ಭಾಗವಹಿಸಲಿದ್ದಾರೆ.
ಸಂಘದ ಉಪಾಧ್ಯಕ್ಷ ಎ.ಆನಂದ ಆಚಾರ್ಯ, ಪ್ರಧಾನ ವ್ಯವಸ್ಥಾಪಕರಾದ ಯಜ್ನೇಶ್ವರ, ಶಾಖೆಯ ವ್ಯವಸ್ಥಾಪಕರಾದ (ಪ್ರಭಾರ) ಮೋಹನದಾಸ್ ಆಚಾರ್ಯ ಟಿ.ಬಿ. ಪಾಲ್ಗೊಳ್ಳಲಿದ್ದಾರೆ. ಆಡಳಿತ ಮಂಡಳಿ ನಿರ್ದೇಶಕರಾದ ಕೆ.ಯಜ್ನೇಶ್ವರ ಆಚಾರ್ಯ, ವೈ.ವಿ. ವಿಶ್ವಜ್ಞಮೂರ್ತಿ, ವಿ.ಜಯ ಆಚಾರ್, ಕೆ.ಶಶಿಕಾಂತ ಆಚಾರ್ಯ, ಮಲ್ಲಪ್ಪ ಎನ್. ಪತ್ತಾರ್, ರೋಹಿಣಿ ಎಂ.ಪಿ., ಜ್ಯೋತಿ ಎಂ.ವಿ., ರಮೇಶ್ ರಾವ್ ಯು., ಕೆ. ಪ್ರಕಾಶ್ ಆಚಾರ್ಯ, ಮಂಜುನಾಥ ಆಚಾರ್ಯ, ಚಂದ್ರಶೇಖರ ಎ.ಎಸ್. ಮತ್ತು ಸಿಬ್ಬಂದಿ ವರ್ಗ ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ.

