Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಬಂಟ್ವಾಳ ಕಥೋಲಿಕ್ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿಗೆ ರೂ.3.40 ಕೋಟಿ ನಿವ್ವಳ ಲಾಭ
    News

    ಬಂಟ್ವಾಳ ಕಥೋಲಿಕ್ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿಗೆ ರೂ.3.40 ಕೋಟಿ ನಿವ್ವಳ ಲಾಭ

    adminBy adminApril 8, 2026

    ಬಂಟ್ವಾಳ: ಬಿ.ಸಿ.ರೋಡಿನಲ್ಲಿ ಕೇಂದ್ರ ಕಛೇರಿ ಹೊಂದಿರುವ ಬಂಟ್ವಾಳ ಕಥೋಲಿಕ್ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿಯು 2025-26ನೇ ಸಾಲಿನಲ್ಲಿ ಒಟ್ಟು ರೂ.1400 ಕೋಟಿ ವ್ಯವಹಾರ ನಡೆಸಿದ್ದು ರೂ.3.40 ಕೋಟಿ ಲಾಭ ಗಳಿಸಿ, ಅತ್ಯುತ್ತಮ ಸಾಧನೆ ಮಾಡಿದೆ ಎಂದು ಸಂಘದ ಅಧ್ಯಕ್ಷರಾದ ಜೀವನ್ ಲಾಯ್ಡ್ ಪಿಂಟೋ ತಿಳಿಸಿದ್ದಾರೆ.

