Close Menu
    Top News

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳ ಎನ್‌ಪಿಎ 21,769 ಕೋಟಿ ರೂ.ಗೆ ಇಳಿಕೆ

    July 23, 2026

    ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಎನ್‌ಸಿಡಿಸಿ 5.74 ಕೋಟಿ ರೂ. ವಿತರಣೆ

    July 23, 2026

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಡಿಜಿಟಲ್‌ ಸೇವೆಗೆ ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆ
    News

    ಡಿಜಿಟಲ್‌ ಸೇವೆಗೆ ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆ

    adminBy adminApril 16, 2026

    ಎಸ್‌ಸಿಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಡಾ.ಎಂ.ಎನ್‌ ರಾಜೇಂದ್ರ ಕುಮಾರ್‌ ಅಭಿಪ್ರಾಯ

    ಮಂಗಳೂರು: ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ನವೀನ ಹೆಜ್ಜೆ ಇಟ್ಟಿರುವ ಎಸ್‌ಸಿಡಿಸಿಸಿ ಬ್ಯಾಂಕ್, ಯುಪಿಐ ಮತ್ತು ಐಎಂಪಿಎಸ್ ಸೌಲಭ್ಯಗಳನ್ನು ಪರಿಚಯಿಸುವ ಮೂಲಕ ಗ್ರಾಹಕರಿಗೆ ಆಧುನಿಕ ಹಾಗೂ ವೇಗವಾದ ಹಣಕಾಸು ಸೇವೆಗಳನ್ನು ಒದಗಿಸುತ್ತಿದೆ. ಈ ಹೊಸ ಯೋಜನೆಗಳಿಗೆ ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂದು ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ತಿಳಿಸಿದ್ದಾರೆ.

    https://chat.whatsapp.com/FCEnlTkAKCC0MGPhXtX4i4
    ಬ್ಯಾಂಕ್‌ನಲ್ಲಿ ಬುಧವಾರ ಆಯೋಜಿಸಲಾದ ಡಿಜಿಟಲ್ ಬ್ಯಾಂಕಿಂಗ್ ಹಾಗೂ ಸೈಬರ್ ಭದ್ರತೆ ಕುರಿತ ತರಬೇತಿ ಶಿಬಿರ ಉದ್ಘಾಟಿಸಿ ಮಾತನಾಡಿದ ಅವರು, ಇಂದಿನ ಬ್ಯಾಂಕಿಂಗ್ ಕ್ಷೇತ್ರದಲ್ಲಿ ತ್ವರಿತ ಮತ್ತು ಸುರಕ್ಷಿತ ಸೇವೆಗಳು ಅತ್ಯಗತ್ಯವಾಗಿದ್ದು, ಗ್ರಾಹಕರ ನಿರೀಕ್ಷೆಗಳಿಗೆ ತಕ್ಕಂತೆ ಸೇವೆಗಳನ್ನು ವಿಸ್ತರಿಸುವುದು ಬ್ಯಾಂಕಿನ ಪ್ರಮುಖ ಗುರಿಯಾಗಿದೆ ಎಂದರು. ಬ್ಯಾಂಕ್ ಈಗಾಗಲೇ ಕೋರ್ ಬ್ಯಾಂಕಿಂಗ್ ವ್ಯವಸ್ಥೆಯೊಂದಿಗೆ ಆರ್‌ಟಿಜಿಎಸ್, ನೆಫ್ಟ್, ಸಿಟಿಎಸ್, ಎಸ್‌ಎಂಎಸ್ ಅಲರ್ಟ್, ಎಟಿಎಂ, ಮೊಬೈಲ್ ಬ್ಯಾಂಕಿಂಗ್ ಮತ್ತು ಪಿಒಎಸ್ ಸೇರಿದಂತೆ ಹಲವು ಡಿಜಿಟಲ್ ಸೇವೆಗಳನ್ನು ಯಶಸ್ವಿಯಾಗಿ ನೀಡುತ್ತಿದೆ. ಇತ್ತೀಚಿನ ತಾಂತ್ರಿಕ ಅಭಿವೃದ್ಧಿಗಳ ಹಿನ್ನೆಲೆಯಲ್ಲಿ, ಗ್ರಾಹಕರು ಮೊಬೈಲ್ ಅಪ್ಲಿಕೇಶನ್‌ಗಳ ಮೂಲಕ ಸುಲಭ ಮತ್ತು ವೇಗವಾದ ಸೇವೆಯನ್ನು ನಿರೀಕ್ಷಿಸುತ್ತಿದ್ದಾರೆ ಎಂದು ಹೇಳಿದರು. ಈ ಅಗತ್ಯವನ್ನು ಮನಗಂಡು, ಗ್ರಾಹಕರಿಗೆ ಇನ್ನಷ್ಟು ಸುಲಭ ಮತ್ತು ಸುರಕ್ಷಿತ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಯುಪಿಐ ಮತ್ತು ಐಎಂಪಿಎಸ್ ವ್ಯವಸ್ಥೆಗಳನ್ನು ಜಾರಿಗೆ ತರಲಾಗಿದೆ. ಈ ಸೇವೆಗಳ ಸಮರ್ಪಕ ಅನುಷ್ಠಾನಕ್ಕಾಗಿ ಬ್ಯಾಂಕ್ ಸಿಬ್ಬಂದಿಗೆ ವಿಶೇಷ ತರಬೇತಿ ನೀಡಲಾಗುತ್ತಿದೆ ಎಂದು ಅವರು ತಿಳಿಸಿದರು.
    ಕಾರ್ಯಕ್ರಮದಲ್ಲಿ ಬ್ಯಾಂಕಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋಪಾಲಕೃಷ್ಣ ಭಟ್, ಮಹಾಪ್ರಬಂಧಕ ಸುನೀಲ್ ಕುಮಾರ್ ಹೊಳ್ಳ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
    EMAIL: sahakaraspandana@gmail.com

    Core Banking Digital Banking Dr. M.N Rajendrakumar IMPS NEFT RTGS SCDCC Bank
    Previous Articleವಿಟ್ಲ ಗ್ರಾಮೀಣ ಸಹಕಾರಿ ಸಂಘ ಸಾರ್ವಕಾಲಿಕ ದಾಖಲೆಯ ವ್ಯವಹಾರ
    Next Article ಏಪ್ರಿಲ್ 19ರಂದು ಮೂಡುಬಿದಿರೆಯಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ 35ನೇ ಶಾಖೆ ಲೋಕಾರ್ಪಣೆ

    Related Posts

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳ ಎನ್‌ಪಿಎ 21,769 ಕೋಟಿ ರೂ.ಗೆ ಇಳಿಕೆ

    July 23, 2026

    ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಎನ್‌ಸಿಡಿಸಿ 5.74 ಕೋಟಿ ರೂ. ವಿತರಣೆ

    July 23, 2026

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳ ಎನ್‌ಪಿಎ 21,769 ಕೋಟಿ ರೂ.ಗೆ ಇಳಿಕೆ

    July 23, 2026

    ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಎನ್‌ಸಿಡಿಸಿ 5.74 ಕೋಟಿ ರೂ. ವಿತರಣೆ

    July 23, 2026

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.