ಮೂಡುಬಿದಿರೆ: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನೂತನ 35ನೇ ಶಾಖೆಯನ್ನು ಮೂಡುಬಿದಿರೆ ಮುಖ್ಯ ರಸ್ತೆಯ ಅಂಚೆ ಕಚೇರಿಯ ಮುಂಭಾಗದ ರಾಮಯ್ಯ ಕಾಂಪ್ಲೆಕ್ಸ್‌ನಲ್ಲಿ ಏಪ್ರಿಲ್ 19ರಂದು ಬೆಳಗ್ಗೆ 11 ಗಂಟೆಗೆ ಉದ್ಘಾಟಿಸಲಾಗುವುದು ಎಂದು ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
https://chat.whatsapp.com/FCEnlTkAKCC0MGPhXtX4i4
ಮೂಡುಬಿದಿರೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾನುವಾರ ಬೆಳಗ್ಗೆ 11ಕ್ಕೆ ಸಹಕಾರ ರತ್ನ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಅವರು ನೂತನ ಶಾಖೆಯನ್ನು ಉದ್ಘಾಟಿಸಲಿದ್ದಾರೆ. ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ಶಾಸಕ ಉಮಾನಾಥ ಕೋಟ್ಯಾನ್ ದೀಪ ಪ್ರಜ್ವಲನೆ ಮಾಡಲಿದ್ದಾರೆ. ಕರ್ನಾಟಕ ಸರ್ಕಾರದ ಹೆಚ್ಚುವರಿ ಅಡ್ವಕೇಟ್ ಜನರಲ್ ಐ. ತಾರಾನಾಥ ಪೂಜಾರಿ ಭದ್ರತಾ ಕೋಶ ಉದ್ಘಾಟಿಸಲಿದ್ದಾರೆ. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ ಆಳ್ವ ಗಣಕೀಕೃತ ಬ್ಯಾಂಕಿಂಗ್‌ಗೆ ಚಾಲನೆ ನೀಡಲಿದ್ದಾರೆ. ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ನಿರ್ದೇಶಕ ಭಾಸ್ಕರ್ ಎಸ್ ಕೋಟ್ಯಾನ್ ನಿರಖು ಠೇವಣಿ ಪತ್ರ ಬಿಡುಗಡೆ ಮಾಡಲಿದ್ದಾರೆ. ಮಾಜಿ ಸಚಿವ ಅಭಯಚಂದ್ರ ಜೈನ್ ಮೈಕ್ರೋ ಸಾಲ ಯೋಜನೆಗೆ ಚಾಲನೆ ನೀಡಲಿದ್ದಾರೆ. ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಸುರೇಶ್ ಕೆ. ಪೂಜಾರಿ ಇ-ಮುದ್ರಾಂಕ ಸೇವೆಗೆ ಚಾಲನೆ ನೀಡಲಿದ್ದಾರೆ. ವಕೀಲರ ಸಂಘದ ಅಧ್ಯಕ್ಷ ಹರೀಶ್ ಪಿ. ಉಳಿತಾಯ ಖಾತೆಗೆ, ಮೂಡುಬಿದಿರೆ ಪುರಸಭೆಯ ನಿಕಟಪೂರ್ವ ಉಪಾಧ್ಯಕ್ಷ ನಾಗರಾಜ್ ಪೂಜಾರಿ ಆವರ್ತನ ಖಾತೆಗೆ ಹಾಗೂ ದೇವಾಡಿಗ ಸುಧಾರಕ ಸಂಘದ ಅಧ್ಯಕ್ಷ ಪುರಂದರ ದೇವಾಡಿಗ ಪಿಗ್ನಿ ಖಾತೆಗೆ ಚಾಲನೆ ನೀಡಲಿದ್ದಾರೆ.
ಯುವವಾಹಿನಿ ಮೂಡುಬಿದಿರೆ ಘಟಕದ ಅಧ್ಯಕ್ಷ ಗಿರೀಶ್ ಕೋಟ್ಯಾನ್ ಮಾರೂರು, ಜಗದೀಶ್ಚಂದ್ರ ಡಿ.ಕೆ, ಸೀತಾರಾಮ್ ಆಚಾರ್ಯ, ಶ್ರೀಪತಿ ಭಟ್ ಹಾಗೂ ಕಟ್ಟಡದ ಮಾಲೀಕ ಸುರೇಶ್ ಆಚಾರ್ಯ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್ ಉಪಸ್ಥಿತರಿರಲಿದ್ದಾರೆ ಎಂದು ಮಾಹಿತಿ ನೀಡಿದರು.

ವಿಶೇಷ ಕೊಡುಗೆಗಳು:
ನೂತನ ಶಾಖೆಯ ಉದ್ಘಾಟನೆಯ ಪ್ರಯುಕ್ತ 500 ದಿನಗಳ ಠೇವಣಿಗಗೆ ಶೇ. 10 ಹಾಗೂ 1000 ದಿನಗಳ ಠೇವಣಿಗಳಿಗೆ ಶೇ.10.50ರಷ್ಟು ವಿಶೇಷ ಬಡ್ಡಿ ದರ ನೀಡಲಾಗುತ್ತಿದೆ. ಚಿನ್ನಾಭರಣ ಸಾಲಗಳಿಗೆ ಪ್ರತಿ ಗ್ರಾಂ ಗೆ ಗರಿಷ್ಠ ರೂ. 12,000 ರವರೆಗೆ ಯಾವುದೇ ಸೇವಾ ಶುಲ್ಕವಿಲ್ಲದೆ ಸಾಲ ಸೌಲಭ್ಯ ಕಲ್ಪಿಸಲಾಗುವುದು. ಶಾಖೆಯಲ್ಲಿ ಇ-ಮುದ್ರಾಂಕ, ನೆಫ್ಟ್, ಆರ್‌ಟಿಜಿಎಸ್ ಸೇವೆಗಳು ಹಾಗೂ ವಿವಿಧ ವಿಮಾ ಕಂಪೆನಿಗಳ ಸೌಲಭ್ಯಗಳು ಲಭ್ಯವಿರಲಿವೆ ಎಂದು ಚಿತ್ತರಂಜನ್ ಬೋಳಾರ್ ಮಾಹಿತಿ ನೀಡಿದರು.
ಸಂಘದ ಉಪಾಧ್ಯಕ್ಷ ನೇಮಿರಾಜ್ ಪೂಜಾರಿ, ನಿರ್ದೇಶಕ ಪರಮೇಶ್ವರ್ ಪೂಜಾರಿ, ಗೋಪಾಲ್ ಎನ್., ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್, ಗಂಜಿಮಠ ಶಾಖೆಯ ಮ್ಯಾನೇಜರ್ ಸಂದೀಪ್, ಮೂಡುಬಿದಿರೆ ಶಾಖೆಯ ಮ್ಯಾನೇಜರ್ ರವಿಕಲಾ ಸುದ್ದಿಗೋಷ್ಠಿಯಲ್ಲಿದ್ದರು.