    https://chat.whatsapp.com/FCEnlTkAKCC0MGPhXtX4i4

    28 ವರ್ಷಗಳ ಇತಿಹಾಸವಿರುವ ಸಂಘವು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಂಟ್ವಾಳ ಹಾಗೂ ಮಂಗಳೂರು ತಾಲೂಕಿನಲ್ಲಿ ಒಟ್ಟು 10 ಶಾಖೆಗಳನ್ನು ಒಳಗೊಂಡು ಕಾರ್ಯಾಚರಿಸುತ್ತಿದೆ. 2026ರ ಮಾರ್ಚ್ ಅಂತ್ಯಕ್ಕೆ ಒಟ್ಟು 17,177 ಸದಸ್ಯರಿಂದ ರೂ.3.94 ಕೋಟಿ ಪಾಲು ಬಂಡವಾಳ, ರೂ.150 ಕೋಟಿ ಠೇವಣಿ ಸಂಗ್ರಹದೊಂದಿಗೆ ಹೊರಬಾಕಿ ಸಾಲ ರೂ.137 ಕೋಟಿ ಇರುವುದು.
    ಸಂಘದ ಒಟ್ಟು ವ್ಯವಹಾರ 1400 ಕೋಟಿ ಆಗಿದ್ದು, ಕಳೆದ ಸಾಲಿಗೆ ಹೋಲಿಸಿದಲ್ಲಿ ಶೇ. 40ರಷ್ಟು ಪ್ರಗತಿ ಸಾಧಿಸಿದೆ. ಸಂಘವು ರೂ.164 ಕೋಟಿ ದುಡಿಯುವ ಬಂಡವಾಳದೊಂದಿಗೆ, ಕ್ಷೇಮ ನಿಧಿ ಹಾಗೂ ಇತರ ನಿಧಿಗಳನ್ನು ಸೇರಿ ರೂ.11.46 ಕೋಟಿ ನಿಧಿಗಳನ್ನು, ರೂ. 32.71 ಕೋಟಿ ಧನವಿನಿಯೋಗಗಳನ್ನು ಹೊಂದಿದೆ. ಸದಸ್ಯರಿಗೆ ಉತ್ತಮ ಡಿವಿಡೆಂಡ್ ಪಾವತಿಯೊಂದಿಗೆ, ವ್ಯವಹಾರದಲ್ಲಿ ಆಧುನಿಕತೆಯನ್ನು ತರುವ ನಿಟ್ಟಿನಲ್ಲಿ ಸಂಘದ ಎಲ್ಲಾ ಶಾಖೆಗಳಲ್ಲಿ ಕೋರ್ ಬ್ಯಾಂಕಿಂಗ್ ತಂತ್ರಾಂಶವನ್ನು ಅಳವಡಿಸಿ, RTGS/NEFT, SMS Alert, E-Stamp ಸೌಲಭ್ಯದೊಂದಿಗೆ, ಆಕರ್ಷಕ ಬಡ್ಡಿ ದರಗಳನ್ನು ಗ್ರಾಹಕ ಸದಸ್ಯರಿಗೆ ನೀಡುತ್ತ ಬಂದಿರುತ್ತದೆ. ಸಂಘದಲ್ಲಿ ಗ್ರಾಹಕರನ್ನು ವೃದ್ಧಿಸುವ ಸಲುವಾಗಿ ಹೊಸ ಶಾಖೆಗಳನ್ನು ತೆರೆಯುವ ಯೋಜನೆ ಪ್ರಗತಿಯಲ್ಲಿದೆ.
    ಸಂಸ್ಥೆಯ ಪ್ರಧಾನ ಕಛೇರಿ, ಬಿ.ಸಿ.ರೋಡು ಶಾಖೆ ಹಾಗೂ ಫರಂಗಿಪೇಟೆ ಶಾಖೆಯು ಸ್ವಂತ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿದ್ದು, ಸಂಘದ ಕನಸೆಂದು ಬಿಂಬಿತವಾದ, ಸುಸಜ್ಜಿತ ಕೇಂದ್ರ ಕಛೇರಿಯ ಕಟ್ಟಡದ ಯೋಜನೆಯು ಜಾರಿಯಲ್ಲಿದೆ. ಸಂಘವು ಸಮಾಜಮುಖಿ ಕಾರ್ಯಗಳಿಗೆ, ಸಂಘ ಸಂಸ್ಥೆಗಳಿಗೆ ಆರ್ಥಿಕ ನೆರವು ನೀಡುವುದರ ಜೊತೆಗೆ, ಸದಸ್ಯರ ವೈದ್ಯಕೀಯ ಚಿಕಿತ್ಸಾ ವೆಚ್ಚ ಹಾಗೂ ಆರ್ಥಿಕವಾಗಿ ಹಿಂದುಳಿದ ಮಕ್ಕಳ ಶಿಕ್ಕಣಕ್ಕಾಗಿ ನೆರವು ನೀಡಿದೆ. ಸಮಾಜದಲ್ಲಿ ಉತ್ತಮ ಸಾದನೆ ಮಾಡಿದ ಸಾಧಕರಿಗೆ ಗುರುತಿಸಿ ಗೌರವಿಸಿದೆ.
    ಸಂಘವು ಸಹಕಾರ ಇಲಾಖೆಯ ಆದೇಶದಂತೆ, ಆಡಳಿತ ಮಂಡಳಿಯ ಉತ್ತಮ ನಿರ್ಣಯಗಳಿಂದ ಹಾಗೂ ಸಿಬ್ಬಂದಿಗಳ ಉತ್ತಮ ಕಾರ್ಯವೈಖರಿಂದ ಪ್ರಗತಿಯ ಹಾದಿಯಲ್ಲಿ ಮುನ್ನುಗ್ಗುತ್ತಿದ್ದು, ಇದರ ಪ್ರತಿಫಲವೆಂಬಂತೆ ಸಹಕಾರ ಇಲಾಖೆ ಹಾಗೂ ಎಂ.ಸಿ.ಎಸ್ ಬ್ಯಾಂಕ್ ಮೂಡುಬಿದಿರೆ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಇವರಿಂದ ಒಟ್ಟು 10 ಬಾರಿ ಸಾಧನಾ ಪ್ರಶಸ್ತಿ ಪಡೆದಿದೆ.
    ಸಂಘದ ಈ ಎಲ್ಲಾ ಸಾಧನೆಗೆ ಸಹಕರಿಸಿದ ಸದಸ್ಯರಿಗೆ, ಸಿಬ್ಬಂದಿ ವರ್ಗಕ್ಕೆ ಅಧ್ಯಕ್ಷರಾದ ಜೀವನ್ ಲಾಯ್ಡ್ ಪಿಂಟೊ ಹಾಗೂ ಉಪಾಧ್ಯಕ್ಷರಾದ ವಲೇರಿಯನ್ ಬರೆಟ್ರೊ ಆಡಳಿತ ಮಂಡಳಿಯ ಪರವಾಗಿ ಕೃತಜ್ಞತೆ ಸಲ್ಲಿಸಿದ್ದಾರೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
    EMAIL: sahakaraspandana@gmail.com

    Bantwala Catholic Credit Cooperative Society Co Operative ministry Cooperative Cooperative Department Jeevan Loyd Pinto
    Previous Articleಅಭೂತಪೂರ್ವ ಪ್ರಗತಿ ದಾಖಲಿಸಿದ ಪುತ್ತೂರು ಕೋ-ಆಪರೇಟಿವ್ ಟೌನ್ ಬ್ಯಾಂಕ್
    Next Article ಸಹಕಾರಿ ಸಂಘಗಳು ಸಮಾಜಮುಖಿಯಾಗಿ ಬೆಳವಣಿಗೆ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.